ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

BJP JDS alliance in Karnataka; ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಸೀಟು ಹಂಚಿಕೆ ಘೋಷಣೆ ಮಾಡುವುದು ಒಳ್ಳೆಯದು. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆಯೂ ಅವರ ಜತೆ ಚರ್ಚಿಸಿದ ನಂತರ ಅಧಿಕೃತ ಘೋಷಣೆ ಮಾಡಿದರೆ ಉತ್ತಮ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟರು.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ
ಅಮಿತ್ ಶಾ ನಿವಾಸದಲ್ಲಿ ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಇತರರು
Edited By:

Updated on: Sep 22, 2023 | 6:35 PM

ನವದೆಹಲಿ, ಸೆಪ್ಟೆಂಬರ್ 22: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಎದುರಿಸುವ ದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ (BJP JDS Alliance) ಮೈತ್ರಿ ಮಾಡಿಕೊಳ್ಳುವ ಬಗ್ಗೆ ಒಪ್ಪಂದಕ್ಕೆ ಬಂದಿವೆ. ಈ ವಿಚಾರವಾಗಿ ಶುಕ್ರವಾರ ಸಂಜೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಇತರರು ಒಮ್ಮತಕ್ಕೆ ಬಂದಿದ್ದಾರೆ. ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಕುಮಾರಸ್ವಾಮಿ, ಅಮಿತ್ ಶಾ, ನಡ್ಡಾ, ನಿಖಿಲ್ ಕುಮಾರಸ್ವಾಮಿ ಕುಪೇಂದ್ರ ರೆಡ್ಡಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿದ್ದರು. ಸಭೆಯಲ್ಲಿ ಏನೇನು ಚರ್ಚೆಯಾಯಿತು ಎಂಬ ಮಾಹಿತಿ ಇಲ್ಲಿದೆ.

ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೀಟು ಹಂಚಿಕೆ ಮಾಡುವುದು ಒಳಿತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಜೊತೆ ಚರ್ಚಿಸಿ ಸೀಟು ಹಂಚಿಕೆ ಘೋಷಣೆ ಮಾಡುವುದು ಒಳ್ಳೆಯದು. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆಯೂ ಅವರ ಜತೆ ಚರ್ಚಿಸಿದ ನಂತರ ಅಧಿಕೃತ ಘೋಷಣೆ ಮಾಡಿದರೆ ಉತ್ತಮ ಎಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: BJP JDS Alliance: ಬಿಜೆಪಿ ಜೆಡಿಎಸ್ ಮೈತ್ರಿ ಅಂತಿಮ; ಮಾತುಕತೆಯ ನಂತರ ಹೆಚ್​ಡಿಕೆ ಹೇಳಿದ್ದಿಷ್ಟು

ವಿಜಯದಶಮಿ ಹಬ್ಬದ ಬಳಿಕ ರಾಜ್ಯ ನಾಯಕರೊಂದಿಗೆ ಚರ್ಚಿಸೋಣ. ರಾಜ್ಯ ನಾಯಕರೊಂದಿಗೆ ನಾವು ಚರ್ಚೆ ನಡೆಸೋಣ. ಮೈತ್ರಿ, ಸೀಟು ಹಂಚಿಕೆ ಬಗ್ಗೆ ಅವರ ಅಭಿಪ್ರಾಯ ಸಂಗ್ರಹಿಸುವುದು ಒಳ್ಳೆಯದು. ಸೀಟು ಹಂಚಿಕೆ ಬಗ್ಗೆ ಹಿರಿಯ ನಾಯಕರ ಅಭಿಪ್ರಾಯ ಅಗತ್ಯವಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮನಸ್ಥಿತಿಯನ್ನು ಹೊಂದಿಸಬೇಕಿದೆ. ಲೋಕಸಭಾ ಚುನಾವಣೆಗೆ ಮತದಾರರ ಮನಸ್ಥಿತಿ ಹೊಂದಿಸಬೇಕಿದೆ. ಇದಕ್ಕೆ ನಾಯಕರು ಒಂದಷ್ಟು ಜಂಟಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕೆಳ ಮಟ್ಟದಲ್ಲಿ ಹೊಂದಾಣಿಕೆ ಆಗದಿದ್ದರೆ ಪ್ರಯತ್ನ ವ್ಯರ್ಥವಾಗಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ವಿವರವಾಗಿ ಚರ್ಚಿಸೋಣ ಎಂದು ಎರಡೂ ಪಕ್ಷಗಳ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ.


ಈ ಮಧ್ಯೆ, ಆರು ಸ್ಥಾನಗಳಿಗೆ ಜೆಡಿಎಸ್​​ ಬೇಡಿಕೆ ಇಟ್ಟಿದೆ ಎಂದೂ ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us