ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ; ಡಿಕೆ ಶಿವಕುಮಾರ್

|

Updated on: May 15, 2023 | 4:59 PM

ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅಧಿಕಾರ ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಬಗ್ಗೆ ವಿಶ್ವಾಸ ಇದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ; ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us on

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿರುವ ನಡುವೆಯೇ ಹಲವು ರಾಜಕೀಯ ವಿದ್ಯಮಾನಗಳು ನಡೆದಿವೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಇಂದು ನನ್ನ ಹುಟ್ಟುಹಬ್ಬ. ಗುರುಗಳನ್ನು ಭೇಟಿ ಮಾಡಬೇಕು. ನನ್ನ ಖಾಸಗಿ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುತ್ತೇನೆ. ನಾನು ಯಾರ ಸಂಖ್ಯಾಬಲದ ಬಗ್ಗೆಯೂ ಮಾತನಾಡಲು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಹೊಂದಿದೆ. ನನ್ನ ಅಧ್ಯಕ್ಷ ಸ್ಥಾನದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ ಎಂದು ಹೇಳಿದ್ದಾರೆ.

ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ನಿರ್ಣಯ ಅಂಗೀಕರಿಸಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾದ ನನಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೋ ಹೋರಾಟ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ‌. ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು‌ ಮಾತುಕೊಟ್ಟಿದ್ದೆ‌. ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್. ನಾನು ದೈರ್ಯದಲ್ಲಿ ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ. ನಾನು ಸಿಂಗಲ್ ಮ್ಯಾನ್. ಗಾಂಧಿ ಒಂದು ಮಾತು ಹೇಳಿದ್ರು. ಸೋತಾಗ ದೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು. 15 ಜನ ಶಾಸಕರು ಪಕ್ಷ ಬಿಟ್ಟು ಹೋದಾದ ಬೇಸರ ಆಗಿಲ್ಲ. ಧೈರ್ಯದಿಂದ ಆ ಸಂದರ್ಭದಲ್ಲಿ ಹೆದಿರಿಸುತ್ತಿದ್ದೆ. ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅಧಿಕಾರ ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಬಗ್ಗೆ ವಿಶ್ವಾಸ ಇದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮುಸ್ಲಿಂ ಉಪಮುಖ್ಯಮಂತ್ರಿ ಭಾಗ್ಯ, ಜೊತೆಗೆ ಲಿಂಗಾಯತ ಮತ್ತು ಒಕ್ಕಲಿಗ ಡಿಸಿಎಂ ಸಹ! ಏನಿದರ ಲೆಕ್ಕಾಚಾರ?

ಇದಕ್ಕೂ ಮುನ್ನ ಅವರು ಬಾಗಲೂರು ಬಳಿಯ ಫಾರ್ಮ್​ಹೌಸ್​ನಲ್ಲಿ ಬೆಂಬಲಿಗರ ಜತೆ ಸಭೆ ನಡೆಸಿದ್ದರು. ಅಲ್ಲಿ ಮಾತನಾಡಿದ್ದ ಅವರು, ಸಿಎಂ ಹುದ್ದೆಗೆ ಎಲ್ಲರೂ ಆಸೆ ಪಡಲಿ. ಆದರೆ, ನಾವು ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದೇವೆ. ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Mon, 15 May 23