AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಎನ್ನುವುದು ಏನು? ಉತ್ತರಿಸುವಂತೆ ಬಿಜೆಪಿ ನಾಯಕರಿಗೆ ಬಿಕೆ ಹರಿಪ್ರಸಾದ್ ಸವಾಲು

ಪ್ರಧಾನಿ ಮೋದಿಯವರು ಆರ್​ಎಸ್​ಎಸ್ ಶ್ಲಾಘಿಸಿದ್ದನ್ನು ಕಾಂಗ್ರೆಸ್​ ನಾಯಕರು ವಿರೋಧಿಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಆರ್​ಎಸ್​ಎಸ್​ ಭಾರತದ ತಾಲಿಬಾನ್ ಎಂದಿದ್ದಾರೆ. ಬಿಕೆ ಹರಿಪ್ರಸಾದ್​ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ಈ ಸಂಬಂಧ ಇಬ್ಬರು ನಾಯಕರ ನಡುವೆ ಟ್ವೀಟ್​ ವಾರ ನಡೆಯುತ್ತಿದೆ. ಬಿವೈ ವಿಜಯೇಂದ್ರ ವಿರುದ್ಧ ಬಿಕೆ ಹರಿಪ್ರಸಾದ್​ ವಾಗ್ದಾಳಿ ಮಾಡಿದ್ದಾರೆ.

RSS ಎನ್ನುವುದು ಏನು? ಉತ್ತರಿಸುವಂತೆ ಬಿಜೆಪಿ ನಾಯಕರಿಗೆ ಬಿಕೆ ಹರಿಪ್ರಸಾದ್ ಸವಾಲು
ಬಿವೈ ವಿಜಯೇಂದ್ರ, ಬಿಕೆ ಹರಿಪ್ರಸಾದ್​
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ|

Updated on:Aug 17, 2025 | 6:21 PM

Share

ಬೆಂಗಳೂರು, ಆಗಸ್ಟ್​ 17: ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್​ಎಸ್​ಎಸ್ (RSS)​, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ. ನನ್ನ ಸುಧೀರ್ಘ ರಾಜಕೀಯ ಜೀವನದಲ್ಲಿ ಸಂಘ ಪರಿವಾರದ ಆಳ ಅಗಲ ಅಷ್ಟೇ ಅಲ್ಲ, ಅದರ ಸುತ್ತಳತೆಯನ್ನೂ ಬಲ್ಲೆ ಎಂದು ವಿಧಾನಪರಿಷತ್​ ಸದಸ್ಯ ಬಿಕೆ ಹರಿಪ್ರಸಾದ್​ (BK Hariprasad) ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಉದ್ದೇಶಿಸಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್, “ಆರ್.ಎಸ್.ಎಸ್. ನೂರು ವರ್ಷಗಳಲ್ಲಿ ನಡೆಸಿರುವ ಸಮಾಜ ಸೇವೆಯ ಎಣಿಕೆಯ ಲೆಕ್ಕ ನಂತರ ಕೊಡುವಿರಂತೆ, ಸಂಘ ನಡೆಸಿದ ಸಮಾಜ ಘಾತುಕ ಕೃತ್ಯಗಳ ದಾಖಲೆಗಳೇ ಹೇಳುವ ಲೆಕ್ಕಾ ಗೊತ್ತಾ? ಸಮಾಜ ಸೇವೆ ಎಂಬುವುದು ಕೇವಲ ಮುಖವಷ್ಟೇ, ಅದರ ಹಿಂದಿನ ಮುಖವಾಡಗಳು ಸಂವಿಧಾನಬಾಹೀರ ಚಟುವಟಿಕೆಗಳಿಗೆ ಲೆಕ್ಕವಿಲ್ಲ. ಅಗೆದಷ್ಟು, ಬಗೆದಷ್ಟು ಕರಾಳವಾಗಿದೆ” ಎಂದಿದ್ದಾರೆ.

“ಆರ್.ಎಸ್.ಎಸ್ ಶಾಖೆಯಲ್ಲಿ ಮಾತ್ರ ಪ್ರವೇಶ ಇರುವ ವಿಜಯೇಂದ್ರ ಅವರೇ ಸಂಘವನ್ನು ಸಮರ್ಥಿಸುವ ಮೊದಲು ನನ್ನ ಪ್ರಶ್ನೆಗೆ ಉತ್ತರಿಸುವ ಧೈರ್ಯ ಮಾಡಿ” ಎಂದರು.

“ಮೂಲಭೂತವಾಗಿ ಆರ್.ಎಸ್.ಎಸ್. ಎನ್ನುವುದು ಏನು? ಅದೊಂದು ಸಾಂಸ್ಕೃತಿಕ ಸಂಘಟನೆಯೇ? ಸಾಮಾಜಿಕ ಸೇವಾ ಸಂಸ್ಥೆಯೇ? ಸಾರ್ವಜನಿಕ ದತ್ತಿಯೇ? ಗುಪ್ತ ರಾಜಕೀಯ ಉದ್ದೇಶ ಹೊಂದಿರುವ ಕಾರ್ಯಕರ್ತರ ಕೂಟವೇ? ಇಲ್ಲವೇ, ಕೇವಲ ಹಿಂದೂ ಸಂಘಟನೆಯೇ.?” ಎಂದು ಪ್ರಶ್ನಿಸಿದ್ದಾರೆ.

ಟ್ವಿಟರ್ ಪೋಸ್ಟ್​

“ಸಮಾಜ ಸೇವೆಯ ಮುಖ ಹೊತ್ತಿರುವ ಆರ್.ಎಸ್.ಎಸ್.‌ ನೊಂದಣಿ ಸಂಘಟನೆಯೇ? ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಸಂಘಟನೆಯ ಹಣದ ಮೂಲ ಯಾವುದು? ಜನರು ನೀಡುವ ದೇಣಿಗೆಯ ಲೆಕ್ಕಪತ್ರ ಒಮ್ಮೆಯಾದರೂ ಬಹಿರಂಗಗೊಳಿಸಿದ್ದೀರಾ? ಚೆಕ್ ಮೂಲಕ ಲಂಚ ಪಡೆಯುವ ನಿಮಿಗೆ ಸಂಘದ ಲೆಕ್ಕಪತ್ರ ಕೇಳುವ ಧೈರ್ಯ ಎಲ್ಲಿಂದ ಬರಬೇಕು ಬಿಡಿ” ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: RSS ಭಾರತ ದೇಶದ ತಾಲಿಬಾನ್: ವಿವಾದದ ಕಿಡಿಹೊತ್ತಿಸಿದ ಕೈ ಹಿರಿಯ ನಾಯಕ ಬಿಕೆ ಹರಿಪ್ರಸಾದ್

“ಹಿಂದೂ ನಾವೆಲ್ಲ ಒಂದು ಎನ್ನುತ್ತಲೇ ಚಾತುರ್ವರ್ಣ ವ್ಯವಸ್ಥೆಯನ್ನು ಪಾಲಿಸುವ ಸಂಘಕ್ಕೆ ಹಿಂದೂ ಎನ್ನುವುದು ಕೇವಲ ರಾಜಕೀಯದ ಲಾಭ ಪಡೆಯಲು ಬಳಸುವ ಆಯುಧ ಅಷ್ಟೇ. ನಮಗೆ ರಾಜಕೀಯ ಎದುರಾಳಿ ಬಿಜೆಪಿ ಅಲ್ಲವೇ ಅಲ್ಲ, ರಾಜಕೀಯದ ಮುಖವಾಡ ಹೊಂದಿರುವ ಆರ್.ಎಸ್.ಎಸ್. ನಮ್ಮ ಸೈದ್ದಾಂತಿಕ ವಿರೋಧಿ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆರ್.ಎಸ್.ಎಸ್ ಬಗ್ಗೆ ಮಾತಾಡುವುದಕ್ಕೆ ಧೈರ್ಯ ಮಾತ್ರವಲ್ಲ, ಪ್ರಮಾಣಿಕತೆಯೂ ಇದೆ. ಅದರ ಹಿಡನ್ ಅಜೆಂಡಾಗಳನ್ನು ಸ್ಷಷ್ಟವಾಗಿ ಅರಿತಿದ್ದೇನೆ. ಸಂಘದ ಬಗ್ಗೆ ಮಾತಾಡಲು ಪ್ರೇರೇಪಿಸಿ ನನ್ನ ಮುಂದೆ ಸೈದ್ದಾಂತಿಕವಾಗಿ ಬೆತ್ತಲಾಗಬೇಡಿ. ರಾಜಕೀಯದ ಎಳಸುಗಾರಿಕೆ ಬಿಟ್ಟು ಒಂದಿಷ್ಟು ಪ್ರಬುದ್ಧತೆಗೆ ತೆರೆದುಕೊಳ್ಳಿ” ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Sun, 17 August 25