AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಚುನಾವಣಾ ಗಿಮಿಕ್; ಚೆಲುವರಾಯಸ್ವಾಮಿ ಏನೋ ಹೇಳಲು ಹೋಗಿ ಏನೋ ಹೇಳಿರಬೇಕೆಂದ ಸತೀಶ್ ಜಾರಕಿಹೊಳಿ

ಅಧಿಕಾರಕ್ಕೆ ಬಂದ 15 ದಿನಗಳಲ್ಲೇ ಗ್ಯಾರಂಟಿ ಜಾರಿ ಮಾಡಿದ್ದೇವೆ. ಹೀಗಾಗಿ ಆ ಬಗ್ಗೆ ಪ್ರಶ್ನೆ ಬರಲ್ಲ. ಗ್ಯಾರಂಟಿ ಯೋಜನೆ ಜಾರಿ ಮಾಡದೇ ಹೇಳಿದ್ರೆ ಅದಕ್ಕೆ ಮಹತ್ವ ಇರುತ್ತಿತ್ತು. ಈಗ ಆ ಪ್ರಶ್ನೆಗೆ ಮೌಲ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಗ್ಯಾರಂಟಿ ಚುನಾವಣಾ ಗಿಮಿಕ್; ಚೆಲುವರಾಯಸ್ವಾಮಿ ಏನೋ ಹೇಳಲು ಹೋಗಿ ಏನೋ ಹೇಳಿರಬೇಕೆಂದ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
ಗಣಪತಿ ಶರ್ಮಾ
|

Updated on: Jun 07, 2023 | 6:09 PM

Share

ಬೆಂಗಳೂರು: ಉಚಿತ ಗ್ಯಾರಂಟಿಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್​ಗಳನ್ನು ಮಾಡಲಾಗಿದೆ ಎಂಬ ಕೃಷಿ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಚೆಲುವರಾಯಸ್ವಾಮಿ ಏನೋ ಹೇಳಲು ಹೋಗಿ ಏನೋ ಹೇಳಿರಬೇಕು ಎಂದು ಸಮಜಾಯಿಷಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಚೆಲುವರಾಯಸ್ವಾಮಿ ಏನೋ ಹೇಳಲು ಹೋಗಿ ಏನೋ ಹೇಳಿರಬೇಕು. ಮಂತ್ರಿಗಳು ಏನೇ ಹೇಳಲಿ, ನಾವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಅಧಿಕಾರಕ್ಕೆ ಬಂದ 15 ದಿನಗಳಲ್ಲೇ ಗ್ಯಾರಂಟಿ ಜಾರಿ ಮಾಡಿದ್ದೇವೆ. ಹೀಗಾಗಿ ಆ ಬಗ್ಗೆ ಪ್ರಶ್ನೆ ಬರಲ್ಲ. ಗ್ಯಾರಂಟಿ ಯೋಜನೆ ಜಾರಿ ಮಾಡದೇ ಹೇಳಿದ್ರೆ ಅದಕ್ಕೆ ಮಹತ್ವ ಇರುತ್ತಿತ್ತು. ಈಗ ಆ ಪ್ರಶ್ನೆಗೆ ಮೌಲ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕಾಂಗ್ರೆಸ್​ ಪಕ್ಷವು ರಾಜ್ಯದಲ್ಲಿ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೇರಲು ಚುನಾವಣಾಪೂರ್ವದಲ್ಲಿ ಘೋಷಿಸಿದ್ದ ಉಚಿತ ಗ್ಯಾರಂಟಿಗಳು ಬಹಳ ಮಹತ್ವದ್ದು ಎನ್ನಲಾಗಿವೆ. ಬಡ ಜನರ, ಮಧ್ಯಮವರ್ಗದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಗ್ಯಾರಂಟಿಗಳನ್ನು ಘೋಷಿಸಿದ್ದಾಗಿ ಕಾಂಗ್ರೆಸ್ ಹೇಳಿತ್ತು. ಅವುಗಳು ಅನುಷ್ಠಾನ ಹಂತದಲ್ಲಿರುವಾಗಲೇ ಚೆಲುವರಾಯಸ್ವಾಮಿ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಇದನ್ನೂ ಓದಿ: ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ಅಷ್ಟೇ ಎಂದ ಸಚಿವ ಚೆಲುವರಾಯಸ್ವಾಮಿ; ಇನ್ನೂ ಏನೇನಂದ್ರು? ವಿಡಿಯೋ ನೋಡಿ

ಗ್ಯಾರಂಟಿಗಳ ಬಗ್ಗೆ ಏನು ಹೇಳಿದ್ದರು ಚೆಲುವರಾಯಸ್ವಾಮಿ?

ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲ ಚರ್ಚೆಯಾಯಿತು. ನಾವು ಕೂಡ ಚರ್ಚೆ ಮಾಡಿದೆವು. ಇದು ಒಳ್ಳೆಯದಲ್ಲ ಎಂಬುದಾಗಿ. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟಬಹುದು ಅಂತ. ಈಗ ನಾವುಗಳೂ ಅದೇ ಲೈನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್, ಸರ್ಕಾರ ಬಂದ್ರೆ ತಾನೇ ನಾವೇನಾದ್ರೂ ಮಾಡಲು ಸಾಧ್ಯವಾಗುವುದು? ಅಧಿಕಾರ ಸಿಕ್ಕಿದರೆ ತಾನೇ ನಾವು ಕೆಲಸ ಮಾಡಲು ಸಾಧ್ಯವಾಗುವುದು ಅನ್ನುವ ದೃಷ್ಟಿ ಬಂದಾಗ ಆವತ್ತಿಗೆ ರಿಸಲ್ಟ್ ಅನಿವಾರ್ಯ ಆಗುತ್ತದೆ. ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯಲಾರಿಟಿ, ಇಲ್ಲದ್ದು ಬಲ್ಲದ್ದು ಎಲ್ಲ ಮಾಡ್ತೀವಿ. ಬಟ್ ನಮ್ಮ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ, ಸಿದ್ದರಾಮಯ್ಯನವರ ಮನಸಿಗೆ ಇಷ್ಟ ಆಗ್ತದೋ ಇಲ್ಲವೋ ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ಆ್ಯಕ್ಸೆಪ್ಟ್ ಮಾಡಬೇಕಾಗುತ್ತದೆ ಎಂದು ಚೆಲುವರಾಯಸ್ವಾಮಿ ಹೇಳಿದ ವಿಡಿಯೋ ಮಂಗಳವಾರ ವೈರಲ್ ಆಗಿತ್ತು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು