ಧಾರವಾಡದಿಂದ ಲಿಂಗಾಯತ ಸ್ವಾಮೀಜಿ ಸ್ಪರ್ಧೆ: ಯಾರು ಈ ದಿಂಗಾಲೇಶ್ವರ ಶ್ರೀ? ರಾಜಕೀಯಕ್ಕೆ ಧುಮುಕಲು ಕಾರಣ ಇಲ್ಲಿದೆ

ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದರಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣ vs ಲಿಂಗಾಯತ ಸ್ಪರ್ಧೆ ಏರ್ಪಟ್ಟಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 6.5 ರಿಂದ 7 ಲಕ್ಷ ಲಿಂಗಾಯತರು ಇದ್ದಾರೆ.

ಧಾರವಾಡದಿಂದ ಲಿಂಗಾಯತ ಸ್ವಾಮೀಜಿ ಸ್ಪರ್ಧೆ: ಯಾರು ಈ ದಿಂಗಾಲೇಶ್ವರ ಶ್ರೀ? ರಾಜಕೀಯಕ್ಕೆ ಧುಮುಕಲು ಕಾರಣ ಇಲ್ಲಿದೆ
ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ
Follow us
ವಿವೇಕ ಬಿರಾದಾರ
|

Updated on:Apr 08, 2024 | 1:46 PM

ಧಾರವಾಡ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಅವರೇ ಸ್ಪರ್ಧಿಸುವ ಮೂಲಕ ಐದನೇ ಬಾರಿಗೆ ಕಣಕ್ಕಿಳಿದಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಯುವ ಕಾಂಗ್ರೆಸ್​ ಘಟಕದ ಜಿಲ್ಲಾ ಅಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ. ಪ್ರಹ್ಲಾದ್​ ಜೋಶಿಗೆ ಪ್ರತಿಸ್ಪರ್ಧಿಯಾಗಿ ವಿನೋದ ಅಸೂಟಿ ಹೆಸರು ಘೋಷಿಸಿದ ನಂತರವೂ ಕ್ಷೇತ್ರದಲ್ಲಿ ಅಷ್ಟೊಂದು ಬೆಳವಣಿಗೆಗಳು ಕಂಡು ಬರಲಿಲ್ಲ. ಆದರೆ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿಯ (Dingaleshwar Swamiji) ಆಗಮನದವರೆಗೂ ಶಾಂತವಾಗಿಯೇ ಇದ್ದ ಕ್ಷೇತ್ರ, ಸ್ವಾಮೀಜಿಯವರ ಆಗಮನದ ನಂತರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಸದ್ಯ ಕ್ಷೇತ್ರದಲ್ಲಿ ಬ್ರಾಹ್ಮಣ vs ಲಿಂಗಾಯತ ಸಮುದಾಯ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಯಾರು ಈ ದಿಂಗಾಲೇಶ್ವರ ಸ್ವಾಮೀಜಿ

ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸದಾ ಒಂದಲ್ಲ ಒಂದು ವಿವಾದಿಂದ ಸುದ್ದಿಯಲ್ಲಿದ್ದಾರೆ. ಕೋಮು ಸೌಹಾರ್ದ, ಜಾತ್ಯಾತೀತ ಹೋರಾಟ, ಎಡಪಂಥೀಯ ದೃಷ್ಟಿಕೋನದಿಂದ ಬೆಳೆದು ಬಂದಿದ್ದಾರೆ.  ಹುಬ್ಬಳ್ಳಿಯ ಮೂರುಸಾವಿರ ಮಠದ ಉತ್ತರಾಧಿಕಾರಕ್ಕಾಗಿ ಹೋರಾಟ ನಡೆಸಿದ್ದರು. ಇನ್ನೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪವೂ ಇವರ ಮೇಲೆ ಕೇಳಿ ಬಂದಿತ್ತು. ಭಾವೈಕ್ಯತೆ ಸೇರಿದಂತೆ ಮಠದ ವಿಷಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಅವರು ಗಮನ ಸೆಳೆದವರು.

ದಿಂಗಾಲೇಶ್ವರ ಸ್ವಾಮೀಜಿ ಅವರ ಪೂರ್ವಾಶ್ರಮ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದವರು. ವೀರಶೈವ ಲಿಂಗಾಯತ ಸಮುದಾಯದ ದಿಂಗಾಲೇಶ್ವರ ಸ್ವಾಮೀಜಿ 1995ರ ಏ. 20ರಂದು ಗದಗ ಜಿಲ್ಲೆಯ ಶಿರಹಟ್ಟಿಯ ಬಾಳೇಹೊಸೂರ ಗ್ರಾಮದ ಶ್ರೀ ದಿಂಗಾಲೇಶ್ವರಮಠದ ಆರನೇಯ ಮಠಾಧಿಪತಿಯಾದರು. ನಂತರ 2022ರಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕ್ಕೀರೇಶ್ವರ ಮಠಕ್ಕೆ ಉತ್ತರಧಿಕಾರಿಯಾಗಿ ನೇಮಕವಾದರು. ಅಂದಿನಿಂದ ಶಿರಹಟ್ಟಿಯ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಎಂದೆ ಪ್ರಖ್ಯಾತರಾಗಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಉತ್ತರಧಿಕಾರಿಯಾಗಿ ನೇಮಕವಾಗುವುದಕ್ಕಿಂತ ಮುಂಚೆ ಇವರ ಸಾನಿಧ್ಯದಲ್ಲಿ ನಡೆದ ಜೀವನ ದರ್ಶನ, ಅನುಭಾವ ದರ್ಶನ, ವಚನ ದರ್ಶನ, ಮತ್ತು ಕೈವಲ್ಯ ತತ್ತ್ವರಸಾಮೃತ ಹೀಗೆ ವಿವಿಧ ಕಾರ್ಯಕ್ರಮಗಳು ಬಮ್ಮನಹಳ್ಳಿ, ಅಕ್ಕಿಆಲೂರ, ಶಿರಶಿ, ನರಗುಂದ, ಹಾವೇರಿ, ಅಕ್ಕಲಕೋಟಿ ಮತ್ತು ಹುಬ್ಬಳ್ಳಿ ನೆಹರು ಮೈದಾನಗಳಲ್ಲಿ ನಡೆದವು. ಹುಬ್ಬಳ್ಳಿ ನೆಹರು ಮೈದಾನದಲ್ಲಿ ನಡೆದ ಪ್ರವಚನ ಕಾರ್ಯಕ್ರಮವು ಇವರ ಭಕ್ತಗಣ ಹೆಚ್ಚುವಂತೆ ಮಾಡಿತು.

ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಕಷ್ಟು ಭಕ್ತರನ್ನು ಹೊಂದಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 6.5 ರಿಂದ 7 ಲಕ್ಷ ಲಿಂಗಾಯತರು ಇದ್ದಾರೆ. ಲಿಂಗಾಯತ ಮತಗಳೇ ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಕಳೆದ ನಾಲ್ಕು ಲೋಕಸಭೆ ಚುನಾವಣೆಯಲ್ಲಿ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್​ ಜೋಶಿ ಅವರು ಸ್ಪರ್ಧಿಸಿದ್ದು, ಪ್ರಚಂಡ ಬಹುಮತದಿಂದ ಗೆದ್ದಿದ್ದಾರೆ. ಕಳೆದ ಎರಡು ಚುನಾವಣೆಗಳಲ್ಲಿ ಇವರ ಪ್ರತಿ ಸ್ಪರ್ಧಿಯಾಗಿ ಲಿಂಗಾಯತ ಸಮುದಾಯದ ಮುಖಂಡ ವಿನಯ ಕುಲಕರ್ಣಿ ಸ್ಪರ್ಧಿಸಿದ್ದರೂ ಕೂಡ ಗೆಲವು ಸಾಧ್ಯವಾಗಲಿಲ್ಲ.

ಲಿಂಗಾಯತ ಅಭ್ಯರ್ಥಿ ಸ್ಪರ್ಧಿಸಿದ್ದರೂ ಗೆಲುವಾಗಿಲ್ಲವೇಕೆ?

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಪ್ರಾಬಲ್ಯವನ್ನು ಹೊಂದಿದೆ. 90ರ ದಶಕದಿಂದಲೂ ಈ ಲೋಕಸಭಾ ಕ್ಷೇತ್ರದಲ್ಲಿ ಹಿಂದುತ್ವದ ಆಧಾರದ ಮೇಲೆ ಚುನಾವಣೆ ನಡೆಯುತ್ತಾ ಬಂದಿದೆ. ಹಿಂದುತ್ವ ಸಿದ್ಧಾಂತದ ಮೇಲೆ ಚುನಾವಣೆ ಎದುರಿಸುವ ಬಿಜೆಪಿಗೆ ಧಾರವಾಡ ಲೋಕಸಭಾ ಕ್ಷೇತ್ರ ಗಟ್ಟಿ ಕಾಳು ಆಗಿದೆ. ಅಟಲ್​ ಬಿಹಾರಿ ವಾಜಪೇಯಿ, ಬಿಎಸ್​ ಯಡಿಯೂರಪ್ಪ ಮತ್ತು ಇದೀಗ ಪ್ರಧಾನಿ ಮೋದಿ ಅವರ ಅಲೆಯಿಂದ ಜೋಶಿ ಅವರಿಗೆ ಸುಲಭದ ಜಯವಾಗಿದೆ ಒಂದು ಪಂಗಡದ ಮಾತಾದರೆ. ಪ್ರಹ್ಲಾದ್​ ಜೋಶಿಯವರ ಸರಳ ನಡೆ, ಅಭಿವೃದ್ಧಿ ಮಂತ್ರ ಮತ್ತು ಬೆನ್ನೆಲುಬಾಗಿ ನಿಂತಿರುವ ಆರ್​ಎಸ್​ಎಸ್ ಇವರ ಗೆಲುವಿಗೆ ಕಾರಣವಾಗಿದೆ ಎಂಬುವುದು ಮತ್ತೊಂದು  ಪಂಗಡದ ವಾದವಾಗಿದೆ. ಇದೀಗ ಐದನೇ ಬಾರಿಗೆ ಪ್ರಹ್ಲಾದ್​ ಜೋಶಿ ಕಣಕ್ಕೆ ಇಳಿದ್ದಿದ್ದು, ಈ ಬಾರಿಯೂ ಜೋಶಿ ಅವರೆ ಗೆಲ್ಲುತ್ತಾರೆ ಎಂದು ಕ್ಷೇತ್ರದ ಜನರು ಹೇಳುತ್ತಿದ್ದಾರೆ.

ಜೋಶಿ ಸ್ಪರ್ಧೆಗೆ ದಿಂಗಾಲೇಶ್ವರ ಸ್ವಾಮೀಜಿ ವಿರೋಧವೇಕೆ?

ಫಕೀರ ದಿಂಗಾಲೇಶ್ವರ ಸ್ವಾಮೀಜಿ ಜೋಶಿ ಅವರ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರ ನಿರ್ಧಾರಕ್ಕೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿದೆ. ಆದರೆ ಉತ್ತರ ಕರ್ನಾಟಕ ಪ್ರಮುಖ ಮಠಗಳಲ್ಲಿ ಒಂದಾದ ಧಾರವಾಡದ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತ್ರ ದಿಂಗಾಲೇಶ್ವರ ಸ್ವಾಮೀಜಿ ಅವರ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದು, ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್​ ಶೆಟ್ಟರ್​ ಅವರಿಗೆ ಅನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್​ ಶೆಟ್ಟರ್​ ಅವರಿಗೆ ಟಿಕೆಟ್​ ತಪ್ಪಿಸಲಾಗಿದೆ. ಬಿಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿದೆ. ಇದು ಲಿಂಗಾಯತ ಸಮುದಾಯದವರಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದ್ದರು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:35 pm, Mon, 8 April 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!