ರೈಲ್ವೆ ದುರಂತಕ್ಕೆ ಯಾರು ಹೊಣೆ? ಪ್ರಧಾನಿ ಮೋದಿ, ರೈಲ್ವೆ ಸಚಿವರು ಉತ್ತರಿಸಿ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರೈಲ್ವೆ ದುರಂತಕ್ಕೆ ಯಾರು ಹೊಣೆ ಎಂದು ಸರ್ಕಾರ ಉತ್ತರಿಸಬೇಕು. ದುರಂತದ ಬಗ್ಗೆ ನಾನು ಪ್ರಧಾನಿ ಮೋದಿ, ರೈಲ್ವೆ ಸಚಿವರನ್ನು ಹಲವಾರು ಪ್ರಶ್ನೆಗಳನ್ನು ಕೇಳಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಒಡಿಶಾದ (Odisa) ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣ ಬಳಿ ಶುಕ್ರವಾರ ಭೀಕರ 3 ರೈಲು ಅಪಘಾತದಲ್ಲಿ (Train Accident) ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆ ಆಗಿದೆ. 1000ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ವಿಶ್ವ ನಾಯಕರು ಸಂತಾಪ ಸೂಚಿಸಿದ್ದಾರೆ. ಅದೇ ರೀತಿಯಾಗಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ರೈಲ್ವೆ ದುರಂತಕ್ಕೆ ಯಾರು ಹೊಣೆ ಎಂದು ಸರ್ಕಾರ ಉತ್ತರಿಸಬೇಕು. ದುರಂತದ ಬಗ್ಗೆ ನಾನು ಪ್ರಧಾನಿ ಮೋದಿ, ರೈಲ್ವೆ ಸಚಿವರನ್ನು ಹಲವಾರು ಪ್ರಶ್ನೆಗಳನ್ನು ಕೇಳಬೇಕಾಗಿದೆ ಎಂದಿದ್ದಾರೆ.
ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ ಎಂದ ಪ್ರಧಾನಿ ಮೋದಿ
ರೈಲು ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ಅವರು ಸ್ಥಳೀಯ ಅಧಿಕಾರಿಗಳು, ವಿಪತ್ತು ಪರಿಹಾರ ಪಡೆಗಳ ಸಿಬ್ಬಂದಿ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ಬಾಲಸೋರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿದರು.
#WATCH | #BalasoreTrainAccident | Congress president & former Railways Minister Mallikarjun Kharge says, “…Irrespective of the political parties, I request them to come forward & help…I extend my heartfelt condolences to the bereaved families…I have to ask many questions to… pic.twitter.com/UAw8I3Bzq1
— ANI (@ANI) June 3, 2023
ಇದನ್ನೂ ಓದಿ: ಒಡಿಶಾ ರೈಲು ದುರಂತ: ಘಟನಾ ಸ್ಥಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ದೂರವಾಣಿ ಮೂಲಕ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ
ಬಳಿಕ ಮಾತನಾಡಿದ ಪ್ರಧಾನಿ ಮೋದಿ, ನೊಂದ ಕುಟುಂಬಗಳ ಜೊತೆ ಕೇಂದ್ರಸರ್ಕಾರ ಇದೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.
ಕನ್ನಡಿಗರಿಗೆ ದೂರವಾಣಿ ಕರೆ ಮಾಡಿದ ಸಿಎಂ ಸಿದ್ಧರಾಮಯ್ಯ
ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 110 ಜನ ಪ್ರಯಾಣಿಸಿದ್ದು, ಸುರಕ್ಷಿತವಾಗಿದ್ದಾರೆ. ಸದ್ಯ ಸಿಎಂ ಸಿದ್ಧರಾಮಯ್ಯ ದುರಂತ ಸ್ಥಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಮೈಸೂರು ನಿವಾಸಿಗಳ ಜತೆ ದೂರವಾಣಿ ಮೂಲಕ ಸಿಎಂ ಮಾತುಕತೆ ಮಾಡಿದ್ದು, ಅಗತ್ಯ ಎಲ್ಲಾ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ತಮ್ಮ ಸಹಾಯಕ್ಕೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಕಮಿಷನರ್ ಬರ್ತಿದ್ದಾರೆ ಎಂದು ಮೈಸೂರಿನ 30ಕ್ಕೂ ಹೆಚ್ಚು ಸಂತ್ರಸ್ತರಿಗೆ ಸಿಎಂ ಸಿದ್ಧರಾಮಯ್ಯ ಧೈರ್ಯ ತುಂಬಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.