BJP PM Candidate: ಯಾರಾಗಲಿದ್ದಾರೆ ನರೇಂದ್ರ ಮೋದಿ ಉತ್ತರಾಧಿಕಾರಿ?; ಪ್ರಧಾನಿ ಅಭ್ಯರ್ಥಿ ಸ್ಥಾನದ ಬಗ್ಗೆ ಯೋಗಿ ಆದಿತ್ಯನಾಥ್ ಸ್ಪಷ್ಟನೆ

|

Updated on: Feb 04, 2023 | 12:57 PM

ಖಾಸಗಿ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

BJP PM Candidate: ಯಾರಾಗಲಿದ್ದಾರೆ ನರೇಂದ್ರ ಮೋದಿ ಉತ್ತರಾಧಿಕಾರಿ?; ಪ್ರಧಾನಿ ಅಭ್ಯರ್ಥಿ ಸ್ಥಾನದ ಬಗ್ಗೆ ಯೋಗಿ ಆದಿತ್ಯನಾಥ್ ಸ್ಪಷ್ಟನೆ
ಯೋಗಿ ಆದಿತ್ಯನಾಥ್ - ನರೇಂದ್ರ ಮೋದಿ
Follow us on

ಲೋಕಸಭೆ ಚುನಾವಣೆ 2024: ನವದೆಹಲಿ: ನರೇಂದ್ರ ಮೋದಿ (Narendra Modi) ಅವರ ಪ್ರಧಾನಮಂತ್ರಿ ಹುದ್ದೆಯ 2ನೇ ಅವಧಿಯೂ ಪೂರ್ಣಗೊಳ್ಳುತ್ತಿದ್ದು, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ? ಎಂಬ ಚರ್ಚೆ ಈಗಾಗಲೇ ಶುರುವಾಗಿದೆ. ಬಹುತೇಕರು ನರೇಂದ್ರ ಮೋದಿ ಅವರೇ 3ನೇ ಅವಧಿಗೂ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎನ್ನುತ್ತಿದ್ದಾರೆ. ಆದರೆ, ನರೇಂದ್ರ ಮೋದಿ ಅಧಿಕಾರದಲ್ಲಿರುವಾಗ ಬಿಜೆಪಿಯಲ್ಲಿ ಮಾಡಿದ ನಿಯಮದ ಅನುಸಾರ ನರೇಂದ್ರ ಮೋದಿಯವರಿಗೆ ವಯಸ್ಸು ಹೆಚ್ಚಾಗುವುದರಿಂದ ಅವರು ಈ ಬಾರಿ ಪ್ರಧಾನಿ ಅಭ್ಯರ್ಥಿಯಾಗುವುದು ಅನುಮಾನ ಎನ್ನಲಾಗುತ್ತಿದೆ. ಹಾಗಾದರೆ, ಬಿಜೆಪಿಯಲ್ಲಿ ನರೇಂದ್ರ ಮೋದಿಯವರ ಉತ್ತರಾಧಿಕಾರಿ ಯಾರಾಗಲಿದ್ದಾರೆ?

ಕೆಲವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯ ಮುಂದಿನ ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದಾರೆ. ಇನ್ನು ಕೆಲವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ನಂತರದ ಪ್ರಧಾನಿ ಅಭ್ಯರ್ಥಿ ಎಂದು ಕರೆಯುತ್ತಿದ್ದಾರೆ. ಹಲವು ಕಡೆ ಬಿಜೆಪಿಯ ಇತರ ರಾಜ್ಯಗಳ ಮುಖ್ಯಮಂತ್ರಿಗಳ ಬಗ್ಗೆಯೂ ಚರ್ಚೆಯಾಗುತ್ತಿದೆ. ಆದರೆ ಈ ನಡುವೆ ಸಿಎಂ ಯೋಗಿ ಆದಿತ್ಯನಾಥ್ ಖಾಸಗಿ ನ್ಯೂಸ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ತಾವು ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವುದು ನಿಜವೇ? ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ; ಕಮಲನಾಥ್ ಅಚ್ಚರಿಯ ಹೇಳಿಕೆ

ಖಾಸಗಿ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 2019ಕ್ಕಿಂತ ಹೆಚ್ಚು ಸ್ಥಾನಗಳನ್ನು ಉತ್ತರ ಪ್ರದೇಶದಲ್ಲಿ ಗೆಲ್ಲಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನಾನು ಪ್ರಧಾನಿ ಸ್ಥಾನದ ಆಕಾಂಕ್ಷಿಯಲ್ಲ:
ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ನನಗೆ ಉತ್ತರ ಪ್ರದೇಶದಲ್ಲೇ ಉಳಿಯುವ ಆಸೆಯಿದೆ. ಪ್ರಧಾನಿ ಮೋದಿ ನಮ್ಮ ದೇಶದ ದೊಡ್ಡ ಶಕ್ತಿ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಹೊಸ ಗುರುತನ್ನು ಹೊಂದಿದೆ. ಯಾವುದೇ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಹೆಸರು ದೊಡ್ಡದಾಗಿರುತ್ತದೆ. 2014ರಲ್ಲಿ ಅವರು ಪ್ರಧಾನಿಯಾದ ನಂತರ ಸಮಾಜದ ಪ್ರತಿಯೊಂದು ವರ್ಗವೂ ಪ್ರಯೋಜನ ಪಡೆದಿದೆ. ಸಾರ್ವಜನಿಕರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ಗೆ ದೇವಸ್ಥಾನ ಕಟ್ಟಿ ದಿನವೂ ಪೂಜೆ, ಭಜನೆ

2024ರಲ್ಲಿ ಬಿಜೆಪಿ ಮತ್ತೊಮ್ಮೆ ಬಹುಮತ ಪಡೆಯಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಮ್ಮ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 300ರಿಂದ 315 ಲೋಕಸಭಾ ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಬಹುಮತ ಪಡೆಯಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2019ರ ಚುನಾವಣೆಗೆ ಹೋಲಿಸಿದರೆ 2024ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Sat, 4 February 23