UT Khader Profile: ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್, ಇಲ್ಲಿದೆ ಕರಾವಳಿ ರಾಜಕಾರಣಿಯ ರಾಜಕೀಯ ಖದರ್

ಕರಾವಳಿ ಎನ್ನುವ ಹಿಂದುತ್ವದ ಗೂಡಲ್ಲಿ ಕಾಂಗ್ರೆಸ್ ಕೋಟೆ ಕಟ್ಟಿದ ಯುಟಿ ಖಾದರ್ ರಾಜಕೀಯ ಖದರ್ ಹಾಗೂ ಅವರ ಜೀವನ ಚರಿತ್ರೆ ಇಲ್ಲಿದೆ.

UT Khader Profile: ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್, ಇಲ್ಲಿದೆ ಕರಾವಳಿ ರಾಜಕಾರಣಿಯ ರಾಜಕೀಯ ಖದರ್
ಯುಟಿ ಖಾದರ್
Follow us
ರಮೇಶ್ ಬಿ. ಜವಳಗೇರಾ
|

Updated on: May 24, 2023 | 1:20 PM

ಕರ್ನಾಟಕ ವಿಧಾನಸಭೆಯ ನೂತನ ಸ್ವೀಕರ್ ಆಗಿ ಯುಟಿ ಖಾದರ್(UT Khader) ಅವರು ಸರ್ವಾನುಮತದಿಂದ ಇಂದು( ಬುಧವಾರ) ಆಯ್ಕೆಯಾಗಿದ್ದಾರೆ. ಕರಾವಳಿ ಕರ್ನಾಟಕ ಭಾಗದಲ್ಲಿ ಮೃದು ಸ್ವಭಾವದ, ಸೌಹಾರ್ದಯುತ ಹಾಗೂ ಕೋಮು ರಾಜಕಾರಣದ ವಿರುದ್ಧ ಅದಮ್ಯ ದನಿಯೆತ್ತಿರುವ ಮಾಜಿ ಸಚಿವ, ಮಂಗಳೂರು ಶಾಸಕ ಯು ಟಿ ಖಾದರ್ ಕರಾವಳಿ ಕರ್ನಾಟಕದ ಹಿಂದುತ್ವದ ಗೂಡುಗಳಲ್ಲಿ ಕಾಂಗ್ರೆಸ್ ಕೋಟೆ ಕಟ್ಟಿದ್ದಾರೆ. ಇದಕ್ಕೆ ಪೂಕರವೆಂಬಂತೆ ಮಂಗಳೂರಿನಲ್ಲಿ ಎಷ್ಟೇ ಕೋಮು ರಾಜಕಾರಣ ಗಲಾಟೆಗಳು ನಡೆದರೂ ಸಹ ಖಾದರ್​ ಸತತವಾಗಿ ಬರೋಬ್ಬರಿ ಐದು ಬಾರಿ ಶಾಸಕರಾಗಿ ಗೆಲ್ಲುತ್ತಾ ಬಂದಿದ್ದಾರೆ. ಇನ್ನು ಕೋಮು ಸೌಹಾರ್ದತೆಗೆ ಮತ್ತೊಂದು ಹೆಸರು ಯು.ಟಿ.ಖಾದರ್​. ಇವರು ನಡೆದುಬಂದ ರಾಜಕೀಯ ಹಾದಿ ಸೇರಿದಂತೆ ಜೀವನ ಚರಿತ್ರೆ ಇಲ್ಲಿದೆ.

ಇದನ್ನೂ ಓದಿ: ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ, ಸಿದ್ದರಾಮಯ್ಯ-ಬೊಮ್ಮಾಯಿ ಹೇಳಿದ್ದೇನು?

ಯುಟಿ ಖಾದರ್​ ಜೀವನ ಚರಿತ್ರೆ

ಯುಟಿ ಫರೀದ್ ಹಾಗೂ ಯುಟಿ ನಸೀಮಾ ಫರೀದ್ ದಂಪತಿ ಪುತ್ರ ಯುಟಿ ಖಾದರ್. ಇವರು 12-10-1969ರಲ್ಲಿ ಜನಿಸಿದ್ದು, LKG ಶಿಕ್ಷಣವನ್ನು ರೋಶನಿ ನಿಲಯದಲ್ಲಿ, 1ರಿಂದ 4ನೇ ತರಗತಿ ವರೆಗೆ ಸೈನ್ಟ್ ಜೆರೋಝ, ನಾಲ್ಕನೇ ತರಗತಿಯಿಂದ ಪ್ರೌಢ ಶಿಕ್ಷಣದ ವರೆಗೆ ಸೈನ್ಟ್ ಅಲೋಶಿಯಸ್ ನಲ್ಲಿ ಮುಗಿಸಿದ್ದಾರೆ. ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ SDM ಕಾಲೇಜಿನಲ್ಲಿ BA, LLB ಪದವಿ ಮುಗಿಸಿದ್ದಾರೆ. ಇನ್ನು ಇವರ ಹವ್ಯಾಸ ಏನು ಎನ್ನುವುದನ್ನು ನೋಡುವುದಾದರೆ, ಬೈಕ್ ಹಾಗೂ ಕಾರ್ ರೇಸ್ ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮೋಟೋ ರೇಸ್ ಚಾಂಪಿಯನ್ಶಿಶಿಪ್​ನಲ್ಲಿ ಕೂಡಾ ಭಾಗವಹಿಸಿದ್ದರು.

ಸರಳ ಮತ್ತು ಸದಾ ಜನರೊಂದಿಗೆ ಬೆರೆಯುವ ಯುವ ನಾಯಕ. ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಉಂಟಾದಾಗ ಹಲವು ಬಾರಿ ಕಾರಿನಿಂದ ಇಳಿದು ಸಂಚಾರಿ ಪೊಲೀಸ್ ಆಗಿ ಕಾರ್ಯ ನಿರ್ವಹಣೆ ಮಾಡಿರುವ ಉದಾಹರಣಗಳು ಇವೆ.. ಮೋಟಾರ್ ಕ್ರಾಸಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಯುಟಿ ಖಾದರ್ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇನ್ನು ಯುಟಿ ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಾಂಗ್ರೆಸ್ ಶಾಸಕ. ಮುಸ್ಲಿಂ ರಾಜಕೀಯ ನಾಯಕರಲ್ಲಿ ಪ್ರಭಾವಿ ನಾಯಕರು. 2007ರಲ್ಲಿ ಯು. ಟಿ. ಖಾದರ್ ತಂದೆ ಯು. ಟಿ. ಫರೀದ್ ನಿಧನದ ನಂತರ ಉಳ್ಳಾಲ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಯಿತು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದ ಯುಟಿ. ಖಾದರ್ ಮೊದಲ ಬಾರಿಗೆ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು.

ಖಾದರ್ ನಡೆದು ಬಂದ ರಾಜಕೀಯ ಹಾದಿ

1990ರಲ್ಲಿ NSUI ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 1994 ರಿಂದ 1999 ರ ವರೆಗೆ NSUI ಜಿಲ್ಲಾಧ್ಯಕ್ಷರಾಗಿ, 1999 ರಿಂದ 2001 ರ ವರೆಗೆ NSUI ರಾಜ್ಯ ಉಪಾಧ್ಯಕ್ಷರಾಗಿ ಯುಟಿ ಖಾದರ್ ಸೇವೆ ಸಲ್ಲಿಸಿದ್ದಾರೆ.

2003 ರಲ್ಲಿ ಘಟಪ್ರಭ ದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ, 2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಅವರು 2005 ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು. ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದರು.

2008 ರಲ್ಲಿ ತಮ್ಮ ತಂದೆಯವರ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008, 2013, 2018 ಹಾಗೂ 2023 ರಲ್ಲಿ ಸತತ ಐದು ಬಾರಿ ಶಾಸಕರಾಗಿ ಯುಟಿ ಖಾದರ್ ಆಯ್ಕೆಯಾಗಿದ್ದಾರೆ. ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿಯನ್ನೂ ಸಹ ಪಡೆದುಕೊಂಡಿದ್ದರು.

2013ರ ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016 ರ ತನಕ ಕಾರ್ಯ ನಿರ್ವಹಿಸಿದ್ದರು. ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ, ಬೈಕ್ ಅಂಬ್ಯುಲೆನ್ಸ್, 108, ಆರೋಗ್ಯಶ್ರೀ, ದಂತ ಭಾಗ್ಯ, ಸರಕಾರೀ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ, ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಭಾಜನರಾಗಿದ್ದರು.

ನಂತರ 2016 ರಿಂದ 2018 ರ ತನಕ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗ, ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಕ್ರಾಂತಿಕಾರಿ ಯೋಜನೆಗೆ ಚಾಲನೆ ನೀಡಿ ಇತಿಹಾಸ ಸೃಷ್ಟಿಸಿದ್ದರು. ಬಿಪಿಎಲ್ ಕಾರ್ಡು ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಅವರು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾಗಿದ್ದರು.

2018 ರ ಮೈತ್ರಿ ಸರಕಾರದಲ್ಲಿ ನಗರಾಭಿವೃದ್ದಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿ ಯಶಸ್ವಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ,ಕರ್ನಾಟಕ ನಗರನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ,ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ,ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಯುಟಿ ಖಾದರ್ ಕಾರ್ಯ ನಿರ್ವಹಿಸಿದ್ದಾರೆ.

2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023 ರ ವರೆಗೆ ಕಾರ್ಯನಿರ್ವಹಿಸಿ ಪ್ರತೀ ಹಂತದಲ್ಲೂ ಸರ್ಕಾರ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸೈ ಎನಿಸಿ ಕೊಂಡಿದ್ದ ಖಾದರ್ ಇದೀಗ ವಿಧಾನಸಭೆ ಸ್ಪೀಕರ್ ಆಯ್ಕೆಯಾಗಿದ್ದಾರೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಪ್ರಭಾವ ಬೀರುತ್ತಿರುವ ಯು.ಟಿ.ಖಾದರ್, ಸ್ಪೀಕರ್ ಆದ ಮೇಲೆ ಅವರು ಪಕ್ಷದ ಚಟುವಟಿಕೆಗಳಲ್ಲಿ ಅಧಿಕೃತವಾಗಿ ಪಾಲ್ಗೊಳ್ಳುವಂತಿಲ್ಲ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ