Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲೂ ಸೃಷ್ಟಿಯಾಗ್ತಾರಾ ಅಜಿತ್​ ಪವಾರ್? ಹೆಚ್​ ಡಿ ಕುಮಾರಸ್ವಾಮಿ ಮಾತಿನ ಮರ್ಮವೇನು?

ಮಹಾರಾಷ್ಟ್ರ ರಾಜಕೀಯದಲ್ಲಾದ ದಿಢೀರ್​ ಬೆಳವಣಿಗೆಯಿಂದ ಎನ್​​ಸಿಪಿ ನಾಯಕ ಅಜಿತ್​ ಪವಾರ್​ ಮುಖ್ಯಮಂತ್ರಿ ಏಕನಾಥ್​​ ಶಿಂಧೆ ನೇತೃತ್ವದ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರು. ಈ ರೀತಿ ರಾಜ್ಯದಲ್ಲೂ ಮತ್ತೊಬ್ಬ ಅಜಿತ್​ ಪವಾರ್​ ಹುಟ್ಟುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲೂ ಸೃಷ್ಟಿಯಾಗ್ತಾರಾ ಅಜಿತ್​ ಪವಾರ್? ಹೆಚ್​ ಡಿ ಕುಮಾರಸ್ವಾಮಿ ಮಾತಿನ ಮರ್ಮವೇನು?
ಹೆಚ್​.ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on: Jul 03, 2023 | 2:51 PM

ಬೆಂಗಳೂರು: ಮಹಾರಾಷ್ಟ್ರ (Maharashtra) ರಾಜಕೀಯದಲ್ಲಾದ ದಿಢೀರ್​ ಬೆಳವಣಿಗೆಯಿಂದ ಎನ್​​ಸಿಪಿ (NCP) ನಾಯಕ ಅಜಿತ್​ ಪವಾರ್ (Ajit Pawar) ಮುಖ್ಯಮಂತ್ರಿ ಏಕನಾಥ್​​ ಶಿಂಧೆ (Eknath Shinde) ನೇತೃತ್ವದ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿ ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆಯಾಗಿದೆ. ನಿನ್ನೆ (ಜು.02) ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ಇಲ್ಲಿ ಯಾವ ಅಜಿತ್ ಪವಾರ್ ಹುಟ್ಟು ಹಾಕ್ತಾರೋ ಗೊತ್ತಿಲ್ಲ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಣ ತರುವಂತೆ ಬೇಡಿಕೆ ಇಡುತ್ತಾರೆ. ಶಾಸಕರ ಶಿಫಾರಸು ತಂದ್ರೆ ಸಾಲದು 30 ಲಕ್ಷ ದುಡ್ಡು ತನ್ನಿ ಅಂತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಕೊಟ್ಟರೇ ಬರಿ ಪತ್ರ ಬೇಡ 30 ಲಕ್ಷ ಕೊಡಬೇಕು ಎಂದು ಹೇಳುತ್ತಾರೆ. ಸಿಎಂ ಕಛೇರಿಯಲ್ಲಿ ಇರುವವರು ಸಾಕ್ಷಿ ಕೊಡಿ ಅಂತ ಕೇಳುತ್ತಾರೆ. ದುಡ್ಡು ಕೊಟ್ಟೋನು ಸಾಕ್ಷಿ ಇಡುತ್ತಾನೆ. ಅವನಿಗೆ ಕೆಲಸ ಆದ್ರೆ ಸಾಕು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದರು.

ಟ್ರಾನ್ಸ್ಪೋರ್ಟ್ ಡಿಪಾರ್ಟ್ಮೆಂಟ್​​ನಲ್ಲಿ ವರ್ಗಾವಣೆ ವಿಚಾರದಲ್ಲಿ ಒಂದು ಸಿಂಡಿಕೇಟ್ ಇದೆ. ಕೆಎಸ್​​ಆರ್​ಟಿಸಿಯಲ್ಲಿ ಒಂದು ಸಿಂಡಿಕೇಟ್ ಇದೆ. ಸಬ್​ರಿಜಿಸ್ಟರ್ ಕಚೇರಿಯಲ್ಲಿ ಕೂಡ ಸಿಂಡಿಕೇಟ್ ಇದೆ. ಭ್ರಷ್ಟಾಚಾರದ ಬಗ್ಗೆ ಹೇಳುತ್ತಾರೆ. ಭ್ರಷ್ಟಾಚಾರ ಇದೆ ಅಂತಾ ಒಪಿಕೊಂಡಿದ್ದೀರಾ. ಭ್ರಷ್ಟಾಚಾರದ ವಿರುದ್ಧ ಕ್ರಮ ಅಂತಾ ಹೇಳುತ್ತೀರಿ, ಏನೂ ಕ್ರಮ ತಗೊಂಡಿದೀರಾ ನೀವು? ಸರ್ಕಾರ ಬಂದು ಒಂದು ತಿಂಗಳು ಮೇಲೆ ಆಯ್ತು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ಶಾಸಕನಾಗಿ ಸರ್ಕಾರದ ಲೋಪ ದೋಷಗಳ ಬಗ್ಗೆ ನಿರ್ಧಾಕ್ಷಿಣ್ಯವಾಗಿ ಮಾತಾಡುತ್ತೇನೆ. ನಾನು ಏನೇ ಮಾತಾಡಿದರು ಸಬ್ಜೆಕ್ಟ್ ಇದ್ದರೇ ಮಾತನಾಡುತ್ತೇನೆ. ಇಲ್ಲ ಅಂದ್ರೆ ಮಾತಾಡಲ್ಲ. ಆಡಳಿತ ಪಕ್ಷದ ಸೀನಿಯರ್ ಮಂತ್ರಿಗಳಿಗೆ ಹೇಳುತ್ತೇನೆ. ಬಿಜೆಪಿ ವಿರುದ್ಧ ಹಲವರು ಆರೋಪ ಮಾಡಿದ್ರಿ ಕಳೆದ 5 ವರ್ಷ ನಮಗೆ ಸದನದಲ್ಲಿ ಮಾತಾಡೋಕೆ ಬಿಟ್ಟಿಲ್ಲ. ನೀವೇ ಮಾತನಾಡಿದ್ದೀರಿ. ನಾವು ಸುಮ್ಮನೆ ಸದನದಲ್ಲಿ ಕುಳಿತುಕೊಳ್ಳಬೇಕು ಎಂದರು.

ನಾನು ವಿರೋಧ ಪಕ್ಷ ಸ್ಥಾನದಲ್ಲಿ ಇರೋದಕ್ಕೆ ಟಿಕೀಸುತ್ತಿಲ್ಲ. ಚುನಾವಣೆ ಪೂರ್ವದಲ್ಲಿ ವೀರಾವೇಶದಿಂದ ಜನರಕ್ಕೆ ಭರವಸೆ ಕೊಟ್ಟರಿ. ಈಗ ಆ ವೀರಾವೇಶ ಎಲ್ಲಿ? ಮುಂದಿನ ದಿನ ಈ ಸರ್ಕಾರ ಐಸಿಯು ಮತ್ತು ವೆಂಟಿಲೇಟರ್​ಗೆ ಹೋಗುತ್ತೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಐಸಿಯು ಮತ್ತು ವೆಂಟಿಲೇಟರ್ ಹೋಗುತ್ತೆ ಎಂದು ಭವಿಷ್ಯ ನುಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ