AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ನಿರ್ಧಾರವೇನೆಂದು ನನಗೆ ತಿಳಿದಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಹೇಳಿದ್ದಾರೆ.

ಹೈಕಮಾಂಡ್ ನಿರ್ಧಾರವೇನೆಂದು ನನಗೆ ತಿಳಿದಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ
ಸಿದ್ದರಾಮಯ್ಯ
Ganapathi Sharma
|

Updated on: May 15, 2023 | 10:48 PM

Share

ನವದೆಹಲಿ: ಕರ್ನಾಟಕ ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ದೆಹಲಿಯ ಐಟಿಸಿ ಮೌರ್ಯ ಹೋಟೆಲ್​ನಲ್ಲಿ ಸೋಮವಾರ ರಾತ್ರಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹೈಕಮಾಂಡ್​ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್​ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದ ಎಐಸಿಸಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ದೆಹಲಿ ಭೇಟಿ ರದ್ದು: ನನ್ನ ಜೊತೆ ಯಾವ ಶಾಸಕರೂ ಇಲ್ಲ ಎಂದ ಡಿಕೆ ಶಿವಕುಮಾರ್

ಈ ಮಧ್ಯೆ, ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಇಂದು (ಸೋಮವಾರ ರಾತ್ರಿ) ಅಲ್ಲಿಯೇ ತಂಗಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಅವರು ಅನಾರೋಗ್ಯದ ಕಾರಣ ದೆಹಲಿಗೆ ತೆರಳಿಲ್ಲ. ಸೋಮವಾರ ರಾತ್ರಿ ಡಿಕೆ ಶಿವಕುಮಾರ್ ಅವರು ವೈದ್ಯಕೀಯ ತಪಾಸಣೆಗೂ ಒಳಗಾಗಿದ್ದಾರೆ. ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ರದ್ದು ಮಾಡಿದ ಬೆನ್ನಲ್ಲೇ ಅವರ ಸಹೋದರನೂ ಆಗಿರುವ ಸಂಸದ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ. ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಜೆ 5.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಇವರ ದೆಹಲಿ ಪ್ರವಾಸ ಸದ್ಯ ಕುತೂಹಲ ಕೆರಳಿಸಿದೆ.

ಈ ಮಧ್ಯೆ, ವೈದ್ಯಕೀಯ ತಪಾಸಣೆಗೆ ಒಳಗಾದ ನಂತರ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ನಾಳೆ (ಮಂಗಳವಾರ) ದೆಹಲಿಗೆ ತೆರಳುತ್ತೇನೆ. ಸೋನಿಯಾಗಾಂಧಿ ಅರನ್ನು ಭೇಟಿಯಾಗುವುದೇ ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ