ದೆಹಲಿ: ಹಣದುಬ್ಬರ ಮತ್ತು ನಿರುದ್ಯೋಗ ಯಾಕೆ ಹೆಚ್ಚಿದೆ? ಇದಕ್ಕೆ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಉತ್ತರಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. “ಹಣದುಬ್ಬರವು 35 ವರ್ಷಗಳ ಗರಿಷ್ಠ ಮಟ್ಟದಲ್ಲಿದೆ ಏಕೆ? ನಿರುದ್ಯೋಗವು 45 ವರ್ಷಗಳ ಗರಿಷ್ಠ ಮಟ್ಟದಲ್ಲಿದೆ? ಏಕೆ ‘ಪರಾಠಾ’ಗಳಿಗೆ 18% ಜಿಎಸ್‌ಟಿ ತೆರಿಗೆ ವಿಧಿಸಲಾಗುತ್ತಿದೆ? ಕೃಷಿ ಟ್ರ್ಯಾಕ್ಟರ್‌ಗಳಿಗೆ 12% ಜಿಎಸ್‌ಟಿಯಲ್ಲಿ ಏಕೆ ತೆರಿಗೆ ವಿಧಿಸಲಾಗುತ್ತಿದೆ?. ಭಾರತ್ ಜೋಡೋ ಯಾತ್ರೆ ಮುಂದುವರಿಯಲಿದೆ. ನಾವು ಪದೇ ಪದೇ ಈ ಪ್ರಶ್ನೆಗಳನ್ನು ಕೇಳುತ್ತೇವೆ. ನೀವು ಇದಕ್ಕೆ ಉತ್ತರಿಸಬೇಕಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Why is inflation at a 35-year HIGH?
Why is unemployment at a 45-year HIGH?
Why are ‘Parathas’ being taxed at 18% GST?
Why are farm tractors being taxed at 12% GST?#BharatJodoYatra will keep asking you these questions and more, Prime Minister.
You will have to answer. pic.twitter.com/jj9HxeN0N7
— Rahul Gandhi (@RahulGandhi) October 14, 2022
ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ಸಮಸ್ಯೆಗಳನ್ನು ಹೈಲೈಟ್ ಮಾಡುವ ಉದ್ದೇಶದೊಂದಿಗೆಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಕೈಗೊಂಡಿರುವ ರಾಹುಲ್ ಪ್ರಸ್ತುತ ಕರ್ನಾಟಕದಲ್ಲಿದ್ದಾರೆ.
ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಕೋರಿದ ಮಕ್ಕಳ ಹಕ್ಕುಗಳ ಸಂಸ್ಥೆ
ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರ ಮನವಿಗೆ ಕೈಜೋಡಿಸುವುದಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಶುಕ್ರವಾರ ದೆಹಲಿ ಹೈಕೋರ್ಟ್‌ಗೆಹೇಳಿದೆ. ಕಳೆದ ಆಗಸ್ಟ್‌ನಲ್ಲಿ ನೈಋತ್ಯ ದೆಹಲಿಯ ಸ್ಮಶಾನದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಫೋಟೊವನ್ನು ರಾಹುಲ್ ಟ್ವೀಟ್ ಮಾಡಿದ್ದರು.
ಎರಡನೇ ಪ್ರತಿವಾದಿ ಆಗಿರುವ ಮಕ್ಕಳ ಹಕ್ಕುಗಳ ಸಂಸ್ಥೆ, ರಾಹುಲ್ ಟ್ವೀಟ್ ಅಳಿಸಿದ್ದರೂ ಅಪರಾಧವು ಇನ್ನೂ ಉಳಿದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠದ ಮುಂದೆ ಹೇಳಿದ್ದಾರೆ.
ಟ್ವಿಟರ್ ಪರ ಹಾಜರಾದ ಹಿರಿಯ ವಕೀಲ ಸಜನ್ ಪೂವಯ್ಯ ಅವರು, ಟ್ವೀಟ್ ಅನ್ನು ಭಾರತದಲ್ಲಿ ಜಿಯೋ-ಬ್ಲಾಕ್ ಮಾಡಲಾಗಿದ್ದರೂ, ಭಾರತದ ಹೊರಗೆ ವಿಷಯ ಲಭ್ಯವಿಲ್ಲ ಎಂದು ಹೇಳುವುದು ಕಷ್ಟ. “ಈ ವಿಷಯವು ಪ್ರಪಂಚದ ಯಾವುದೇ ಭಾಗದಲ್ಲಿ ಲಭ್ಯವಿಲ್ಲ ಎಂದು ನಾನು ಅಫಿಡವಿಟ್ ಸಲ್ಲಿಸಿದರೆ, (ಅದು) ನಮಗೆ ತಿಳಿದಿಲ್ಲದ ಕಾರಣ ತಪ್ಪಾಗುತ್ತದೆ ಎಂದಿದ್ದಾರೆ.
ಮಕ್ಕಳ ಹಕ್ಕುಗಳ ಸಂಸ್ಥೆಯ ಪರ ವಕೀಲರು ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದರು. ಆದಾಗ್ಯೂ, ಅರ್ಜಿದಾರರು ಈ ವಿಷಯದಲ್ಲಿ ಹೊಸ ವಕೀಲರನ್ನು ತೊಡಗಿಸಿಕೊಂಡಿರುವುದರಿಂದ ಮುಂದಿನ ವಿಚಾರಣೆಯ ದಿನಾಂಕದಂದು ಈ ವಾದ ಆಲಿಸುವುದಾಗಿ ನ್ಯಾಯಾಲಯ ಹೇಳಿದೆ. ನ್ಯಾಯಾಲಯವು ಡಿಸೆಂಬರ್ 7 ರಂದು ಈ ಬಗ್ಗೆ ವಿಚಾರಣೆ ನಡೆಸಲಿದೆ.