ಡಿ. 6ರ ನಂತರ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ: ಸಂಚಲನ ಮೂಡಿಸಿದ ಸೋಮಣ್ಣ ನಡೆ
ಮಾಜಿ ಸಚಿವ ವಿ ಸೋಮಣ್ಣ ಪಕ್ಷದ ಕಾರ್ಯಚಟುವಟಿಕೆಗಳಿಂದ ಅಂತ ಕಾಯ್ದುಕೊಂಡಿದ್ದು, ಇದೀಗ ಸ್ವಪಕ್ಷದ ನಾಯಕರ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಡಿಸೆಂಬರ್ 6ರ ನಂತರ ತಮ್ಮ ಮನಸ್ಸಿನ ಭಾವನೆ ಹೇಳುತ್ತೇನೆ ಎಂದಿದ್ದಾರೆ. ಹೀಗಾಗಿ ಸೋಮಣ್ಣ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಬೆಂಗಳೂರು, (ನವೆಂಬರ್ 23): ವಿಧಾನಸಭೆ ಚುನಾವಣೆ (Karnataka Assembly Elections 2023) ಸೋತ ಬಳಿಕ ಪಕ್ಷದ ಕಾರ್ಯಚಟುವಟಿಕೆಗಳಿಂದ ವಿ ಸೋಮಣ್ಣ(V Somanna) ಅಂತರ ಕಾಪಾಡಿಕೊಂಡಿದ್ದಾರೆ. ಇದೀಗ ಬಿವೈ ವಿಜಯೇಂದ್ರ (BY VIjayendra) ಅವರನ್ನು ಬಿಜೆಪಿ(BJP) ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸೋಮಣ್ಣ ಮತ್ತಷ್ಟು ಅಸಮಧಾನಗೊಂಡಿದ್ದಾರೆ. ಹೀಗಾಗಿ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಇದಕ್ಕೆ ಸೋಮಣ್ಣ ಪ್ರತಿಕ್ರಿಯಿಸಿದ್ದು, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮಣ್ಣ ಅವರ ರಾಜಕೀಯ ನಡೆ ತೀವ್ರ ಕುತೂಲಕ ಮೂಡಿಸಿದೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ ಎಂದು ಪರೋಕ್ಷವಾಗಿ ಸ್ವಪಕ್ಷದ ನಾಯಕರ ವಿರುದ್ಧ ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ತಮ್ಮ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯನವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೇ ಚಾಮರಾನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಆದ್ರೆ, ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲುಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಪಕ್ಷದ ಕಾರ್ಯಚವಟಿಕೆಗಳಿಂದ ದೂರು ಉಳಿದುಕೊಂಡಿದ್ದಾರೆ.
ಇದೀಗ ತಮ್ಮ ರಾಜಕೀಯ ವಿರೋಧಿ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಸೋಮಣ್ಣನವರ ಕಣ್ಣು ಮತ್ತಷ್ಟು ಕೆಂಪಾಗಿಸಿದೆ. ಸೋಮಣ್ಣ ಸಹ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿದರೆ ನಿಭಾಯಿಸುವೆ ಎಂದು ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಈಗ ಡಿಸೆಂಬರ್ 6ರ ಬಳಿಕ ತಮ್ಮ ಮನಸ್ಸಿನ ಭಾವನೆ ಹೇಳುವುದಾಗಿ ಹೇಳಿದ್ದಾರೆ. ಇದರಿಂದ ಅವರ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ