AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ, ಪಲಾಯನ ಮಾಡುವ ಪ್ರಶ್ನೆ ಇಲ್ಲ: ಕುಮಾರಸ್ವಾಮಿ ಘೋಷಣೆ

ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಇಲ್ಲ. ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ ಮಾಡುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ, ಪಲಾಯನ ಮಾಡುವ ಪ್ರಶ್ನೆ ಇಲ್ಲ: ಕುಮಾರಸ್ವಾಮಿ ಘೋಷಣೆ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on: Oct 22, 2022 | 7:29 PM

Share

ರಾಮನಗರ: ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಚನ್ನಪಟ್ಟಣದಲ್ಲಿ ಇಂದು(ಅಕ್ಟೋಬರ್ 22) ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಆದರೆ, ನಾನು ಚನ್ನಪಟ್ಟಣದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ 2023: ​ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಜೆಡಿಎಸ್

ಇದೇ ವೇಳೆ ಬಿಜೆಪಿ ಸರಕಾರ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಡಿಮಿಡಿಯಾದ ಹೆಚ್‌ಡಿಕೆ, ಇಂಥ ವ್ಯಕ್ತಿಗಳನ್ನು ( ಸಿ.ಪಿ.ಯೋಗೇಶ್ವರ್) ತರದವರನ್ನು ಇನ್ನೂ ನೂರು ಜನರನ್ನು ಕಳಿಸಲಿ, ನಾನು ಹೆದರಿ ಪಲಾಯನ ಮಾಡುವ ಪೈಕಿ ಅಲ್ಲ ಎಂದು ಗುಡುಗಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕೊಳಕು ಮಾಡಿ ಹಾಳು ಮಾಡಿದ್ದು ಅವರು. ಅದನ್ನೆಲ್ಲ ನಾನು ಈಗ ನಾನು ಕ್ಲೀನ್ ಮಾಡುತ್ತಿದ್ದೇನೆ. ಸಿ.ಪಿ.ಯೋಗೇಶ್ವರ್ ಅಂಬೇಡ್ಕರ್ ಭವನ ಕಟ್ಟುವುದಕ್ಕೆ ಕೂಡ ಬಿಡುತ್ತಿಲ್ಲ. ವಿನಾಕಾರಣ ಚನ್ನಪಟ್ಟಣ ಜನರಿಗೆ ತೊಂದರೆ ಕೊಡ್ತಾ ಇದ್ದಾರೆ. ಚನ್ನಪಟ್ಟಣಕ್ಕೆ ಯೋಗೇಶ್ವರ್ ಅಂತಹ 100 ಜನರನ್ನ ಕರೆದುಕೊಂಡು ಬನ್ನಿ, ನಾನು ಯಾವುದಕ್ಕೂ ತಲೆ ಕೆಡೆಸಿಕೊಳ್ಳೋದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೇರವಾಗಿ ಚಾಟಿ ಬೀಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ

ಗುದ್ದಲಿ ಪೂಜೆ ಮಾಡಬೇಕಾದರೆ ನಿಯಮ ಏನಿದೆ ಎನ್ನುವುದು ಇವರಿಗೆ ಗೊತ್ತಿಲ್ಲವೆ? ಈ ಸರಕಾರಕ್ಕೆ ಶಿಷ್ಟಾಚಾರ ಏನೆಂಬುದು ಗೊತ್ತಿಲ್ಲವೇ? ಸ್ವಲ್ಪವಾದರೂ ವಿವೇಚನೆ ಬೇಡವೇ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಚನ್ನಪಟ್ಟಣ ತಹಶೀಲ್ದಾರ್ ವಿರುದ್ಧವೂ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು; ನನ್ನ ಕ್ಷೇತ್ರದಲ್ಲಿ ಬಂದು ಆತ ಆಟವಾಡುತ್ತಿದ್ದಾರೆ. ಮುಂದಿನ ಆರು ತಿಂಗಳ ಬಳಿಕ ಆತ ಎಲ್ಲಿರುತ್ತರೆ ಎನ್ನುವುದು ಗೊತ್ತಿದೆ. ನಮ್ಮ ಕುಟುಂಬದಲ್ಲಿ ಇಂಥವರನ್ನು ಲಕ್ಷಾಂತರ ಜನರನ್ನು ನೋಡಿದ್ದೇವೆ. ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಲೂಟಿ ಹೊಡೆಯುತ್ತಿದ್ದಾರೆ. ಕೆಲ ಕಳ್ಳರ ಜೊತೆ ಸೇರಿ ಆ ತಹಶೀಲ್ದಾರ್ ರೈತರಿಗೆ ತೊಂದರೆ ಕೊಡ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು

ನಾನು ಯಾರಿಗೋ ಹೆದರಿ ರಾಮನಗರ ಬಿಟ್ಟು ಹೋಗುವ ಮಗ ಅಲ್ಲ. ನಾನು ದೇವೇಗೌಡರ ಕುಟುಂಬದಲ್ಲಿ ಹುಟ್ಟಿರೋದು. ಎಲ್ಲದಕ್ಕೂ ಹೋರಾಟ ಮಾಡುವ ಶಕ್ತಿ ನಮ್ಮ ಅಪ್ಪ ನನಗೆ ಕೊಟ್ಟಿದ್ದಾರೆ. ನಾನು ಚನ್ನಪಟ್ಟಣದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯದ 120ಕ್ಕೂ ಹೆಚ್ಚು ಕಡೆ ನಾನು ಸಂಚಾರ ಮಾಡಬೇಕು. ನನ್ನ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸುತ್ತಾರೆ ಎಂದು ರಾಜಕೀಯ ವಿರೋಧಿಗಳಿಗೆ ಹೆಚ್‌.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತರ ಘಟದ ಅಧ್ಯಕ್ಷ ಸೈಯ್ಯದ್ ಫಾಜಿಲ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಹಾಜರಿದ್ದರು.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ