ಮತ್ತೊಮ್ಮೆ ಬೆಳಗಾವಿ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾದ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಮುಂದಿನ 2 ತಿಂಗಳೊಳಗೆ ಬೆಳಗಾವಿ, ಚಿಕ್ಕೋಡಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.

ಮತ್ತೊಮ್ಮೆ ಬೆಳಗಾವಿ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾದ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು
ಸತೀಶ್ ಜಾರಕಿಹೊಳಿ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: Jul 15, 2023 | 2:54 PM

ಬೆಳಗಾವಿ: 2019ರಲ್ಲಿ ನಡೆದಿದ್ದ  ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋತರೂ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದ್ದ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಹೌದು…ಮುಂದಿನ ವರ್ಷ ಅಂದ್ರೆ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಬೆಳಗಾವಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಇಂದು(ಜುಲೈ 15) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಬೆಳಗಾವಿ ಜಿಲ್ಲೆಯ ಶಾಸಕರ ಜೊತೆ ಸಭೆ ಮಾಡಿ ಚರ್ಚಿಸಿದ್ದೇನೆ. ಮುಂದಿನ 2 ತಿಂಗಳೊಳಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಾಜಿ ಸಚಿವ ಯುಟರ್ನ್: ಲೋಕಸಭಾ ಟಿಕೆಟ್ ಮೇಲೆ ಮಾಜಿ ಸಚಿವ ವಿ.ಸೋಮಣ್ಣ ಕಣ್ಣು​, ಯಾವ ಕ್ಷೇತ್ರ?

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಮುಂದಿನ 2 ತಿಂಗಳೊಳಗೆ ಘೋಷಣೆಯಾಗಲಿದೆ. ಎರಡೂ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಸ್ಥಳೀಯ ಶಾಸಕರು, ಮುಖಂಡರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಕುಟುಂಬ ಎರಡನೇ ಸ್ಥಾನದಲ್ಲಿ ಇರಲಿದೆ. ಪಕ್ಷ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೇಳಿದರೆ ನಿಲ್ಲುತ್ತೇನೆ. ಅವಶ್ಯಕತೆ ಇದ್ದರೆ ನಮ್ಮ ಕುಟುಂಬದಿಂದಲೇ ಅಭ್ಯರ್ಥಿ ನಿಲ್ಲಿಸುತ್ತೇವೆ ಎಂದು ಪರೋಕ್ಷವಾಗಿ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಸುಳಿವು ನೀಡಿದರು.

ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ 135 ಸ್ಥಾನಗಳಲ್ಲಿ ಗೆಲ್ಲುವುದರ ಮೂಲಕ ಅಧಿಕಾರಕ್ಕೇರಿರುವ ಕಾಂಗ್ರೆಸ್ ಇದೀಗ ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ. ವಿಧಾನಸಭೆಯಲ್ಲಿ ಗೆದ್ದ ಉತ್ಸಹದಲ್ಲಿರುವ ಕಾಂಗ್ರೆಸ್, ಕಾಂಗ್ರೆಸ್​ದಲ್ಲಿ ಕನಿಷ್ಠ 15 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಹೀಗಾಗಿ ಈಗಿನಿಂದಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಿದ್ಧತೆ ನಡೆಸಿದ್ದಾರೆ. ಅಲ್ಲದೇ ಚುನಾವಣೆಗೆ ತಯಾರಾಗುವಂತೆ ನಾಯುಕರಿಗೆ ಸೂಚನೆ ನೀಡಿದ್ದಾರೆ. ​ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದಿದ್ದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಅಲ್ಪಮತಗಳಿಂದ ಸೋಲು ಕಂಡಿದ್ದರು. ಬಿಜೆಪಿಯ ಮಂಗಳ ಅಂಗಡಿ ವಿರುದ್ಧ ಕಣಕ್ಕಿಳಿದಿದ್ದ ಸತೀಶ್​ ಜಾರಕಿಹೊಳಿ ಪ್ರಬಲ ಪೈಪೋಟಿ ನೀಡುವ ಮೂಲಕ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದ್ದರು. ಬಿಜೆಪಿ ಭದ್ರಕೋಟೆಯಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಸ್ಪರ್ಧೆಯಿಂದ ಕಾಂಗ್ರೆಸ್​ನ ಶಕ್ತಿ ಹೆಚ್ಚಿಸಿತ್ತು. ಹೀಗಾಗಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಗೆಲುವ ಸಾಧಿಸುವಲ್ಲಿ ಸಹಾಯಕವಾಯ್ತು. ಇದೀಗ ಮತ್ತೆ ಬೆಳಗಾವಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ಸಜ್ಜಾಗಿದ್ದು, ಮತ್ತೆ ಸತೀಶ್ ಜಾರಕಿಹೊಳಿಯನ್ನು ಅಖಾಡಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ.

ಒಂದು ವೇಳೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ, ಯಮಕನಮರಡಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಟಿಕೆಟ್ ಸತೀಶ್ ಜಾರಕಿಹೊಳಿ ಪುತ್ರನಿಗೆ ನೀಡುವ ಬಗ್ಗೆಯೂ ಸಹ ಚರ್ಚೆಗಳು ನಡೆದಿವೆ.

ಒಟ್ಟಿನಲ್ಲಿ ಬೆಳಗಾವಿಯಲ್ಲಿ ತಮ್ಮದೇ ಹಿಡಿತ ಹೊಂದಿರುವ ಸತೀಶ್ ಜಾರಕಿಹೊಳಿ ಈ ಬಾರಿ ಲೋಕಸಭಾ ಚುನಾವಣೆಯ ಕಾಂಗ್ರೆಸ್​ ಪಾಲಿನ ಪ್ರಮುಖ ಅಸ್ತ್ರವಾಗಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ