AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬಿಜೆಪಿ ಸೇರ್ಪಡೆ: ಬೆಂಬಲಿಗರ ಸಭೆ ಬಳಿಕ ಜನಾರ್ದನ ರೆಡ್ಡಿ ಅಧಿಕೃತ ಘೋಷಣೆ

Gali janardhan reddy: ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ಸಂಬಂಧ ಇಂದು ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೆಆರ್‌ಪಿಪಿ ಕಾರ್ಯಕರ್ತರ ಸಭೆ ನಡೆಸಿದ್ದು, ಸಭೆಯಲ್ಲಿ ಕೆಆರ್​ಪಿಪಿಯನ್ನು ಬಿಜೆಪಿ ಪಕ್ಷದೊಂದಿಗೆ ವಿಲೀನಗೊಳಿಸಲು ಸರ್ವ ಸದಸ್ಯರು ಸಮ್ಮಿತಿಸಿದ್ದಾರೆ. ಇನ್ನು ಸಭೆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ರೆಡ್ಡು, ಬಿಜೆಪಿ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿ ಘೋಷಿಸಿದರು.

ನಾಳೆ ಬಿಜೆಪಿ ಸೇರ್ಪಡೆ: ಬೆಂಬಲಿಗರ ಸಭೆ ಬಳಿಕ ಜನಾರ್ದನ ರೆಡ್ಡಿ ಅಧಿಕೃತ ಘೋಷಣೆ
ಜನಾರ್ದನ ರೆಡ್ಡಿ
ರಮೇಶ್ ಬಿ. ಜವಳಗೇರಾ
|

Updated on: Mar 24, 2024 | 5:18 PM

Share

ಬೆಂಗಳೂರು, (ಮಾರ್ಚ್ 24): ಕೆಆರ್​ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುಉದು ಖಚಿತವಾಗಿದೆ. ಅಲ್ಲದೇ ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಗಿದೆ. ಇಂದು (ಮಾರ್ಚ್ 24) ಬೆಂಗಳೂರಿನಲ್ಲಿ ನಡೆದ ಕೆಆರ್​ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಇನ್ಜು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾಯಕರ ಆಹ್ವಾನದ ಮೇರೆಗೆ ನಾಳೆ (ಮಾರ್ಚ್ 25) ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.

ಬೆಂಗಳೂರಿನನಲ್ಲಿರುವ ತಮ್ಮ ಪಾರಿಜಾತ ನಿವಾಸದಲ್ಲಿ ಪದಾಧಿಕಾರಿಗಳು, ಬೆಂಬಲಗರ ಸಭೆ ನಡೆಸಿದ ಜನಾರ್ದನ ರೆಡ್ಡಿ, ಬಿಜೆಪಿ ನಾಯಕರು ನೀಡಿದ ಆಹ್ವಾನದ ಬಗ್ಗೆ ಮುಕ್ತವಾಗಿ ಚರ್ಚಿಸಿದರು. ಅಲ್ಲದೇ ಸಭೆಯಲ್ಲಿ ಬಿಜೆಪಿ ಜತೆ ಕೆಆರ್‌ಪಿಪಿ ಪಕ್ಷದ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಯ್ತು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲಾ‌ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಮಾರ್ಚ್ 25 ಬೆಳಗ್ಗೆ ಬಿಜೆಪಿ ಸೇರ್ಪಡೆ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ (ಮಾರ್ಚ್ 25) ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲಾ ಬೆಂಬಲಿಗರ ಅಭಿಪ್ರಾಯ ಪಡೆದಿದ್ದೇನೆ. ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ಅಭಿವೃದ್ಧಿಯಾಗಿದೆ. ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಈ ನಿರ್ಧಾರ ಮಾಡಿದ್ದೇನೆ. KRPP ಸ್ಥಾಪನೆ ವೇಳೆ ಬಿಎಸ್​​ವೈರನ್ನು ತಂದೆ ರೀತಿ ನೋಡುತ್ತೇನೆ ಎಂದಿದ್ದೆ. ಮಾಜಿ ಸಚಿವ ಶ್ರೀರಾಮುಲು ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಮೋದಿರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.

ಬಿಜೆಪಿಗೆ ಅತೀ‌ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯೆದಲ್ಲಿ ಏನೆನ್ನೆಲ್ಲಾ ಆಯ್ತು. ಅದು ನಿಮಗೂ ಗೊತ್ತು. ನಾನು ಕೂಡ ಬಿಜೆಪಿ ಸೇರ್ಪಡೆಯಾಗೋದಕ್ಕೂ ಮುನ್ನ ಬೆಂಬಲಿಗರ ಜೊತೆ ಸಭೆ ಮಾಡಿದ್ದೇನೆ. ಪಕ್ಷದ ಬೆಂಬಲಿಗರು ಬಿಜೆಪಿ ಸೇರುವುದಕ್ಕೆ ಒಪ್ಪಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಜಯೇಂದ್ರ, ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ ‌ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ