ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?

ಮಂಡ್ಯ ರಾಜಕಾರಣ ಅಂದರೆ ಇಂಡಿಯಾನೇ ತಿರುಗಿ ನೋಡುತ್ತೆ. ಈಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆ ರಂಗು ಪಡೆದುಕೊಳ್ಳುತ್ತಿದೆ. ಇನ್ನು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಹುತೇಕ ಜೆಡಿಎಸ್​ನಿಂದಲೇ ಅಭ್ಯರ್ಥಿ ಘೋಷಣೆ ಆಗುವ ಸಂಭವ ಕೂಡ ಇದೆ. ಈ ನಡುವೆ ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿರೋ ಸಂಸದೆ ಸುಮಲತಾ ನಡೆ ಕುತೂಹಲ ಮೂಡಿಸಿದೆ

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ  ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?
ಸುಮಲತಾ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 25, 2023 | 6:36 PM

ಮಂಡ್ಯ, ಡಿ.25: ಲೋಕಸಭಾ ಚುನಾವಣೆ(Lok Sabha Elections)ಗೆ ಅಭ್ಯರ್ಥಿ ಆಗುತ್ತೇನೆ ಎನ್ನುವ ಗುಟ್ಟನ್ನ ಸಂಸದೆ ಸುಮಲತಾ(Sumalatha) ಬಿಟ್ಟು ಕೊಟ್ಟಂತಿದೆ.ಈಗಾಗಲೇ ಬಿಜೆಪಿಗೆ ತಮ್ಮ ಬೆಂಬಲ ಸಂಪೂರ್ಣ ಇದೆ ಎಂದು ಸುಮಲತಾ ಘೋಷಣೆ ಮಾಡಿದ್ದರು. ಮೊದಲೇ ಜೆಡಿಎಸ್ ಹಾಗೂ ಸಂಸದೆ ಸುಮಲತಾ ನಡುವೆ ಟೀಕಾಪ್ರಹಾರ ನಡೀತಿದೆ. ಈ ಮದ್ಯೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಹೇಳಿ ಕೇಳಿ ಮೊದಲೇ ಮಂಡ್ಯ ಜಿಲ್ಲೆಯು ಜೆಡಿಎಸ್​ನ ಭದ್ರಕೋಟೆ. ಶತಾಯ ಗತಾಯ ಇಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಗೆಲ್ಲಿಸಿಕೊಂಡು ತನ್ನ ಹಿಡಿತ ಸಾಧಿಸಲು ಹೊರಟಿದ್ದು, ಬಿಜೆಪಿಯಿಂದ ಸುಮಲತಾಗೆ ಟಿಕೆಟ್ ನೀಡುವುದು ಅನುಮಾನವಾಗಿದೆ. ಈ ನಡುವೆ ಬಿಜೆಪಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆನೂ ಕೂಡ ಸುಮಲತಾ ಏನು ಹೇಳುತ್ತಿಲ್ಲ.

 ಕುತೂಹಲ ಮೂಡಿಸಿದ ಸುಮಲತಾರ ನಡೆ

ಇನ್ನು ಈ ಕುರಿತು ಯಾವಾಗ ಕೇಳಿದರೂ ಮಂಡ್ಯ ಜನ ನನ್ನನ್ನ ಗೆಲ್ಲಿಸಿದ್ದಾರೆ. ಸ್ವಾಭಿಮಾನಕ್ಕೆ ಬೆಲೆ ಕೊಟ್ಟಿದ್ದಾರೆ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ನಾನು ಸ್ಪರ್ಧೆ ಮಾಡೋದಾದರೆ ಮಂಡ್ಯದಿಂದಲೇ ಎಂದು ಸಂಸದೆ ಸುಮಲತಾ ಹೇಳುತ್ತಾನೆ ಇದ್ದಾರೆ. ಆದ್ರೆ, ಈವರೆಗೂ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾತ್ರ ಹೇಳಿಲ್ಲ. ಈ ಮಧ್ಯೆ ಮೊನ್ನೆ ಕಾಟೇರ ಚಿತ್ರದ ಹಾಡು ಬಿಡುಗಡೆ ಸಂದರ್ಭ ನಟ ದರ್ಶನ್ ಕೂಡ ಸಂಸದೆ ಸುಮಲತಾಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿ ಎಂದು ಮನವಿ ಮಾಡೋ ಮೂಲಕ ಮತ್ತೆ ಸುಮಲತಾ ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ:Mandya: ಪಕ್ಷಗಳ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲಿ ಸ್ಪರ್ಧೆ ಖಚಿತ? ಸುಳಿವು ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇದೆಲ್ಲವನ್ನೂ ನೋಡಿದರೆ ಮತ್ತೆ ಮಂಡ್ಯ ಲೋಕಸಭಾ ಅಖಾಡದಲ್ಲಿ ಸುಮಲತಾ ಸ್ಪರ್ಧೆ ಫಿಕ್ಸ್ ಎನ್ನುವುದು ಖಾತ್ರಿಯಾಗಿದೆ. ಇಷ್ಟಲ್ಲದೆ ಸುಮಲತಾ ಕಾಂಗ್ರೆಸ್​ಗೆ ಬರುವುದು ಕಾಂಗ್ರೆಸ್ಸಿಗರಿಗೆ ಇಷ್ಟ ಇಲ್ಲ, ಒಟ್ಟಾರೆ ಸುಮಲತಾ ಬಿಜೆಪಿಯಿಂದ ಅಭ್ಯರ್ಥಿ ಆಗ್ತಾರಾ?, ಕಾಂಗ್ರೆಸ್​ನಿಂದ ನಿಲ್ತಾರಾ? ಅಥವಾ ಕಳೆದ ಭಾರಿಯಂತೆ ಸ್ವತಂತ್ರ ಅಭ್ಯರ್ಥಿ ಆಗಿ ಅಕಾಡಕ್ಕೆ ಇಳಿತಾರಾ? ಕಾದು ನೋಡಬೇಕಿದೆ. ಅದೇನೇ ಆಗಲಿ ಸಂಸದೆ ಸುಮಲತಾ ಮಾತ್ರ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಖಚಿತವಾದಂತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Mon, 25 December 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ