ನನಗೆ ರಾಜಕೀಯ ಸಾಕಾಗಿದೆ, ಮಗನಿಗೆ ಟಿಕೆಟ್ ಕೊಡಿಸುತ್ತೇನೆ: ಚುನಾವಣಾ ಕಣದಿಂದ ಹಿಂದೆ ಸರಿದ ಎಂಟಿಬಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳು ಬಾಕಿ ಇರುವಾಗಲೇ ಎಂಬಿಟಿ ನಾಗರಾಜ್ ಅಖಾಡದಿಂದ ಹಿಂದೆ ಸರಿಯುವ ಮಾತುಳನ್ನಾಡಿದ್ದಾರೆ.

ನನಗೆ ರಾಜಕೀಯ ಸಾಕಾಗಿದೆ, ಮಗನಿಗೆ ಟಿಕೆಟ್ ಕೊಡಿಸುತ್ತೇನೆ: ಚುನಾವಣಾ ಕಣದಿಂದ ಹಿಂದೆ ಸರಿದ ಎಂಟಿಬಿ
mtb nagaraj
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 12, 2022 | 7:11 PM

ಚಿಕ್ಕಬಳ್ಳಾಪುರ: ಕಾಂಗ್ರೆಸ್​ ಬಿಟ್ಟು ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸೋಲುಕಂಡಿದ್ದ ಎಂಬಿಟಿ ನಾಗರಾಜ್​ (MTB Nagaraj) ಈ ಬಾರಿಯ ವಿಧಾನಸಭೆ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023 ಇನ್ನೇನು ಆರೇಳು ತಿಂಗಳು ಬಾಕಿ ಇರುವಾಗಲೇ ಅಖಾಡದಿಂದ ಹಿಂದೆ ಸರಿಯುವ ಮಾತುಳನ್ನಾಡಿದ್ದಾರೆ. ಆದ್ರೆ, ತಮ್ಮ ಬದಲಿಗೆ ಪುತ್ರನಿಗೆ ಅಖಾಡಕ್ಕಿಳಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಸ್ವತಃ ಸಚಿವ ಎಂಟಿಬಿ ನಾಗರಾಜ್ ಅವರೇ ಹೇಳಿದ್ದಾರೆ.

60-70 ಸ್ಥಾನ ಗೆದ್ರೆ ಬೆರಳು ಕಟ್ ಮಾಡಿಕೊಳ್ಳುತ್ತೇನೆ: ಕಾಂಗ್ರೆಸ್​ಗೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಸವಾಲ್​

ಚಿಕ್ಕಬಳ್ಳಾಪುರದಲ್ಲಿ ಇಂದು(ಅಕ್ಟೋಬರ್ 12) ಮಾತನಾಡಿರುವ ಎಂಟಿಬಿ ನಾಗರಾಜ್, ನನಗೆ ರಾಜಕೀಯ ಸಾಕಾಗಿದೆ. ಹಾಗಾಗಿ ಮುಂದಿನ ಚುನಾವಣೆ ಟಿಕೆಟ್ ಮಗನಿಗೆ ಕೊಡಿಸುತ್ತೇನೆ ಎಂದು ಘೋಷಣೆ ಮಾಡಿದರು.

ಮುಂದಿನ ಚುನಾವಣೆಯಲ್ಲಿ ಪುತ್ರ ನಿತೀಶ್​ಗೆ ಹೊಸಕೋಟೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಕೊಡಿಸುತ್ತೇನೆ. ನಾನು ಪರಿಷತ್ ಸದಸ್ಯನಾಗಿ ಇನ್ನೂ 3 ವರ್ಷಗಳ ಕಾಲ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

70 ವರ್ಷದ ರಾಜಕಾರಣಿಗಳಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿದರೆ ತಮ್ಮ ಪುತ್ರನಿಗೆ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮನವಿ ಮಾಡುತ್ತೇನೆ, ಹೊರತು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳಿಗೆ ಪಕ್ಷಾಂತರ ಮಾಡುವ ಜಾಯಮಾನ ನನ್ನದಲ್ಲ. 39 ವರ್ಷದಿಂದ ರಾಜಕಾರಣವನ್ನು ಮಾಡಿಕೊಂಡು ಬಂದಿದ್ದೇನೆ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂಬುದು ಶುದ್ಧ ಸುಳ್ಳು. ಬಿಜೆಪಿಯಲ್ಲಿದ್ದೇನೆ ಮುಂದೆಯೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಂಟಿಬಿ ನಾಗರಾಜ್ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಆದ್ರೆ, ಬದಲಾದ ರಾಜಕೀಯ ವಿದ್ಯಾಮನಗಳಿಂದ ಎಂಟಿಬಿ ನಾಗರಾಜ್ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಬಳಿಕ ಹೊಸಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂಟಿಬಿ, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಸೋಲುಕಂಡಿದ್ದರು.

ಬಿಜೆಪಿ ಸರ್ಕಾರ ಬರಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಂಟಿಬಿ ನಾಗರಾಜ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲಾಯ್ತು. ಇದೀಗ ಅವರು ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ.

Published On - 7:05 pm, Wed, 12 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ