AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ: ಸಿಡಿದೆದ್ದ ಯತ್ನಾಳ್

ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ನಿಂತಿವೆ. ಆದ್ರೆ ಇತ್ತ ಬಸನಗೌಡ ಪಾಟೀಲ್ ಯತ್ನಾಳ್, ಅಧಿವೇಶನದ ಮೊದಲ ದಿನವೇ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಬಹಿರಂಗವಾಗಿ ಗುಡುಗಿದ್ದಾರೆ. ಅಲ್ಲದೇ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಆಗುವವರೆಗೂ ಶಾಸಕಾಂಗ ಸಭೆಗೆ ಹೋಗುವುದಲ್ಲ ಎಂದಿದ್ದಾರೆ.

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ: ಸಿಡಿದೆದ್ದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on:Dec 04, 2023 | 11:19 AM

Share

ಬೆಳಗಾವಿ, (ಡಿಸೆಂಬರ್ 04): ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangpuda Patil Yatnal) ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್​ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು.

ಇದನ್ನೂ ಓದಿ: ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು, ಇನ್ನೂ ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಡಿ: ಬಿಎಸ್​ವೈ ವಿರುದ್ಧ ಯತ್ನಾಳ್​ ಕಿಡಿ

ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ಬದಲಾವಣೆಗೆ ಪಟ್ಟು

ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕನ ವಿಚಾರವಾಗಿ ಟಿವಿ9 ಸ್ಪಷ್ಟ ಸರ್ವೇ ಮಾಡಿದೆ. ನಾನು ರಾಜ್ಯಾಧ್ಯಕ್ಷನಾಗುವುದಕ್ಕೆ ಎಲ್ಲಾ ರೀತಿಯ ಅರ್ಹ ಇದೆ . ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ, ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಉತ್ತರ ಕರ್ನಾಟಕದ ಎಮ್ಎಲ್ಎಗಳು, ಎಂಪಿಗಳು ನಿಮಗೆ ಬೇಕು. ಆದರೆ ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕ ಆ ಹಳೆ ಮೈಸೂರು ಬಾಗದವರು ಆಗಬೇಕು ಎಂದು ಸ್ವಪಕ್ಷದ ವಿರುದ್ಧ ಗುಡುಗಿದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Mon, 4 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ