AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳಿ ಕಾಂಗ್ರೆಸ್​​ ಸೇರುತ್ತಾರೆ ಎನ್ನುವ ಸುದ್ದಿಗೆ ಸ್ಪಷ್ಟನೆ ಕೊಟ್ಟ ಸುಧಾಕರ್, ಎಲ್ಲಾ ಗೊಂದಲಗಳಿಗೆ ತೆರೆ

ಮಾಜಿ ಸಚಿವ ಡಾ.ಕೆ ಸುಧಾರ್ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡ ಬಳಿಕ ಇದೀಗ ಲೋಕಸಭಾ ಅಖಾಡಕ್ಕಿಳಿದಿದ್ದಾರೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಅವರನ್ನು ಭೇಟಿ ಬಳಿಕ ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಚುರುಕುಗೊಳಿಸಿದ್ದಾರೆ. ಇದರ ಮಧ್ಯೆ ಅವರು ಕಾಂಗ್ರೆಸ್​ಗೆ ವಾಪಸ್ ಆಗುತ್ತಾರೆ ಎನ್ನುವ ಸುದ್ದಿಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಖುದ್ದು ಸುಧಾಕರ್​ ಸ್ಪಷ್ಟನೆ ನೀಡಿದ್ದು, ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಮರಳಿ ಕಾಂಗ್ರೆಸ್​​ ಸೇರುತ್ತಾರೆ ಎನ್ನುವ ಸುದ್ದಿಗೆ ಸ್ಪಷ್ಟನೆ ಕೊಟ್ಟ ಸುಧಾಕರ್, ಎಲ್ಲಾ ಗೊಂದಲಗಳಿಗೆ ತೆರೆ
ಡಾ. ಕೆ ಸುಧಾಕರ್
ರಮೇಶ್ ಬಿ. ಜವಳಗೇರಾ
|

Updated on: Feb 22, 2024 | 5:17 PM

Share

ಬೆಂಗಳೂರು, (ಫೆಬ್ರವರಿ 22):​ ಮಾಜಿ ಸಚಿವ ಡಾ.ಕೆ ಸುಧಾಕರ್ (Dr K Sudhakar)ಅವರು ಬಿಜೆಪಿ ತೊರೆದು ಕಾಂಗ್ರೆಸ್​ಗೆ (Congress) ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿಹರಿದಾಡುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಸುಧಕಾರ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ ತತ್ವ, ಸಿದ್ಧಾಂತಗಳನ್ನು ನಂಬಿ ಬಿಜೆಪಿ ಸೇರಿದ್ದೇನೆ. ಈಗ ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದಾರೆ. ಈ ಮೂಲಕ ಸುಧಾಕರ್ ಅವರು ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದ್ದಾರೆ.

ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡು ಟ್ವೀಟ್ ಮಾಡಿರುವ ಸುಧಾಕರ್, ಪ್ರಧಾನಿ ನರೇಂದ್ರ ಮೋದಿಅ ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮರಳಿ ‘ಕೈ’ ಹಿಡಿಯುತ್ತಾರಾ ಮಾಜಿ ಸಚಿವ ಡಾ. ಕೆ ಸುಧಾಕರ್: ಕಾಂಗ್ರೆಸ್​​ನಲ್ಲಿ ಹೆಚ್ಚಾಯ್ತು ಚರ್ಚೆ

ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ ಎಂಬ ಊಹಾಪೋಹಗಳನ್ನು ಕೆಲವರು ಪದೇ ಪದೇ ಹುಟ್ಟುಹಾಕುತ್ತಿದ್ದು, ಮಾಧ್ಯಮಗಳು ಇಂತಹ ವದಂತಿಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಹಾಗೂ ಇತರ ನಾಯಕರ ಜೊತೆ ಚರ್ಚಿಸಿರುವ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿದ್ದಾರೆ ಎನ್ನುವ ಸುದ್ದಿಯಾಗಿತ್ತು. ಇದಕ್ಕೆ ಪೂಕರವೆಂಬಂತೆ ಮೂರು ದಿನಗಳ ಹಿಂದಷ್ಟೇ ಸೋಮಶೇಖರ್ ಜೊತೆ ಸುಧಾಕರ್ ಮಾತುಕತೆ ನಡೆಸಿದ್ದರು. ಇದಕ್ಕೆ ಹೊಸಕೋಟೆ ನಾಯಕನಿಂದ ಆಕ್ಷೇಪ ವ್ಯಕ್ತಪಡಿಸಿದ್ದರು ಸುದ್ದಿ ಹರಿದಾಡಿತ್ತು. ಮತ್ತೊಂದಡೆ, ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರ ನಿರ್ಧಾರದ ಮೇಲೆ ನಿಂತಿದೆ ಎನ್ನುವ ಸುದ್ದಿ ಹಬ್ಬಿತ್ತು. ಇದೀಗ ಅವರೇ ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆಬಿದ್ದಂತಾಗಿದೆ.

ಚಿಕ್ಕಬಳ್ಳಾಪುರ ಲೋಕಸಭೆದಿಂದ ಕಣಕ್ಕೆ?

ವಿಧಾನಸಭೆ ಸೋಲಿನ ಬಳಿಕ ಸುಧಾಕರ್ ಅವರ ಚಿತ್ತ ಇದೀಗ ಲೋಕಸಭಾ ಚುನಾವಣೆಯತ್ತ ನೆಟ್ಟಿದೆ. ಈಗಾಗಲೇ ಬಿಜೆಪಿ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿಬಂದು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರಿಗೆ ಟಿಕೆಟ್​ ಖಚಿತ ಎನ್ನಲಾಗುತ್ತಿದೆ. ಹೈಕಮಾಂಡ್​ನಿಂದ ಗ್ರೀನ್​ ಸಿಗ್ನಲ್​ ಸಿಕ್ಕ ಬಳಿಕವೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಲಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!