ಬೆಂಗಳೂರು, (ಫೆಬ್ರವರಿ 22): ಮಾಜಿ ಸಚಿವ ಡಾ.ಕೆ ಸುಧಾಕರ್ (Dr K Sudhakar)ಅವರು ಬಿಜೆಪಿ ತೊರೆದು ಕಾಂಗ್ರೆಸ್ಗೆ (Congress) ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿಹರಿದಾಡುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಸುಧಕಾರ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ ತತ್ವ, ಸಿದ್ಧಾಂತಗಳನ್ನು ನಂಬಿ ಬಿಜೆಪಿ ಸೇರಿದ್ದೇನೆ. ಈಗ ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದಾರೆ. ಈ ಮೂಲಕ ಸುಧಾಕರ್ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದ್ದಾರೆ.
ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡು ಟ್ವೀಟ್ ಮಾಡಿರುವ ಸುಧಾಕರ್, ಪ್ರಧಾನಿ ನರೇಂದ್ರ ಮೋದಿಅ ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಮರಳಿ ‘ಕೈ’ ಹಿಡಿಯುತ್ತಾರಾ ಮಾಜಿ ಸಚಿವ ಡಾ. ಕೆ ಸುಧಾಕರ್: ಕಾಂಗ್ರೆಸ್ನಲ್ಲಿ ಹೆಚ್ಚಾಯ್ತು ಚರ್ಚೆ
ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ ಎಂಬ ಊಹಾಪೋಹಗಳನ್ನು
ಕೆಲವರು ಪದೇ ಪದೇ ಹುಟ್ಟುಹಾಕುತ್ತಿದ್ದು, ಮಾಧ್ಯಮಗಳು ಇಂತಹ ವದಂತಿಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಶ್ರೀ @narendramodi ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ.
ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ…
— Dr Sudhakar K (@DrSudhakar_) February 22, 2024
ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಇತರ ನಾಯಕರ ಜೊತೆ ಚರ್ಚಿಸಿರುವ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿದ್ದಾರೆ ಎನ್ನುವ ಸುದ್ದಿಯಾಗಿತ್ತು. ಇದಕ್ಕೆ ಪೂಕರವೆಂಬಂತೆ ಮೂರು ದಿನಗಳ ಹಿಂದಷ್ಟೇ ಸೋಮಶೇಖರ್ ಜೊತೆ ಸುಧಾಕರ್ ಮಾತುಕತೆ ನಡೆಸಿದ್ದರು. ಇದಕ್ಕೆ ಹೊಸಕೋಟೆ ನಾಯಕನಿಂದ ಆಕ್ಷೇಪ ವ್ಯಕ್ತಪಡಿಸಿದ್ದರು ಸುದ್ದಿ ಹರಿದಾಡಿತ್ತು. ಮತ್ತೊಂದಡೆ, ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರ ನಿರ್ಧಾರದ ಮೇಲೆ ನಿಂತಿದೆ ಎನ್ನುವ ಸುದ್ದಿ ಹಬ್ಬಿತ್ತು. ಇದೀಗ ಅವರೇ ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆಬಿದ್ದಂತಾಗಿದೆ.
ವಿಧಾನಸಭೆ ಸೋಲಿನ ಬಳಿಕ ಸುಧಾಕರ್ ಅವರ ಚಿತ್ತ ಇದೀಗ ಲೋಕಸಭಾ ಚುನಾವಣೆಯತ್ತ ನೆಟ್ಟಿದೆ. ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಬಂದು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರಿಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕವೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಲಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ