AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ

ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಎಸ್​​ಟಿ ಸೋಮಶೇಖರ್​ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದು ಬಸವರಾಜ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ
ಭೈರತಿ ಬಸವರಾಜImage Credit source: Facebook
ಕಿರಣ್​ ಹನಿಯಡ್ಕ
| Edited By: |

Updated on:Aug 24, 2023 | 8:49 PM

Share

ಬೆಂಗಳೂರು, ಆಗಸ್ಟ್ 24: ಆಪರೇಷನ್​​ ಹಸ್ತದ ವದಂತಿಗಳು ಜೋರಾಗಿರುವ ಬೆನ್ನಲ್ಲೇ ಅತೃಪ್ತ ಶಾಸಕರನ್ನು, ನಾಯಕರನ್ನು ಮನವೊಲಿಸುವ ತಂತ್ರಕ್ಕೆ ಬಿಜೆಪಿ (BJP) ಮೊರೆ ಹೋಗಿದೆ. ಯಶವಂತಪುರದ ಶಾಸಕ ಎಸ್​ಟಿ ಸೋಮಶೇಖರ್​ ಜತೆ ಬಿಜೆಪಿ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರುವ ಕುರಿತ ವದಂತಿಗಳ ಬಗ್ಗೆ ಕೆಆರ್ ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ (Byrati Basavaraj) ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಭಾರತೀಯ ಜನತಾ ಪಕ್ಷ ತೊರೆಯಲ್ಲ. ನಾನು ಬಿಜೆಪಿ ಬಿಡುತ್ತಿದ್ದೇನೆಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಒಂದು ವೇಳೆ ನಾನು ಬಿಜೆಪಿ ಬಿಡುವ ಸಂದರ್ಭ ಒದಗಿ ಬಂದರೆ ನಿವೃತ್ತಿಯಾಗಿ ಮನೆಯಲ್ಲಿರುವೆ. ಅದರ ಬದಲು ಕಾಂಗ್ರೆಸ್ ಸೇರಲಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನಿಂದ ನನಗೆ ಆಹ್ವಾನ ಬಂದಿಲ್ಲ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಎಸ್​​ಟಿ ಸೋಮಶೇಖರ್​ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದು ಬಸವರಾಜ ಹೇಳಿದ್ದಾರೆ.

ಇದನ್ನೂ ಓದಿ: ಯಶವಂತಪುರ ಕ್ಷೇತ್ರದಲ್ಲಿ ಸುಂಟರಗಾಳಿ ಎದ್ದಿದೆ, ಇದು ನಮಗೆ ಎಚ್ಚರಿಕೆ ಗಂಟೆ; ಸೋಮಶೇಖರ್ ಭೇಟಿ ಬಳಿಕ ಹೀಗೆ ಹೇಳಿದ್ದೇಕೆ ಅಶೋಕ್?

ಈ ಮಧ್ಯೆ, ಎಸ್​ಟಿ ಸೋಮಶೇಖರ್ ಅವರು ಬಿಜೆಪಿ ನಾಯಕ ಆರ್. ಅಶೋಕ ಅವರನ್ನು ಭೇಟಿಯಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಿಕೊಡುವುದಾಗಿ ಆರ್ ಅಶೋಕ ಅವರು ಸೋಮಶೇಖರ್​​ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:49 pm, Thu, 24 August 23

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್