ಸಂಧಾನ ಯಶಸ್ವಿ: ಅಂತಿಮವಾಗಿ ತಮ್ಮ ರಾಜಕೀಯ ನಿಲುವು ಪ್ರಕಟಿಸಿದ ಸೋಮಣ್ಣ, ಬಿಜೆಪಿ ನಾಯಕರಿಗಿದ್ದ ಆತಂಕ ದೂರ

ಕೊನೆಗೂ ಬಿಜೆಪಿ ನಾಯಕರು ಸಚಿವ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಬಿಡಲ್ಲ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಆದ್ರೆ, ಇನ್ಮುಂದೆ ತೇಜೋವಧೆ ಮಾಡಬೇಡಿ ಎಂದು ಹೇಳಿದ್ದು ಅಚ್ಚರಿ ಮೂಡಿಸಿದೆ.

ಸಂಧಾನ ಯಶಸ್ವಿ: ಅಂತಿಮವಾಗಿ ತಮ್ಮ ರಾಜಕೀಯ ನಿಲುವು ಪ್ರಕಟಿಸಿದ ಸೋಮಣ್ಣ, ಬಿಜೆಪಿ ನಾಯಕರಿಗಿದ್ದ ಆತಂಕ ದೂರ
V Somanna
Follow us
|

Updated on:Mar 14, 2023 | 1:50 PM

ಬೆಂಗಳೂರು: ಕೆಲ ಕಾರಣಗಳಿಂದ ಪಕ್ಷದ ನಾಯಕರ ಮೇಲೆ ಮುನಿಸಿಕೊಂಡಿದ್ದ ಸಚಿವ ವಿ, ಸೋಮಣ್ಣ(V Somanna) ಬಿಜೆಪಿ ಬಿಟ್ಟು ಕಾಂಗ್ರೆಸ್(Congress) ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಿಂದ ಸೊಮಣ್ಣ ಕಾಂಗ್ರೆಸ್ ಸೇರ್ಪಡೆ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಬಿಜೆಪಿ ಪ್ರಮುಖ ನಾಯಕರು ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟು ದಿನಗಳಿಂದ ನಿಗೂಢ ನಡೆ ಇಟ್ಟುಕೊಂಡು ಬಂದಿದ್ದ ಸೋಮಣ್ಣ, ಇದೀಗ ಈ ಬಗ್ಗೆ ಮೌನ ಮುರಿದಿದ್ದು, ಇನ್ಮುಂದೆ ತೇಜೋವಧೆ ಮಾಡಬೇಡಿ ಎಂದು ಹೇಳುವ ಮೂಲಕ ತಮ್ಮ ರಾಜಕೀಯ ನಿಲುವು ಪ್ರಕಟಿಸಿದ್ದಾರೆ. ಅಲ್ಲದೇ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಸೋಮಣ್ಣ-ಡಿಕೆಶಿ ಜೊತೆ ಜೊತೆಯಲಿ ಫೋಟೋ ವೈರಲ್​: ಎಲ್ಲಾ ಊಹಾಪೋಹಗಳಿಗೆ ಸ್ಪಷ್ಟನೆ ಕೊಟ್ಟ ಉಭಯ ನಾಯಕರು

ಬೆಂಗಳೂರಿನಲ್ಲಿ ಇಂದು(ಮಾರ್ಚ್ 14) ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ​​ ನಾನು ಕಾಂಗ್ರೆಸ್​​ಗೆ ಹೋಗುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನನ್ನನ್ನು ಸಂಪರ್ಕಿಸಿಲ್ಲ. ನಾನು ಕಾಂಗ್ರೆಸ್​ಗೆ ಹೋಗುತ್ತೇನೆಂದು ವದಂತಿ ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗೊಂದಲಳಿಗೆ ತೆರೆ ಎಳೆದರು.

ಪ್ರಧಾನಿ ಮೋದಿ, ಬೊಮ್ಮಾಯಿ ನಾಯಕತ್ವದಲ್ಲಿ ಕೆಲಸ ಮಾಡುತ್ತೇನೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ನಾಯಕ, ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರ್ಪಡೆಯಾಗಲ್ಲ.  ನಾನು ಎಲ್ಲಿಗೂ ಹೋಗಲ್ಲ. ಬಿಜೆಪಿಯಲ್ಲೇ ಇರುತ್ತೇನೆ. ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ.  ಮಂತ್ರಿಯಾಗಿ ಯಾರಿಗೂ ಅಪಚಾರ ಮಾಡುವುದಿಲ್ಲ. ಬಿಜೆಪಿಯಲ್ಲಿ ನನಗೆ ಗೌರವ ನೀಡಿದ್ದಾರೆ. ಮುಂದಿನ ಚುನಾವಣೆಗೆ ಟಿಕೆಟ್ ನೀಡಿದ್ರೆ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ರೆ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಅಚ್ಚರಿ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಜೆಪಿಯ ಪ್ರಮುಖ ನಾಯಕರು, ಬಿಎಸ್‌ವೈ ಜತೆ ಸಿಎಂ ಬೊಮ್ಮಾಯಿ ರಹಸ್ಯ ಸಭೆ

ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವರು ಆರೋಗ್ಯವಾಗಿ ಇರಲಿ. ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಶಿ ನಮ್ಮ ನಾಯಕರು. ನಾನು ಬಿಜೆಪಿಗೆ ಬರಲು ಅನಂತ್ ಕುಮಾರ್ ಕಾರಣ. ಇನ್ನು ಮುಂದಾದರೂ ತೇಜೋವಧೆ ಮಾಡಬೇಡಿ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ಚೆನ್ನಾಗಿರಲಿ ಎಂದು ಹೇಳುವ ಮೂಲಕ ಬಿಜೆಪಿಯಲ್ಲೇ ಇರುವುದಾಗಿ ಪ್ರಕಟಿಸಿದರು.

ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಬೆನ್ನ ಹಿಂದೆಯೇ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನಗಳನ್ನ ಸಿಎಂ ಬೊಮ್ಮಾಯಿ ಮತ್ತಿತರರು ಮಾಡಿದ್ದರು. ಸಚಿವ ಅಶೋಕ್​ ಸಹ ಸೋಮಣ್ಣ ಮನವೊಲಿಸುವ ಪ್ರಯತ್ನ ಮಾಡಿದ್ದರು. ಅಂತಿಮವಾಗಿ ಅಶೋಕ್ ಮೊನ್ನೇ ಅಷ್ಟೇ​ ಸೋಮಣ್ಣನವರನ್ನು ಸಿಎಂ ಬಸವರಾಜ ಬೊಮ್ಮಾಯಿ ಬಳಿ ಕರೆದುಕೊಂಡು ಹೋಗಿ ಮಾತುಕತೆ ಮಾಡಿದ್ದರು. ಆ ವೇಳೆ ಸಿಎಂ ಬೊಮ್ಮಾಯಿ ಸೋಮಣ್ಣ ಅವರನ್ನು ಸಮಧಾನ ಮಾಡುವಲ್ಲಿ ಯಶಸ್ವಿಯಾದ್ದಾರೆ. ಅಲ್ಲದೇ ಖುದ್ದು ಬಿಎಸ್ ಯಡಿಯೂರಪ್ಪ ಸಹ ಸೋಮಣ್ಣ ಜೊತೆ ಮಾತನಾಡುವೆ ಎಂದು ಹೇಳಿದ್ದರು.

ಹುಬ್ಬಳ್ಳಿಯಲ್ಲಿ ಸಂಧಾನ ಯಶಸ್ವಿ

ಧಾರವಾಡದಲ್ಲಿ ನಡೆದ ಐಐಟಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಂದಿದ್ದ ವಿ.ಸೋಮಣ್ಣರನ್ನು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದ ನಾಯಕರು ಸಂಧಾನ ಸಭೆ ನಡೆಸಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಉಪಹಾರ ಸೇವನೆ ಮಾಡುತ್ತಲೇ ಚರ್ಚೆ ನಡೆಸಿದರು‌. ಬರೋಬ್ಬರಿ ಒಂದು ಗಂಟೆಗಳ ವಿ.ಸೋಮಣ್ಣರೊಂದಿಗೆ ಸಭೆ ಮಾಡಿ ಮನವೊಲಿಸುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯಶಸ್ವಿಯಾಗಿದ್ದಾರೆ.ಒಂದು ಹಂತದಲ್ಲಿ ಮಾತುಕತೆಗೆ ಮನವೊಲಿಕೆಯಾಗಿದ್ದಾರೆ ಎನ್ನುವ ವಿಶ್ವಾಸದಲ್ಲಿ ಬಿಜೆಪಿ ಮುಖಂಡರಿದ್ದರು. ಆದ್ರೆ, ಇದೀಗ ಸೋಮಣ್ಣ ಅವರೇ ಬಿಜೆಪಿ ಬಿಡಲ್ಲ, ಕಾಂಗ್ರೆಸ್​ಗೆ ಹೋಗಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದು, ಬಿಜೆಪಿ ನಾಯಕರಿಗಿದ್ದ ಆತಂಕ ದೂರವಾಗಿದೆ.

Published On - 1:49 pm, Tue, 14 March 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ