AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೆ ವಿಪಕ್ಷ ನಾಯಕನಿ​ಗೆ ಶುಭ ಕೋರುವುದಿಲ್ಲ: ಯತ್ನಾಳ್

ಸದನದಲ್ಲಿ ಇಂದು ವಿಪಕ್ಷ ನಾಯಕರ ಆರ್​.ಅಶೋಕ್​ ಅವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಭಕೋರಿಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೂ ನಾನು ಶುಭಕೋರುವುದಿಲ್ಲ ಎಂದಿದ್ದಾರೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಯತ್ನಾಳ್ ಇಂದು ಹೇಳಿಕೆ ನೀಡಿದ್ದರು.

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೆ ವಿಪಕ್ಷ ನಾಯಕನಿ​ಗೆ ಶುಭ ಕೋರುವುದಿಲ್ಲ: ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಆರ್ ಅಶೋಕ್
Anil Kalkere
| Edited By: Rakesh Nayak Manchi|

Updated on: Dec 04, 2023 | 8:21 PM

Share

ಬೆಳಗಾವಿ, ಡಿ.4: ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಇಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಅವರಿಗೆ ಶುಭ ಕೋರಿಲ್ಲ. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, ಎಲ್ಲಿಯವರೆಗೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವುದಿಲ್ಲವೋ ಅಲ್ಲಿಯತನಕ ನಾನು ಶುಭ ಕೊರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಉತ್ತರ ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಅಲ್ಲಿಯತನಕ ನಾನು ಶುಭ ಕೋರುವುದಿಲ್ಲ ಎಂದು ಯತ್ನಾಳ್ ಹೇಳಿದರು. ನಿಮ್ಮ ಕೋಪ ಯಾರ ವಿರುದ್ಧವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ನನ್ನ ಹೋರಾಟ ಉತ್ತರ ಕರ್ನಾಟಕದ ಪರವಾಗಿ ಎಂದರು.

ಪಿಸಿಐ ಪರೀಕ್ಷೆ ಮುಂದೂಡಿಕೆ ಮತ್ತು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಲು ಅಧ್ಯಕ್ಷರು ಅವಕಾಶ ಮಾಡಿಕೊಟ್ಟರು. ನನ್ನ ಹೋರಾಟಕ್ಕೆ ಎಲ್ಲರು ಮಣಿಯುತ್ತಾರೆ. ನಾನು ಎರಡು ಹೋರಾಟವನ್ನ ಗೆದ್ದಿದೇನೆ ಎಂದು ಯತ್ನಾಳ್ ಹೇಳಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಪಿಎಸ್​ಐ ಹಗರಣದಲ್ಲಿ ಭಾಗಿಯಾಗಿರುವವರನ್ನು ಚೆನ್ನಾಗಿ ತದುಕಿ ಜೈಲಿಗೆ ಹಾಕಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಇಂದು ಬೆಳಗ್ಗೆ ಮಾತನಾಡಿದ್ದ ಯತ್ನಾಳ್, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಶಾಸಕಾಂಗ ಪಕ್ಷದ ಸಭೆಗೆ ಹೋಗುವುದಿಲ್ಲ ಎಂದಿದ್ದರು. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ ಎಂದಿದ್ದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್