15 ಲಕ್ಷ ರೂ. ಕೊಡುತ್ತೇವೆ ಎಂದು ಮೋದಿ ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ: ಎ.ನಾರಾಯಣಸ್ವಾಮಿ

ಕಾಂಗ್ರೆಸ್​ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಆರೋಪಿಸಿದ್ದಾರೆ.

15 ಲಕ್ಷ ರೂ. ಕೊಡುತ್ತೇವೆ ಎಂದು ಮೋದಿ ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ: ಎ.ನಾರಾಯಣಸ್ವಾಮಿ
ಎ ನಾರಾಯಣಸ್ವಾಮಿ ಮತ್ತು ಸಿದ್ದರಾಮಯ್ಯ
Follow us
Rakesh Nayak Manchi
|

Updated on: Jun 02, 2023 | 4:57 PM

ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳನ್ನು ವಿಧಿಸುವುದಾಗಿ ಹೇಳಿದಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಯೊಬ್ಬರ ಅಕೌಂಟ್​ಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿದ್ದರು, ಕೊಟ್ಟಿದ್ದಾರಾ? ಎಂದು ವಿಪಕ್ಷಗಳು ಹಾಗೂ ಕಾರ್ಯಕರ್ತರು ಪ್ರಶ್ನಿಸಲು ಆರಂಭಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ (A Narayanaswamy), ಸಿದ್ಧರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಅವರು ನೀಡಿದ ‘ಗ್ಯಾರಂಟಿ’ ಹೇಳಿಕೆಗಳು ಎಲ್ಲರ ಬಳಿ ಇವೆ. 15 ಲಕ್ಷ ಬಗ್ಗೆ ನರೇಂದ್ರ ಮೋದಿ ಅವರು ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ, ಕ್ಷಮೆ ಕೇಳುತ್ತೇನೆ. 15 ಲಕ್ಷ ರೂ. ಕೊಡುತ್ತೇವೆ ಎಂದು ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್​ ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸಿದ ನಾರಾಯಣಸ್ವಾಮಿ, ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಆರೋಪಿಸಿದ್ದಾರೆ. ಜನರನ್ನು ಭಿಕ್ಷಾಟನೆ ಸರದಿಗೆ ನಿಲ್ಲಿಸಿ ಅಧಿಕಾರ ಪಡೆಯಲು ಷಡ್ಯಂತ್ರ ನಡೆಸಿದೆ. ಸ್ವತಂತ್ರ್ಯ ಹೋರಾಟಗಾರರ ಕನಸು ನುಚ್ಚುನೂರು ಮಾಡಿ, ಕಾಂಗ್ರೆಸ್ ಸಿದ್ಧಾಂತ ಗಾಳಿಗೆ ತೂರಿ ಮತದಾರರಿಗೆ ಆಮಿಷವೊಡ್ಡಿದೆ. ಕಾಂಗ್ರೆಸ್​ನಿಂದ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೆಲಸ ನಡೆದಿದೆ. ಸಿದ್ಧಾಂತದಿಂದ ಗೆದ್ದೆವು ಎನ್ನುವ ಎದೆಗಾರಿಕೆ ಕಾಂಗ್ರೆಸ್ ನಾಯಕರಿಗಿಲ್ಲ. ಗ್ಯಾರಂಟಿ ಕಾರ್ಡ್ ಮೂಲಕ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದರು.

ಇದನ್ನೂ ಓದಿ: Yuva Nidhi Scheme: 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’, ತೃತೀಯ ಲಿಂಗಿಗಳಿಗೂ ಯೋಜನೆ ಭಾಗ್ಯ

ರಾಜ್ಯದ ಸಚಿವರಿಗೆ ಪ್ರಕೃತಿ ವಿಕೋಪ ಬಗ್ಗೆ ಗಮನಹರಿಸಲು ಸಮಯವಿಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಕಳೆದ 15 ದಿನಗಳಿಂದ ಗ್ಯಾರಂಟಿ ಕಾರ್ಡ್​ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಗ್ಯಾರಂಟಿ ಕಾರ್ಡ್​ಗಾಗಿ ಐದು ವರ್ಷದ ಸರ್ಕಾರ ಎಂಬ ಚಿಂತನೆ ಮೂಡಿದೆ ಎಂದು ಕೇಂದ್ರ ಸಚಿವರು ಟೀಕಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ