ಸಿದ್ದರಾಮಯ್ಯ ಸಂಪುಟ ಸರ್ಜರಿಗೆ ಕಾರಣವಾಗಲಿದೆಯೇ ಲೋಕಸಭೆ ಚುನಾವಣೆ? ಕಾಂಗ್ರೆಸ್ ಮೂಲಗಳು ನೀಡಿದ ಸುಳಿವು ಇಲ್ಲಿದೆ

ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವಲ್ಲಿ ವಿಫಲರಾದವರನ್ನು ಸಚಿವ ಸಂಪುಟದಿಂದ ತೆಗೆದುಹಾಕುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗಮನಾರ್ಹ ಸುಧಾರಣೆ ಕಾಣುವಲ್ಲಿ ವಿಫಲವಾದರೆ ಕೆಲವು ಸಚಿವರನ್ನು ಬಲಿಪಶುಗಳನ್ನಾಗಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಕಾಂಗ್ರೆಸ್​​ ನಾಯಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.

ಸಿದ್ದರಾಮಯ್ಯ ಸಂಪುಟ ಸರ್ಜರಿಗೆ ಕಾರಣವಾಗಲಿದೆಯೇ ಲೋಕಸಭೆ ಚುನಾವಣೆ? ಕಾಂಗ್ರೆಸ್ ಮೂಲಗಳು ನೀಡಿದ ಸುಳಿವು ಇಲ್ಲಿದೆ
ಡಿಕೆ ಶಿವಕುಮಾರ್ & ಸಿದ್ದರಾಮಯ್ಯ
Follow us
Ganapathi Sharma
|

Updated on: Oct 24, 2023 | 4:06 PM

ಬೆಂಗಳೂರು, ಅಕ್ಟೋಬರ್ 24: ಮುಂಬರುವ ಲೋಕಸಭಾ ಚುನಾವಣೆ(Lok Sabha Election) ಫಲಿತಾಂಶವು ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರದ ಮೇಲೆ ಪ್ರಭಾವ ಬೀರುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಮಾತ್ರವಲ್ಲದೆ ಇತರ ಸಚಿವರಿಗೂ ಸಹ ಪಕ್ಷದ ಹೈಕಮಾಂಡ್ ಗೆಲುವಿಗಾಗಿ ನಿರ್ದಿಷ್ಟ ಗುರಿ ನೀಡಿದೆ. ಸಚಿವರು ತಮ್ಮ ವ್ಯಾಪ್ತಿಯ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇಲ್ಲವಾದಲ್ಲಿ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ ಅವರಿಗೆ ಎದುರಾಗಲಿದೆ ಎಂದು ಮೂಲಗಳು ತಿಳಿಸಿವೆ.

ಗುರಿ ಸಾಧಿಸುವಲ್ಲಿ ವಿಫಲರಾದವರನ್ನು, ಅಂದರೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವಲ್ಲಿ ವಿಫಲರಾದವರನ್ನು ಸಚಿವ ಸಂಪುಟದಿಂದ ತೆಗೆದುಹಾಕುವ ಸಾಧ್ಯತೆ ಇದೆ. ಅಂಥವರ ಬದಲಿಗೆ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗಮನಾರ್ಹ ಸುಧಾರಣೆ ಕಾಣುವಲ್ಲಿ ವಿಫಲವಾದರೆ ಕೆಲವು ಸಚಿವರನ್ನು ಬಲಿಪಶುಗಳನ್ನಾಗಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಕಾಂಗ್ರೆಸ್​​ ನಾಯಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಕರ್ನಾಟಕದಲ್ಲಿ ಕೇವಲ ಒಂದೇ ಸ್ಥಾನವನ್ನು ಗೆದ್ದಿದೆ (ಡಿಕೆ ಸುರೇಶ್, ಬೆಂಗಳೂರು ಗ್ರಾಮಾಂತರ). ಈ ಮಧ್ಯೆ, ಹಳೇ ಮೈಸೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸವಾಲೊಡ್ಡಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗಾಗಿ, ರಾಜಕೀಯವಾಗಿ ಕೆಲವರ ತಲೆದಂಡವಾಗಬಹುದು ಮತ್ತು ಲೋಕಸಭಾ ಚುನಾವಣೆಯ ನಂತರ ಹಲವು ಹೊಸ ಮುಖಗಳಿಗೆ ದಾರಿ ಅವಕಾಶ ದೊರೆಯಬಹುದು ಎಂಬುದು ಕೆಲವು ರಾಜಕೀಯ ಪಂಡಿತರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಜತೆ ತೇಲಿಬಂತು ಮತ್ತೊಂದು ಹೆಸರು: ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಒಕ್ಕಲಿಗರಿಗೋ, ಲಿಂಗಾಯತರಿಗೋ?

ಲೋಕಸಭೆ ಚುನಾವಣೆ ನಂತರ ಖಂಡಿತ ಬದಲಾವಣೆ ಆಗಲಿದೆ. ಪಕ್ಷಕ್ಕಾಗಿ ಲೋಕಸಭೆ ಸ್ಥಾನ ಗೆಲ್ಲಿಸಲು ಸಾಧ್ಯವಾಗದಿದ್ದರೆ ಸಚಿವರಾಗಿ ಏಕೆ ಮುಂದುವರಿಯಬೇಕು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಶ್ನಿಸಿದ್ದಾರೆ. ಆದರೆ ಅವರು ಸಿಎಂ ಹುದ್ದೆ ಬದಲಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ, ಆ ಕುರಿತು ಖಚಿತ ಮಾಹಿತಿ ಇಲ್ಲ ಎಂದಿದ್ದಾರೆ.

ಈ ಮಧ್ಯೆ, ಪಕ್ಷವು ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವತ್ತ ಗಮನಹರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮತ್ತೊಂದೆಡೆ, ಕಾನೂನು ಸಚಿವ ಎಚ್‌ಕೆ ಪಾಟೀಲ್ ತಮ್ಮ ಪಕ್ಷ 25 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ