ರಾಜಕೀಯದ ಬಗ್ಗೆ ಬೇಸರದ ಮಾತು: ಕೇಂದ್ರ ಸಚಿವ ನಾರಾಯಣಸ್ವಾಮಿ ಚುನಾವಣಾ ರಾಜಕೀಯ ನಿವೃತ್ತಿ ಸುಳಿವು?

| Updated By: ರಮೇಶ್ ಬಿ. ಜವಳಗೇರಾ

Updated on: Dec 22, 2023 | 6:51 PM

ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಪರೋಕ್ಷವಾಗಿ ರಾಜಕೀಯ ನಿವೃತ್ತಿ ಸುಳಿವು ನೀಡಿದ್ದಾರೆ. ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿಂದ MBBS ವಿಧ್ಯಾರ್ಥಿಗಳ ವೈಟ್ ಕೋಟ್ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿರುವ ನಾರಾಯಣಸ್ವಾಮಿ, ಸದ್ಯದ ರಾಜಕೀಯ ವ್ಯವಸ್ಥೆ ಬಗ್ಗೆ ಬೇಸರದ ಮಾತುಗಳನ್ನಾಡಿದ್ದಾರೆ.

ರಾಜಕೀಯದ ಬಗ್ಗೆ ಬೇಸರದ ಮಾತು: ಕೇಂದ್ರ ಸಚಿವ ನಾರಾಯಣಸ್ವಾಮಿ ಚುನಾವಣಾ ರಾಜಕೀಯ ನಿವೃತ್ತಿ ಸುಳಿವು?
ಕೇಂದ್ರ ಸಚಿವ ನಾರಾಯಣಸ್ವಾಮಿ
Follow us on

ಚಿತ್ರದುರ್ಗ, (ಡಿಸೆಂಬರ್ 22): ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ (A narayanasamy) ಅವರು ಪರೋಕ್ಷವಾಗಿ ರಾಜಕೀಯ ನಿವೃತ್ತಿ ಸುಳಿವು ನೀಡಿದ್ದಾರೆ. ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿಂದ MBBS ವಿಧ್ಯಾರ್ಥಿಗಳ ವೈಟ್ ಕೋಟ್ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿರುವ ನಾರಾಯಣಸ್ವಾಮಿ, ಇಂತಹ ಪೊಲಿಟೆಡ್ ಪಾಲಿಟಿಕ್ಸ್​ನಲ್ಲಿ ನನ್ನಂತವರು ಇರಬಾರದು ಎಂದು ತೀರ್ಮಾನ‌ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ಸದ್ಯದ ರಾಜಕೀಯ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿ ನಿವೃತ್ತಿಯಾಗುವ ಮಾತುಗಳನ್ನಾಡಿದ್ದಾರೆ.

ದೇಶದ ನಾಗರೀಕರ ಟ್ಯಾಕ್ಸ್ ಗೆ ಸರಿಯಾದ ಸರ್ವೀಸ್ ಕೊಡಬೇಕು. ನನ್ನ 25 ವರ್ಷದ ರಾಜಕೀಯ ಜೀವನದಲ್ಲಿ ಭ್ರಷ್ಟ ವ್ಯವಸ್ಥೆ ನೋಡಿದ್ದೇನೆ. ಇಂತಹ ಭ್ರಷ್ಟ ವ್ಯವಸ್ಥೆಯನ್ನು ಧಿಕ್ಕರಿಸಿ ರಾಜಕೀಯ ಬಿಡೋಣ ಅಂತಿದೀನಿ. ಈ ಭ್ರಷ್ಟರ ಜೊತೆ ನಾನು ಒಬ್ಬ ಆಗಬಾರದು. ನಾನು ಇವರ ಜೊತೆ ರಾಜಿ ಆಗಬಾರದು. ಇಂತಹ ಪೊಲಿಟೆಡ್ ಪಾಲಿಟಿಕ್ಸ್​ನಲ್ಲಿ ನನ್ನಂತವರು ಇರಬಾರದು ಎಂದು ತೀರ್ಮಾನ‌ ಮಾಡಿದ್ದೇನೆ ಎಂದು ಬೇಸರ ವ್ಯಕ್ತಪಡಿಸುತ್ತಲೇ ಪರೋಕ್ಷವಾಗಿ ರಾಜಕೀಯ ಸುಳಿವು ನೀಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಾರಾಯಣಸ್ವಾಮಿ, ಭ್ರಷ್ಟಾಚಾರದ ಕುರ್ಚಿಯ ಪಕ್ಕದಲ್ಲಿಯೂ ಕುಳಿತುಕೊಳ್ಳಲು ಇಷ್ಟ ಪಡುವುದಿಲ್ಲ, ರಾಜಕಾರಣದಲ್ಲಿರುವ ಭ್ರಷ್ಟಾಚಾರ ಕಣ್ಣಿಗೆ ಬಿದ್ದಾಗಲೇ ಈ ನಿರ್ಧಾರ ಕೈಗೊಂಡಿದ್ದೇನೆ. ಇದು ಮುಂಬರುವ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಲ್ಲ. ಭವಿಷ್ಯದ ರಾಜಕಾರಣದಿಂದಲೇ ಹೊರಗುಳಿಯುವೆ ಎಂದು ಸ್ಪಷ್ಟಪಡಿಸಿದರು.

ದೂರರಿಂದ ಚಿತ್ರದುರ್ಗಕ್ಕೆ ಬಂದಿದ್ದ ನನ್ನನ್ನು ಮತದಾರರು ಲೋಕಸಭೆಗೆ ಆಯ್ಕೆ ಮಾಡಿದ್ದಾರೆ. ಆದ್ರೆ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂಬ ಕೊರಗು ಇದೆ ಎಂದು ಬೇಸರ ವ್ಯಕ್ತಪಡಿಸಿದ ನಾರಾಯಣಸ್ವಾಮಿ, ಮುಂಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ ಅವಕಾಶ ಸಿಕ್ಕರೆ ನಾನು ಸ್ವಾಗತಿಸುತ್ತೇನೆ. ಆಂತರಿಕ ಸಮೀಕ್ಷೆ ಆಧರಿಸಿ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ. ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದರು. ಈ ಮೂಲಕ ನಾರಾಯಣಸ್ವಾಮಿ ಅವರು ಈ ಬಾರಿ ಟಿಕೆಟ್ ಆಕಾಕ್ಷಿಯಲ್ಲ ಎಂದು ಹೇಳುವ ಮೂಲಕ ರಾಜಕಾರಣದಿಂದ ದೂರು ಉಳಿಯುವ ಅರ್ಥದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ