AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ: ಸಿದ್ದರಾಮಯ್ಯ

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ. ರಾಮಮಂದಿರ ಯಾವ ರೀತಿ ನಿರ್ಮಿಸಿದ್ದಾರೆಂದು ನೋಡಿ ಬರುತ್ತೇನೆ. ಬಿಜೆಪಿಯವರು ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಾವು ರಾಮನನ್ನು ವಿರೋಧಿಸುತ್ತಿಲ್ಲ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯ ರಾಜಕೀಯ ವಿರೋಧಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Basavaraj Yaraganavi
| Edited By: |

Updated on:Jan 12, 2024 | 3:46 PM

Share

ಶಿವಮೊಗ್ಗ, ಜನವರಿ 12: ರಾಮಮಂದಿರ (Ram Mandir) ಉದ್ಘಾಟನೆ ಬಳಿಕ ಅಯೋಧ್ಯೆಗೆ (Ayodhya) ಭೇಟಿ ನೀಡುತ್ತೇನೆ. ರಾಮಮಂದಿರ ಯಾವ ರೀತಿ ನಿರ್ಮಿಸಿದ್ದಾರೆಂದು ನೋಡಿ ಬರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಾವು ರಾಮನನ್ನು ವಿರೋಧಿಸುತ್ತಿಲ್ಲ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯ ರಾಜಕೀಯ ವಿರೋಧಿಸುತ್ತಿದ್ದೇವೆ ಎಂದರು.

ಇನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಂದರೇ ಸುಳ್ಳು, ಸುಳ್ಳು ಅಂದರೇ ಕುಮಾರಸ್ವಾಮಿ. ಹೆಚ್​ಡಿ ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಮೂರು ಜನ ಉಪಮುಖ್ಯಮಂತ್ರಿಗಳ ಬಗ್ಗೆ ಪಕ್ಷದಲದಲಿ ಚರ್ಚೆ ನಡೆದಿಲ್ಲ ಎಂದು ವಾಗ್ದಾಳಿ ಮಾಡಿದರು.

ಅಯೋಧ್ಯೆ ಕಾರ್ಯಕ್ರಮದಿಂದ ದೂರ ಉಳಿದ ಹೈಕಮಾಂಡ್​

ಇದೇ ತಿಂಗಳು ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತದೆ. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ್​ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್​ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಕಾಂಗ್ರೆಸ್​​ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ.

ಇದನ್ನೂ ಓದಿ: ಅಪೂರ್ಣ ರಾಮ ಮಂದಿರ ಉದ್ಘಾಟನೆ: ಮೋದಿಗೆ ಸಾಧನೆ ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ ಎಂದ ಸಿದ್ದರಾಮಯ್ಯ

ಹೈಕಮಾಂಡ್​ ನಿರ್ಧಾರಕ್ಕೆ ಸಿದ್ದರಾಮಯ್ಯ ಬೆಂಬಲ

ವರಿಷ್ಠರ ನಿರ್ಧರಕ್ಕೆ ಬೆಂಬಲ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಜ.11) ರಂದು ಟ್ವೀಟ್​ ಮಾಡಿದ್ದರು. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಗುಡುಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:10 pm, Fri, 12 January 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ