AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣಾದಲ್ಲಿ ತಾಲೂಕು ಕೇಂದ್ರವಿಲ್ಲದೆ ಜನ ಅಬ್ಬೆಪಾರಿಗಳಾಗಿದ್ದಾರೆ: ಸೋಮಣ್ಣನ ಗೆಲ್ಲಿಸಿ ತಾಲೂಕು ಕೇಂದ್ರ ಮಾಡುತ್ತೇವೆ ಎಂದ ಪ್ರತಾಪ್ ಸಿಂಹ

‘ವರುಣಾ ಕ್ಷೇತ್ರಕ್ಕೆ ತಾಲೂಕು ಕೇಂದ್ರವಿಲ್ಲದೆ ಅಲ್ಲಿನ ಜನ ಅಬ್ಬೆಪಾರಿಗಳಾಗಿದ್ದಾರೆ. ತಮ್ಮ ಕೆಲಸ ಮಾಡಿಸಿಕೊಳ್ಳಲು ಯಾವ ಸ್ಥಳಕ್ಕೆ ಹೋಗಬೇಕೆಂಬ ಗೊಂದಲ 15 ವರ್ಷದಿಂದಲೂ ಅಲ್ಲಿನ ಜನ ಎದುರಿಸುತ್ತಿದ್ದಾರೆ. ಸಿದ್ದರಾಮಯ್ಯ(Siddaramaiah)ನವರ ಕೈಯಲ್ಲಿ ಒಂದು ತಾಲೂಕು ಕೇಂದ್ರ ಮಾಡಲು ಆಗಲಿಲ್ಲ ಎಂದು ಪ್ರತಾಪ್​ ಸಿಂಹ ಗುಡುಗಿದ್ದಾರೆ.

ವರುಣಾದಲ್ಲಿ ತಾಲೂಕು ಕೇಂದ್ರವಿಲ್ಲದೆ  ಜನ ಅಬ್ಬೆಪಾರಿಗಳಾಗಿದ್ದಾರೆ: ಸೋಮಣ್ಣನ ಗೆಲ್ಲಿಸಿ ತಾಲೂಕು ಕೇಂದ್ರ ಮಾಡುತ್ತೇವೆ ಎಂದ ಪ್ರತಾಪ್ ಸಿಂಹ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಪ್ರತಾಪ್​ ಸಿಂಹ
ಕಿರಣ್ ಹನುಮಂತ್​ ಮಾದಾರ್
|

Updated on: Apr 13, 2023 | 10:59 AM

Share

ಮೈಸೂರು: ‘ವರುಣಾ ಕ್ಷೇತ್ರಕ್ಕೆ ತಾಲೂಕು ಕೇಂದ್ರವಿಲ್ಲದೆ ಅಲ್ಲಿನ ಜನ ಅಬ್ಬೆಪಾರಿಗಳಾಗಿದ್ದಾರೆ. ತಮ್ಮ ಕೆಲಸ ಮಾಡಿಸಿಕೊಳ್ಳಲು ಯಾವ ಸ್ಥಳಕ್ಕೆ ಹೋಗಬೇಕೆಂಬ ಗೊಂದಲ 15 ವರ್ಷದಿಂದಲೂ ಅಲ್ಲಿನ ಜನ ಎದುರಿಸುತ್ತಿದ್ದಾರೆ. ಸಿದ್ದರಾಮಯ್ಯ(Siddaramaiah)ನವರ ಕೈಯಲ್ಲಿ ಒಂದು ತಾಲೂಕು ಕೇಂದ್ರ ಮಾಡಲು ಆಗಲಿಲ್ಲ. ಮುಖ್ಯಮಂತ್ರಿಯಾಗಿಯೂ ಸಿದ್ದರಾಮಯ್ಯನವರು ವರುಣಾ ಅಭಿವೃದ್ಧಿ ಮಾಡಲಿಲ್ಲ. ವರುಣಾ ತಾಲೂಕು ಕೇಂದ್ರವಾಗಬೇಕಿದೆ. ಒಂದೇ ಸರ್ಕಾರಿ ಕಛೇರಿಯಲ್ಲಿ ವರುಣಾ ಜನರ ಕೆಲಸವಾಗಬೇಕು, ಅದು ನಮ್ಮ ಉದ್ದೇಶ. ಸೋಮಣ್ಣನ ಗೆಲ್ಲಿಸಿ ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡುತ್ತೇವೆ ಎಂದು ಸಂಸದ ಪ್ರತಾಪ್​ ಸಿಂಹ(Pratap Simha) ಹೇಳಿದ್ದಾರೆ.

ಇಂದು(ಏ.13) ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್​ ಸಿಂಹ ಅವರು ‘ಸಿದ್ದರಾಮಯ್ಯ ಅವರು 2018 ಕೊನೆ ಚುನಾವಣೆ ಎಂದು ಹೇಳಿದ್ದರು‌. ಅವಾಗಲೇ ಅವರ ಕೊನೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನ ಅವರನ್ನ ಮುಗಿಸಿದರು. ಈ ಬಾರಿಯೂ ಅದೇ ಪ್ಲೇಟ್ ಅನ್ನು ಸಿದ್ದರಾಮಯ್ಯ ಹಾಕುತ್ತಿದ್ದಾರೆ. ಇಲ್ಲಿಯ ಜನರು ಕೂಡ ಅವರ ರಾಜಕೀಯ ಜೀವನವನ್ನು ಮುಗಿಸುತ್ತಾರೆ‌. ಚಾಮುಂಡಿ ಆಶೀರ್ವಾದ ಮಾಡುವುದು ಆಕೆಯ ಭಕ್ತರಿಗೆ ಮಾತ್ರ. ಸಿದ್ದರಾಮಯ್ಯ ಪತ್ನಿ ಚಾಮುಂಡಿ ತಾಯಿ ಭಕ್ತೆ ಇರಬಹುದು ಅವರ ಪತ್ನಿ ಚುನಾವಣೆಗೆ ಸ್ಪರ್ಧಿಸಿಲ್ಲವಲ್ಲ ಎಂದು ಸಿದ್ದರಾಮಯ್ಯ ವಿರುದ್ದ ಪ್ರತಾಪ್​ ಸಿಂಹ ಗುಡುಗಿದ್ದಾರೆ.

ಇದನ್ನೂ ಓದಿ:Karnataka Assembly Polls: ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಪ್ರಾರಂಭಿಸಿದ ವಿ ಸೋಮಣ್ಣ, ಸಾಯಂಕಾಲ ಚಾಮರಾಜನಗರಕ್ಕೆ ಭೇಟಿ

ಹೌದು ವಿಧಾನಸಭೆ ಚುನಾವಣೆಗೆ ಇನ್ನು ಕೆಲವೆ ದಿನಗಳು ಇದ್ದು, ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೇಗಾದರೂ ಮಾಡಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಹರಸಾಹಸ ಮಾಡುತ್ತಿದ್ದಾರೆ. ಅದರಂತೆ ಇದೀಗ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿ.ಸೋಮಣ್ಣ ತೊಡೆತಟ್ಟಿದ್ದಾರೆ. ಇದರಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣ ಹೈವೋಲ್ಟೇಜ್​ ಕ್ಷೇತ್ರವಾಗಿ ಹೊರಹೊಮ್ಮಲಿದೆ. ಸ್ವ ಕ್ಷೇತ್ರದಲ್ಲಿ ಸ್ಪರ್ಧಿಸಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯಗೆ ಇದೀಗ ವಿ ಸೋಮಣ್ಣ ಟಫ್​ ಪೈಟ್​ ನೀಡಲಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ