AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿ: ಸುನಿಲ್ ಕುಮಾರ್

ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದೆ. ಆದರೆ ಇದರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಮಹಿಳೆಯರು ಹೆಚ್ಚಾಗಿ ವಂಚಿತರಾಗುತ್ತಾರೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಿ: ಸುನಿಲ್ ಕುಮಾರ್
ಖಾಸಗಿ ಬಸ್​ಗಳಲ್ಲಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವಂತೆ ಮಾಜಿ ಸಚಿವ ಸುನಿಲ್ ಕುಮಾರ್ ಒತ್ತಾಯ
Rakesh Nayak Manchi
|

Updated on: May 30, 2023 | 7:27 PM

Share

ಉಡುಪಿ: ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free Travel) ಗ್ಯಾರಂಟಿ ನೀಡಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚಾಗಿ ಖಾಸಗಿ ಬಸ್​ಗಳನ್ನು ಅವಲಂಬಿಸಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸುನಿಲ್ ಕುಮಾರ್ (Sunil Kumar) ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಒತ್ತಾಯಿಸಿದ ಸುನಿಲ್ ಕುಮಾರ್, “ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು” ಎಂದರು.

ಇದನ್ನೂ ಓದಿ: Free Bus Pass: ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ

ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್​ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಭೆ ಬಳಿಕ ರಾಮಲಿಂಗರೆಡ್ಡಿ ಘೋಷಣೆ ಮಾಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ