AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಬೇಷರತ್ ಉಚಿತ ಪ್ರಯಾಣ ನೀಡಬೇಕು, ಹೆಚ್ಚುವರಿ ಬಸ್ ಕಲ್ಪಿಸಿ: ಬಿಜೆಪಿ

ನಾಳೆ ಶಕ್ತಿ ಯೋಜನೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಈ ನಡುವೆ ಟ್ವೀಟ್ ಮಾಡಿದ ಬಿಜೆಪಿ, ಮೊದಲು ಬಸ್​ಗಳ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದೆ.

ಮಹಿಳೆಯರಿಗೆ ಬೇಷರತ್ ಉಚಿತ ಪ್ರಯಾಣ ನೀಡಬೇಕು, ಹೆಚ್ಚುವರಿ ಬಸ್ ಕಲ್ಪಿಸಿ: ಬಿಜೆಪಿ
ಶಕ್ತಿ ಯೋಜನೆ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಕರ್ನಾಟಕ
Rakesh Nayak Manchi
|

Updated on: Jun 10, 2023 | 5:18 PM

Share

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ಮುಂದಾಗಿರುವ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ (Shakti Scheme) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಾಳೆ (ಜೂನ್ 11) ಚಾಲನೆ ನೀಡಲಿದ್ದಾರೆ. ಈ ನಡುವೆ ಟ್ವೀಟ್ ಮಾಡಿದ ಬಿಜೆಪಿ ಕರ್ನಾಟಕ, ಮಹಿಳೆಯರಿಗೆ ಬೇಷರತ್ ಉಚಿತ ಪ್ರಯಾಣ ನೀಡಲೇಬೇಕು. ನೀಡದಿದ್ದರೆ ನಾವು ಬಿಡುವುದೂ ಇಲ್ಲ. ಆದರೆ ಹಲವೆಡೆ ಬಸ್ ಬೇಕಲ್ಲ? ಮೊದಲು ಇದನ್ನು ಕಲ್ಪಿಸಿ ಎಂದು ಒತ್ತಾಯಿಸಿದೆ.

“ತಾವುಗಳು ಚುನಾವಣಾಪೂರ್ವದಲ್ಲಿ ಹೇಳಿರುವಂತೆ ರಾಜ್ಯದ ಸಮಸ್ತ ಮಹಿಳೆಯರಿಗೆ ಬೇಷರತ್ ಉಚಿತ ಪ್ರಯಾಣ ನೀಡಲೇಬೇಕು. ನೀಡದಿದ್ದರೆ ನಾವು ಬಿಡುವುದೂ ಇಲ್ಲ. ಆದರೆ ಬಸ್ ಬೇಕಲ್ಲ? ರಾಜ್ಯದ ಹಲವಾರು ಭಾಗಗಳಲ್ಲಿ ಸರ್ಕಾರಿ ಬಸ್‌ಗಳ ವ್ಯವಸ್ಥೆಯೇ ಇಲ್ಲ, ಅಲ್ಲಿನ ನಿವಾಸಿಗಳಿಗೆ ಸರ್ಕಾರಿ ಬಸ್ ಸಂಪರ್ಕವೆಂದರೆ ದೂರದಬೆಟ್ಟ. ಕರಾವಳಿಯ ಹಲವು ತಾಲೂಕುಗಳು ಇಂದಿಗೂ ಖಾಸಗಿ ಬಸ್‌ಗಳನ್ನೇ ಅವಲಂಬಿಸಿದೆ. ಈ ಸಮಸ್ಯೆಗಳಿಗೊಂದು ಯೋಜನೆ ರೂಪಿಸಿ, ಮೊದಲಿಗೆ ಬಸ್ ಸೌಲಭ್ಯ ಕಲ್ಪಿಸಿಕೊಡಿ. ಉಳಿದದ್ದು ಮತ್ತೆ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ನಾಳೆ ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರು ರಾಜ್ಯದ‌ ಒಳಗೆ‌ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ‌ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ‌ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ ಇವುಗಳಲ್ಲಿ ಯಾವುದಾದರೊಂದನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಇದನ್ನೂ ಓದಿ: ಒನ್ ಟು ತ್ರಿಬಲ್ ವಿದ್ಯುತ್ ಬಿಲ್ ಹೆಚ್ಚಳ: ವಿವಿಧ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನಾಕ್ರೋಶ

ಅಲ್ಲದೆ, ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಮಹಿಳಾ ಪ್ರಯಾಣಿಕರು ಉಚಿತ ಲಗೇಜ್ ಮಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ನಿಯಮಾನುಸಾರ ‌ಟಿಕೆಟ್ ದರ ವಸೂಲಿ‌ ಮಾಡಲಾಗುತ್ತದೆ.

ಶಕ್ತಿ ಯೋಜನೆಗೆ ಭಾನುವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಇದೇ ವೇಳೆ ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಈ ಯೋಜನೆ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ. ಯೋಜನೆಗೆ ಚಾಲನೆ ನಂತರ ಸಿದ್ದರಾಮಯ್ಯ ಅವರು ಬಸ್​ನಲ್ಲೇ ಸಿಟಿ ರೌಂಡ್ ಹೊಡೆಯಲಿದ್ದಾರೆ.

ಕಾರ್ಯಕ್ರಮದ ಭಾಗವಾಗಿ BS- 6 ಬಿಎಂಟಿಸಿ ಬಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ಕಂಡಕ್ಟರ್ ರಿಂದ 0 ಚಾರ್ಜ್ ಟಿಕೆಟ್ ಪಡೆದು ಬಸ್​ನಲ್ಲಿರುವ ಮಹಿಳೆಯರಿಗೆ ನೀಡಲಿದ್ದಾರೆ. ಬಿಎಂಟಿಸಿಯ BS- 6 ಬಸ್​ನಲ್ಲಿ ಸಿಎಂ ಸಿಟಿ ರೌಂಡ್ಸ್ ಹೋಗಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ. ಬಸ್​ನಲ್ಲಿರುವ ಅಧಿಕಾರಿಗಳು ಸೇರಿದಂತೆ ಎಲ್ಲ ಮಹಿಳೆಯರಿಗೆ 0 ಚಾರ್ಜ್ ಟಿಕೆಟ್ ನೀಡಲು ವ್ಯವಸ್ಥೆ ಮಾಡಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ