ಬಿಜೆಪಿ ಸಂಸದರು ಗಂಡಸರಲ್ಲ ಎಂದ ಬಾಲಕೃಷ್ಣಗೆ ಇಂದಿರಾ ಫೋಟೋ ಮೂಲಕ ವಿಜಯೇಂದ್ರ ಟಾಂಗ್
ಬಿಜೆಪಿಯಲ್ಲಿ ಯಾರೂ ಗಂಡಸರು ಇಲ್ಲ. ಮೋದಿ ನಿಲ್ಲುವುದಿಲ್ಲ. ಕುಳಿತುಕೊಳ್ಳುವುದಿಲ್ಲ ಎಂಬ ಕಾಂಗ್ರೆಸ್ ಶಾಸಕ ಎಚ್ಸಿ ಬಾಲಕೃಷ್ಣ ಅವರ ಹೇಳಿಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ. ಈ ಒಂದೇ ಒಂದು ಚಿತ್ರ ಹೇಳುತ್ತದೆ ಎಂದು ಇಂದಿರಾ ಗಾಂಧಿ ಅವರ ಫೋಟೋ ಹಾಕಿ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು, (ಫೆಬ್ರವರಿ 05): ಬಿಜೆಪಿ (BJP) ಸಂಸದರು ಬರೀ ಶೋ ಪೀಸ್‌ಗಳು, ಅವರಲ್ಲಿ ಯಾರೂ ಗಂಡಸರಿಲ್ಲ ಎಂಬ ಮಾಗಡಿ ಕಾಂಗ್ರೆಸ್ ಶಾಸಕ (Magadi Congress MLA) ಎಚ್.ಸಿ. ಬಾಲಕೃಷ್ಣ (HC Balakrishna) ಅವರ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಇಂದಿರಾ ಗಾಂಧಿ ಅವರ ಫೋಟೋ ಮೂಲಕ ತಿರುಗೇಟು ನೀಡಿದ್ದಾರೆ.
ಇಂದಿರಾ ಗಾಂಧಿ ಅವರು ಒಬ್ಬರೇ ಕುರ್ಚಿ ಮೇಲೆ ಕುಳಿತುಕೊಂಡಿದ್ದು, ಇನ್ನುಳಿದ ಕಾಂಗ್ರೆಸ್ ನಾಯಕರು ಅವರ ಮುಂದೆ ಕೈಕಟ್ಟಿಕೊಂಡು ನಿಂತಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಜಯೇಂದ್ರ ಅವರು ಬಾಲಕೃಷ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬ್ರಿಟಿಷರು ದೇಶಬಿಟ್ಟು ತೊಲಗಿದರೂ ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣನವರಂತಹ ಕಾಂಗ್ರೆಸ್ಸಿಗರು ಇಂದು ನಮ್ಮ ಪಕ್ಷದ ಸಂಸದರುಗಳನ್ನು ಕುರಿತು ನೀಡಿರುವ ಕೀಳುಮಟ್ಟದ ಹೇಳಿಕೆಗೆ ಈ ಚಿತ್ರವೇ ಉತ್ತರ ಹೇಳುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ: ರಾಜ್ಯದ ಬಿಜೆಪಿ ಸಂಸದರು ಬರೀ ಶೋಪೀಸ್‌ಗಳು, ಯಾರೂ ಗಂಡಸರಲ್ಲ: ಬಾಲಕೃಷ್ಣ ವಾಗ್ದಾಳಿ
ಬ್ರಿಟಿಷರು ದೇಶಬಿಟ್ಟು ತೊಲಗಿದರೂ ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣನವರಂತಹ ಕಾಂಗ್ರೆಸ್ಸಿಗರು ಇಂದು ನಮ್ಮ ಪಕ್ಷದ ಸಂಸದರುಗಳನ್ನು ಕುರಿತು ನೀಡಿರುವ ಕೀಳುಮಟ್ಟದ ಹೇಳಿಕೆಗೆ ಈ ಚಿತ್ರವೇ ಉತ್ತರ ಹೇಳುತ್ತದೆ. pic.twitter.com/nhQfBSt9oR
— Vijayendra Yediyurappa (@BYVijayendra) February 5, 2024
ಬಾಲಕೃಷ್ಣ ಹೇಳಿದ್ದೇನು?
ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ. ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದರು.
ಪಾಪ.. ನಮ್ಮ ಹೋರಾಟ ನೋಡಿಯಾದರೂ ಬಿಜೆಪಿಯ ಗಂಡಸರು ಹೋರಾಟ ಮಾಡ್ತಾರಾ ನೋಡೋಣ. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ.! ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಅರ್ಥʼʼ ಎಂದು ಬಿಜೆಪಿ ಸಂಸದರ ವಿರುದ್ಧ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದ್ದರು.