ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾತು ವೈರಲ್: ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಯತೀಂದ್ರ ಸಿದ್ದರಾಮಯ್ಯ

| Updated By: ರಮೇಶ್ ಬಿ. ಜವಳಗೇರಾ

Updated on: Sep 22, 2023 | 12:58 PM

ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾತಿನ ವಿಡಿಯೋ ವೈರಲ್ ಆಗಿರುವ ಬಗ್ಗೆ ಬೆನ್ನಲ್ಲೇ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ. ಇನ್ನು ಈ ವಿವಾದ ಮೈಮೇಲೆ ಬರುತ್ತಿದ್ದಂತೇ ಯತೀಂದ್ರ ಸಿದ್ದರಾಮಯ್ಯನವರು ಕುಕ್ಕರ್, ಐರಾನ್ ಬಾಕ್ಸ್ ಯಾವಾಗ ಹಂಚಿಕೆ ಮಾಡಲಾಯ್ತು? ಏಕೆ ಹಂಚಿಕೆ ಮಾಡಲಾಗಿತ್ತು ಎನ್ನುವ ವಿವರಣೆ ನೀಡಿದ್ದು, ಅದು ಈ ಕೆಳಗಿನಂತಿದೆ.

ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾತು ವೈರಲ್: ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ, ಸಿದ್ದರಾಮಯ್ಯ
Follow us on

ಮೈಸೂರು, (ಸೆಪ್ಟೆಂಬರ್ 22): ವಿಧಾನಸಭಾ ಚುನಾವಣೆಗೂ (Karnataka Assembly Elections 2023) ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ(yathindra siddaramaiah) ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ವಿಡಿಯೋ ವೈರಲ್ ಆಗಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಕುಕ್ಕರ್, ಐರಾನ್ ಬಾಕ್ಸ್ ಯಾವಾಗ ಹಂಚಿಕೆ ಮಾಡಲಾಯ್ತು? ಏಕೆ ಹಂಚಿಕೆ ಮಾಡಲಾಗಿತ್ತು ಎನ್ನುವ ಬಗ್ಗೆ ವಿವರಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಚುನಾವಣೆಗೋಸ್ಕರ ಸಿದ್ದರಾಮಯ್ಯನವರು ಕುಕ್ಕರ್ ಕೊಟ್ಟಿದ್ದಾರೆಂದು ಹೇಳಿಲ್ಲ. ಆದರೂ ಮಾತಾಡುವಾಗ ನಾನು ಸರಿಯಾಗಿ ಮಾತಾಡದೇ ಇರಬಹುದು. ನನ್ನ ಹೇಳಿಕೆ ಆ ರೀತಿಯ ಅರ್ಥವನ್ನು ಕೊಟ್ಟಿರಬಹುದು. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮೊದಲೇ ಈ ಘಟನೆ ನಡೆದಿದೆ. ನನ್ನ ತಂದೆ ಸ್ವತಃ ಕೈಯಿಂದ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಟ್ಟಿಲ್ಲ. ಇದರ ಬಗ್ಗೆ ನಾನು ಮಾತನಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಸಿದ್ದರಾಮಯ್ಯಗೆ ಮುಳುವಾಗುತ್ತಾ ಪುತ್ರನ ಆ ಹೇಳಿಕೆ? ಅಷ್ಟಕ್ಕೂ ಯತೀಂದ್ರ ಹೇಳಿದ್ದೇನು?

ನನ್ನ ಹೇಳಿಕೆ ಆ ರೀತಿಯ ಅರ್ಥವನ್ನೂ ಕೊಟ್ಟಿರಬಹುದು. ಆದರೆ ಈ ಘಟನೆ ನಡೆದಿರುವುದು ಚುನಾವಣೆ ನೀತಿ ಸಂಹಿತೆಗೂ ಮುಂಚೆ. ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ವಿತರಣೆ ಮಾಡಲಾಗಿದೆ. ನನ್ನ ತಂದೆ ಸ್ವತಃ ಕೈಯಿಂದ ಕೂಡ ಕೊಟ್ಟಿಲ್ಲ. ಅದರ ಬಗ್ಗೆ ನಾನು ಮಾತನಾಡಿದ್ದು. ಆದರೆ ಮಾಧ್ಯಮದಲ್ಲಿ ಚುನಾವಣೆಗಾಗಿ ಹಂಚಿಕೆ ಮಾಡಲಾಗಿದೆ ಎಂದು ಬರುತ್ತಿದೆ. ಆ ಕಾರ್ಯಕ್ರಮದ ವೀಡಿಯೋ, ಪೋಟೋಗಳೂ ಇವೆ. ನಮ್ಮ ತಂದೆ ಅವರ ಕೈಯಿಂದ ದುಡ್ಡು ಕೊಟ್ಟು ಎಲ್ಲಿಯೂ ಹಂಚಿಲ್ಲ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ