ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೆ ಯತ್ನಾಳ್ ಬಣ ಸಜ್ಜು: ಪರಾಜಿತ ಅಭ್ಯರ್ಥಿಗಳೊಂದಿಗೆ ನಾಳೆ ವಿಜಯೇಂದ್ರ ಸಭೆ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಮೂರನೇ ಹಂತದ ಹೋರಾಟ ಆರಂಭವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷದ ಸೋತ ಅಭ್ಯರ್ಥಿಗಳೊಂದಿಗೆ ನಾಳೆ ಸಭೆ ನಡೆಸಲಿದ್ದಾರೆ. 60% ಕಮಿಷನ್ ಆರೋಪದ ಬಗ್ಗೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚುತ್ತಿದೆ.

ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೆ ಯತ್ನಾಳ್ ಬಣ ಸಜ್ಜು: ಪರಾಜಿತ ಅಭ್ಯರ್ಥಿಗಳೊಂದಿಗೆ ನಾಳೆ ವಿಜಯೇಂದ್ರ ಸಭೆ
ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೆ ಯತ್ನಾಳ್ ಬಣ ಸಜ್ಜು: ಪರಾಜಿತ ಅಭ್ಯರ್ಥಿಗಳೊಂದಿಗೆ ನಾಳೆ ವಿಜಯೇಂದ್ರ ಸಭೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 09, 2025 | 8:19 PM

ಬೆಂಗಳೂರು, ಜನವರಿ 09: ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೂ ಶಾಸಕ ಯತ್ನಾಳ್ (Yatnal) ಬಣ ಸಜ್ಜಾಗಿದೆ. ಈಗಾಗಲೇ 2ನೇ ಹಂತದ ಹೋರಾಟಕ್ಕೆ ಧುಮುಕಿರುವ ರೆಬೆಲ್ಸ್​ ಟೀಂ, ಹೋರಾಟವನ್ನ ಮತ್ತಷ್ಟು ತೀವ್ರಗೊಳಿಸುವುದಕ್ಕೆ ನಿರ್ಧಾರ ಮಾಡಿದೆ. ಯಾವ ಯಾವ ಜಿಲ್ಲೆಯಲ್ಲಿ ಹೋರಾಟ ಮಾಡಿಲ್ವೋ ಆ ಜಿಲ್ಲೆಗಳಲ್ಲಿ ಹೋರಾಟ ನಡೆಸಿ ವರದಿ ಸಂಗ್ರಹಿಸುವುದಕ್ಕೆ ನಿರ್ಧಾರ ಮಾಡಲಾಗಿದೆ.

ವಕ್ಫ್ ಬೋರ್ಡ್​ ವಿರುದ್ಧ ನಮ್ಮ ಹೋರಾಟ ನಿಲ್ಲೋದಿಲ್ಲ, 3ನೇ ಹಂತದ ಹೋರಾಟವನ್ನೂ ಮಾಡುತ್ತೇವೆ ಅಂತಾ ಶಾಸಕ ಯತ್ನಾಳ್ ಕರೆ ಕೊಟ್ಟಿದ್ದಾರೆ. ಶಾಶ್ವತವಾಗಿಯೇ ವಕ್ಫ್ ಬೋರ್ಡ್​ ಕಾನೂನು ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಪರಾಜಿತ ಬಿಜೆಪಿ ಅಭ್ಯರ್ಥಿಗಳ ಜೊತೆ ನಾಳೆ ವಿಜಯೇಂದ್ರ ಸಭೆ

ಇತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷವನ್ನ ಸಂಘಟಿಸುವ ಕೆಲಸದಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಪಕ್ಷವನ್ನ ಒಗ್ಗಟ್ಟಾಗಿ ತೆಗೆದುಕೊಂಡುವ ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತಿರುವವರ ಜೊತೆ ನಾಳೆ ಸಭೆ ಮಾಡಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ವಿಜಯೇಂದ್ರ ಸಭೆ ಕರೆದಿದ್ದಾರೆ. ಚುನಾವಣೆಯಲ್ಲಿ ಸೋತಿರೋದು ಒಂದುಕಡೆಯಾದರೆ, ಮುಂದೆ ಯಾವ ರೀತಿಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಅಂತಾ ಚರ್ಚೆ ನಡೆಸಲಿದ್ದಾರೆ. ಇನ್ನು ಮುಂದೆ ಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳ ಬಗ್ಗೆಯೂ ಚರ್ಚೆ ಮಾಡುವ ಸಾಧ್ಯತೆ ಇದೆ.

60% ಕಮಿಷನ್ ಆರೋಪ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಸ್​ಟಿ ಸೋಮಶೇಖರ್ ಆಕ್ರೋಶ

ಸರ್ಕಾರದ ವಿರುದ್ಧ 60 ಪರ್ಸೆಂಟೇಜ್ ಕಮಿಷನ್​ ಆರೋಪಿಸಿರುವ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪದೇ ಪದೇ ಕಾಂಗ್ರೆಸ್​ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಎಸ್​ಟಿಎಸ್​, ಇವತ್ತು ಕುಮಾರಸ್ವಾಮಿ ವಿರುದ್ಧ ಸಿಡಿದೆದ್ರು. ಮಗನ ಚುನಾವಣೆಗೆ 100 ಕೋಟಿ ರೂ. ಖರ್ಚು ಮಾಡಿದ್ರಿ, ಏನ್​ ಅಲೂಗಡ್ಡೆ ಬೆಳೆದು ಸಂಪಾದನೆ ಮಾಡಿದ್ರಾ? ಗಾಳಿಯಲ್ಲಿ ಗುಂಡು ಹೊಡೆಯೋದು ಮೊದಲು ಬಿಡಿ ಅಂತಾ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಗಡ್ಕರಿ ಭೇಟಿಯಾದ ಕುಮಾರಸ್ವಾಮಿ: ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಶೀಘ್ರ ಅನುಷ್ಠಾನದ ಭರವಸೆ

ಪಕ್ಷವನ್ನ ಗಟ್ಟಿ ಮಾಡಿ ಅಧಿಕಾರಕ್ಕೆ ಬರೋದರ ಬಗ್ಗೆ ಯೋಚನೆ ಮಾಡಬೇಕಿದ್ದ ಬಿಜೆಪಿ, ಬಣ ಬಡಿದಾಟಕ್ಕೆ ಸಿಲುಕಿ ಅಲ್ಲೋಲ, ಕಲ್ಲೋಲ ಆಗುವಂತಾಗಿದೆ. ಪಕ್ಷದಲ್ಲಿ ಕಚ್ಚಾಟ ಜೋರಾಗ್ತಾನೆ ಇದೆ. ಆದರೆ ಹಿರಿಯ ನಾಯಕರು ಮಾತ್ರ ಸದ್ಯ ಮೌನ ಮುರಿದಿದ್ದು, ಸದ್ಯದಲ್ಲೇ ಎಲ್ಲವೂ ಬಗೆಹರಿಯೋ ವಿಶ್ವಾಸವ್ಯಕ್ತಪಡಿಸ್ತಿದ್ದಾರೆ.

ವರದಿ: ಬ್ಯುರೋ ರಿಪೋರ್ಟ್​ TV9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ