ಹಲವು ಬೆಳವಣಿಗೆಗಳ ಮಧ್ಯೆ ನಡ್ಡಾ, ಶಾ ಭೇಟಿಯಾದ ವಿಜಯೇಂದ್ರ, ಹೈಕಮಾಂಡ್​ ಭೇಟಿ ಬಗ್ಗೆ ಉಪಾಧ್ಯಕ್ಷ ಹೇಳಿದ್ದಿಷ್ಟು

ಕರ್ನಾಟಕ ಬಿಜೆಪಿಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತರುವ ನಡುವೆ ಬಿವೈ ವಿಜಯೇಂದ್ರ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿದ್ದು, ಭಾರೀ ಸಂಚಲನ ಮೂಡಿಸಿದೆ, ಇನ್ನು ಭೇಟಿ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು.

ಹಲವು ಬೆಳವಣಿಗೆಗಳ ಮಧ್ಯೆ ನಡ್ಡಾ, ಶಾ ಭೇಟಿಯಾದ ವಿಜಯೇಂದ್ರ, ಹೈಕಮಾಂಡ್​ ಭೇಟಿ ಬಗ್ಗೆ ಉಪಾಧ್ಯಕ್ಷ ಹೇಳಿದ್ದಿಷ್ಟು
ಅಮಿತ್ ಶಾ ಭೇಟಿಯಾದ ವಿಜಯೇಂದ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 21, 2023 | 12:00 PM

ನವದೆಹಲಿ, (ಜುಲೈ 21): ಕರ್ನಾಟಕದ ಬಿಜೆಪಿ ಉಪಾಧ್ಯಕ್ಷ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿ ಮಾಡಿದ್ದಾರೆ. ಕರ್ನಾಟಕ ಬಿಜೆಪಿ ರಾಜಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆ ಚರ್ಚೆ ನಡುವೆ ವಿಜಯೇಂದ್ರ, ಹೈಕಮಾಂಡ್ ಭೇಟಿ ಮಾಡಿರುವುದು ಬಿಜೆಪಿ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ತಯಾರಿ: ನಿನ್ನೆ ಜೆಪಿ ನಡ್ಡಾ, ಇಂದು ಅಮಿತ್ ಶಾರನ್ನು ಭೇಟಿಯಾದ ಬಿವೈ ವಿಜಯೇಂದ್ರ

ನವದೆಹಲಿಯಲ್ಲಿ ಅಮಿತ್ ಶಾ, ನಡ್ಡಾ ಭೇಟಿ ಬಂದಿರುವ ವಿಜಯೇಂದ್ರ ಇಂದು (ಜುಲೈ 21) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಜೆ.ಪಿ.ನಡ್ಡಾ, ಅಮಿತ್ ಶಾ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದ ಹಿನ್ನೆಲೆ ಭೇಟಿ ಮಾಡಿದ್ದೇನೆ. ಉಪಾಧ್ಯಕ್ಷನಾಗಿ, ಶಾಸಕನಾಗಿ ಯಾವ ರೀತಿ ತೊಡಗಿಸಿಕೊಳ್ಳಬೇಕು. ಯಾವ ರೀತಿ ಚುನಾವಣೆ ಎದುರಿಸಬೇಕೆಂಬ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ದೆಹಲಿ ಭೇಟಿಯಲ್ಲಿ ಬಹಳ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯ ರಾಜಕಾರಣದ ಬಗ್ಗೆ ಯಾವುದು ಕೂಡ ಚರ್ಚೆಯಾಗಿಲ್ಲ. ಲೋಕಸಭೆ ಚುನಾವಣೆಗೆ ಹೊಸಬರು ಹೇಗೆ ಕೆಲಸ ನಿರ್ವಹಿಸಬೇಕು. ಈ ಬಗ್ಗೆಯೂ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಾಗಿದೆ. ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದ ಬಗ್ಗೆ ರಾಷ್ಟ್ರೀಯ ನಾಯಕರು ನನ್ನ ಬಳಿ ಚರ್ಚಿಸಿಲ್ಲ. ಹಾಗೇ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆಯಾಗಿಲ್ಲ ಎಂದು ಹೇಳಿದರು.

ಸದ್ಯ ಕರ್ನಾಟಕದಲ್ಲಿ ವಿಪಕ್ಷ ನಾಯಕರನ್ನು ಆಯ್ಕೆ ಮಾಡುವ ವಿಚಾರ ಚರ್ಚೆಯಾಗುತ್ತಿದೆ. ಇನ್ನೊಂದೆಡೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸತತ ಮೂರನೇ ಬಾರಿ ದೇಶದ ಗದ್ದುಗೆ ಏರಲು ಬಿಜೆಪಿ ಸಜ್ಜಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪ್ಲಾನ್ ಮಾಡಲಾಗುತ್ತಿದೆ. ಇದರ ಮಧ್ಯೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮಯಗಿದ್ದಿರಿಂದ ಹೊಸ ಅಧ್ಯಕ್ಷ ನೇಮಕದ ಬಗ್ಗೆಯೂ ಬಿಜೆಪಿಯಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಎಲ್ಲಾ ಬೆಳವಣಿಗಳ ನಡುವೆ ವಿಜಯೇಂದ್ರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವುದು ಸಹಜವಾಗಿಯೇ ಕುತೂಹಲ ಕೆರಳಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ