ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್

ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಂಡಿದ್ದು, ಕೈ ಗಾಳಕ್ಕೆ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಬಿದ್ದಿದ್ದಾರೆ ಎನ್ನುವ ಸುದ್ದಿಉ ಹರಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್​ ಶಾಸಕರೊಬ್ಬರು ಮಾತುಕತೆ ನಡೆಸಲು ಸೋಮಶೇಖರ್​ ಕಚೇರಿಗೆ ಆಗಮಿಸಿದ್ದಾರೆ. ಇದರಿಂದ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಸೋಮಶೇಖರ್​ ಅವರನ್ನು ಸಮಾಧಾನಪಡಿಸಲು ರಾಜ್ಯ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್
ಎಸ್​ಟಿ ಸೋಮಶೇಖರ್, ಡಿಕೆ ಶಿವಕುಮಾರ್
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Aug 17, 2023 | 1:18 PM

ಬೆಂಗಳೂರು, (ಆಗಸ್ಟ್ 17): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics) ಮತ್ತೆ ಆಪರೇಷನ್ (Operation Hasta) ಬಿರುಗಾಳಿ ಎದ್ದಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಹೋಗಿರುವ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಕಾಂಗ್ರೆಸ್​ನ ಈ ಗಾಳದಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​​ ಬಿದ್ದಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಬಿಜೆಪಿ ಶಾಸಕರ ಕಚೇರಿಗೆ ಕಾಂಗ್ರೆಸ್ ಶಾಸಕ ಭೇಟಿ ನೀಡುವುದು ಆಪರೇಷನ್ ಹಸ್ತಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಿದೆ. ಹೌದು…ಬೆಂಗಳೂರಿನ ಹೇರೋಹಳ್ಳಿಯಲ್ಲಿರುವ ಎಸ್. ಟಿ. ಸೋಮಶೇಖರ್ ಕಚೇರಿಗೆ ಭೇಟಿ ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಲ್ಲದೇ ಇದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಮಾಜಿ ಸಚಿವ ಸಿಟಿ ರವಿ ಎಸ್​ಟಿ ಸೋಮಶೇಖರ್​ಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸೋಮಶೇಖರ್​ ಕಾಂಗ್ರೆಸ್​​ ನಾಯಕರ ಜೊತೆ ಸಂಪರ್ಕದಲ್ಲಿ ಇರುವ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದ ಗೌಡ ಅವರು ಬೆಳಗ್ಗೆ ತಮ್ಮ ನಿವಾಸಕ್ಕೆ ಸೋಮಶೇಖರ್ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ.

ಅಲ್ಲದೇ ರಾಜ್ಯ ಬಿಜೆಪಿಯ ಪ್ರಮುಖರಾದ ಈ ಮೂವರು ನಾಯಕರು ಇಂದು ಬೆಳಗ್ಗೆ ದೂರವಾಣಿ ಮೂಲಕ ಸೋಮಶೇಖರ್ ಜೊತೆ ಮಾತುಕತೆ ನಡೆಸಿದ್ದು, ಈ ವೇಳೆ ಸೋಮಶೇಖರ್​, ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ನನಗೆ ರಾಜ್ಯ ನಾಯಕರ ಮೇಲೆ ಯಾವುದೇ ಬೇಸರ ಇಲ್ಲ, ವಿಷಾದ ಇಲ್ಲ. ಆದ್ರೆ, ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನನ್ನ ವಿರುದ್ದವೇ ಚಟುವಟಿಕೆ ನಡೆಸಿದವರ ವಿರುದ್ಧ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರೆ ಹೇಗೆ? ನೀವು ಯಾವಾಗ ಸಿಗುತ್ತೀರಾ ಹೇಳಿ ನಾನು ಬಂದು ನಿಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ ಆಪರೇಷನ್, ಬಿಜೆಪಿ ಶಾಸಕರಿಗೆ ಕಾಂಗ್ರೆಸ್​ ಗಾಳ? ಲಿಸ್ಟ್​ನಲ್ಲಿ ಯಾರ್ಯಾರು?

ಬೆಂಬಲಿಗರ ಜೊತೆ ಸೋಮಶೇಖರ್ ಸಭೆ

ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕಾಂಗ್ರೆಸ್​ ಸೇರ್ಪಡೆಯಾಗಲು ಮನಸ್ಸು ಮಾಡಿದಂತಿದೆ. ಇದಕ್ಕೆ ಪೂರಕವೆಂಬಂತೆ, ಸೋಮೇಶಖರ್​ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ನೆಲಮಂಗಲ ಕಾಂಗ್ರೆಸ್ ಶಾಸಕ ಎನ್. ಶ್ರೀನಿವಾಸ್ ಪಾಲ್ಗೊಂಡಿರುವುದು ಅಚ್ಚರಿ ಮೂಡಿಸಿದೆ.

ಸ್ಥಳೀಯ ಮೂಲ ಬಿಜೆಪಿ ವಿರುದ್ಧ ಸೋಮಶೇಖರ್ ಅಸಮಾಧಾನ

ನಮ್ಮ ಕ್ಷೇತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಂದಿದ್ದರು. ಆ ವೇಳೆ ನನ್ನ ಕ್ಷೇತ್ರದಲ್ಲಿನ ಕುಡಿಯುವ ನೀರು ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇನೆ. ಅವರು ಬರುವುದರ ಬಗ್ಗೆ ನನಗೆ ಯಾವ ಅಧಿಕಾರಿಯೂ ಹೇಳಿರಲಿಲ್ಲ. ಕಾರ್ಯಕ್ರಮದಲ್ಲಿ ಅವರ ಬಗ್ಗೆ ಒಂದೆರಡು ಒಳ್ಳೆಯ ಮಾತಾಡಿದ್ದು ಹೌದು. ಇದು ಹೊರತು ಪಡಿಸಿ ನಾನು ಅವರ ಜತೆ ರಾಜಕೀಯ ಮಾತನಾಡಿಲ್ಲ. ಕ್ಷೇತ್ರದಲ್ಲಿ ಸ್ಥಳೀಯ ಮೂಲ ಬಿಜೆಪಿಗರು ನನ್ನ ವಿರುದ್ಧ ಕೆಲಸ ಮಾಡಿದರು. ನನ್ನ ವಿರುದ್ಧ ಸೋಲಿಸಬೇಕು ಎಂದು ಆಡಿಯೋ ವೈರಲ್ ಮಾಡಿದರು. ಬಿಜೆಪಿಯವರೇ ನನ್ನನ್ನು ಕಾಂಗ್ರೆಸ್ ಗೆ ಕಳಿಸುವಂತಿದೆ. ನಾನು ಕಾಂಗ್ರೆಸ್ ಗೆ ಹೋಗುವ ಬಗ್ಗೆ ಎಲ್ಲೂ ಹೇಳಿಲ್ಲ. ನಮ್ಮ ಕಾರ್ಯಕರ್ತರ ಜೊತೆಗೂ ಹೇಳಿಕೊಂಡಿಲ್ಲ. ಎರಡು ಸಲ ಪ್ರಧಾನಿಯವರ ಕಾರ್ಯಕ್ರಮವನ್ನೂ ಮಾಡಿದ್ದೇನೆ. ಆದರೆ ಸ್ಥಳೀಯವಾಗಿ ನನ್ನ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಕಾಂಗ್ರೆಸ್‌ನವರು ಬನ್ನಿ ಅಂತ ನನ್ನ ಕರೆದಿಲ್ಲ. ನಾನೂ ಹೋಗುತ್ತೇನೆ ಎಂದು ಅಲ್ಲಿ ಅರ್ಜಿ ಹಾಕಿಲ್ಲ. ಡಿ.ಕೆ. ಶಿವಕುಮಾರ್ ಅವರನ್ನು ಹೊಗಳಿದ್ದನ್ನೇ ಸ್ಥಳೀಯ ಬಿಜೆಪಿಗರು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವನಾಗಿ ಮೈಸೂರಿಗೆ ಹೋಗಿದ್ದಾಗ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರನ್ನೂ ಹೊಗಳಿದ್ದೇನೆ. ನಾನು ಮುಂದೆಯೂ ಕಾಂಗ್ರೆಸ್ ಗೆ ಹೋಗುವ ಪ್ಲಾನ್ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹೀಗೆ ಎಸ್​ಟಿ ಸೋಮಶೇಖರ್​​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದ್ರೆ, ಅವರು ಸ್ಥಳೀಯ ಕೆಲ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅಲ್ಲದೇ ಬೆಂಬಲಿಗರ ಸಭೆ ಮಾಡುತ್ತಿದ್ದು, ಈ ಸಭೆಯಲ್ಲಿ ಕಾಂಗ್ರೆಸ್​ ಶಾಸಕ ಪಾಲ್ಗೊಂಡಿರುವ ಸಂಚಲನ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ