ಬೆಂಗಳೂರು: ‘ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್, ಪೆಡ್ಲರ್ ಎಂದು ವರದಿ’ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಚೇರಿಗೆ ತೆರಳಿ ಪ್ರತಿಭಟಿಸಲು ಮುಂದಾಗಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಸಂಪಿಗೆ ರೋಡ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೈ ಕಾರ್ಯಕರ್ತರು, ನಳಿನ್ ಕುಮಾರ್ ಕಟೀಲು ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಕಟೀಲು ವಿರುದ್ಧ ಘೋಷಣೆ ಕೂಗಲಾಗಿದೆ.
ಇದನ್ನೂ ಓದಿ: ವೈಯಕ್ತಿಕ ಟೀಕೆಗಳಿಂದ ಲಾಭ ಸಿಗುತ್ತೆ ಎಂದು ತಿಳಿದಿದ್ದಾರೆ; ಅವರಿಗೆ ಬುದ್ಧಿ ಹೇಳುವ ಶಕ್ತಿ ಇಲ್ಲ: ಹೆಚ್ಡಿ ದೇವೇಗೌಡ
ಇದನ್ನೂ ಓದಿ: ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಮಧ್ಯೆ ಮುಂದುವರಿದ ಟ್ವೀಟ್ ಸಮರ!