YSV Datta: ಕಾಂಗ್ರೆಸ್ ಮುಖ ಮಾಡಿದ ಜೆಡಿಎಸ್ ನಾಯಕ ವೈಎಸ್​ವಿ ದತ್ತ; ರಾಜಕೀಯ ವಲಯದಲ್ಲಿ ಚರ್ಚೆ

ದತ್ತಾ ಅವರು ಕಾಂಗ್ರೆಸ್​ ಸೇರುವ ಕುರಿತು ಆಗಿರುವ ಮಾತುಕತೆಯ ಆಡಿಯೊ ತುಣುಕು ವೈರಲ್ ಆಗಿದೆ.

YSV Datta: ಕಾಂಗ್ರೆಸ್ ಮುಖ ಮಾಡಿದ ಜೆಡಿಎಸ್ ನಾಯಕ ವೈಎಸ್​ವಿ ದತ್ತ; ರಾಜಕೀಯ ವಲಯದಲ್ಲಿ ಚರ್ಚೆ
ವೈ.ಎಸ್.ವಿ.ದತ್ತ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 11, 2022 | 3:45 PM

ಬೆಂಗಳೂರು: ಜೆಡಿಎಸ್​ನ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ಆಪ್ತರಾದ ವೈ.ಎಸ್​.ವಿ.ದತ್ತಾ (YSV Datta) ಪಕ್ಷ ತೊರೆಯುತ್ತಾರೆ ಎನ್ನುವ ಮಾತುಗಳು ಕರ್ನಾಟಕದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇತ್ತೀಚೆಗಷ್ಟೇ ಜೆಡಿಎಸ್​ನ ಹಿರಿಯ ನಾಯಕರಾದ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಸೈದ್ಧಾಂತಿಕ ಕಾರಣಗಳಿಂದಾಗಿ ದತ್ತ ಅವರು ಬಿಜೆಪಿಗೆ ಸೇರಲು ಒಲವು ತೋರುತ್ತಿಲ್ಲ ಎನ್ನಲಾಗಿದ್ದು, ಕಾಂಗ್ರೆಸ್​ಗೆ ಸೇರ್ಪಡೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ದತ್ತ ಅವರು ಕಾಂಗ್ರೆಸ್​ ಸೇರುವ ಕುರಿತು ಆಗಿರುವ ಮಾತುಕತೆಯ ಆಡಿಯೊ ತುಣುಕು ವೈರಲ್ ಆಗಿದೆ. ಸಿದ್ದರಾಮಣ್ಣ ಕರೆಯುತ್ತಿದ್ದಾರೆ, ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಮಂತ್ರಿ ಮಾಡುತ್ತೇನೆ, ಎಲ್ಲಾ ಅನುಕೂಲ ಮಾಡಿಕೊಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ ಎಂದು ದತ್ತ ಹೇಳಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಕಡೂರು ಕ್ಷೇತ್ರದ ರಾಗಿ ಬೆಳೆಗಾರರ ಸಮಸ್ಯೆ ಕುರಿತು ವಿವರಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ದತ್ತ ಭೇಟಿಯಾಗಿದ್ದರು. ಈ ವೇಳೆ ದತ್ತ ಅವರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳುವಂತೆ ಕಡೂರಿನಿಂದ ಬಂದಿದ್ದ ದತ್ತ ಬೆಂಬಲಿಗರು ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಕೋರಿದರು. ಆದರೆ ಸಿದ್ದರಾಮಯ್ಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಭೇಟಿಯ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಬಹಿರಂಗವಾಗಿಯೇ ಜೆಡಿಎಸ್​ ನಿಲುವುಗಳನ್ನು ಟೀಕಿಸಿದ್ದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ಜಾತ್ಯತೀತ ಜನತಾದಳದ (ಜೆಡಿಎಸ್) ಹೋರಾಟ ತೀವ್ರತೆ ಕಳೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ವಿರುದ್ಧ ಜೆಡಿಎಸ್ ಹೆಚ್ಚು ತೀವ್ರವಾಗಿ ಹೋರಾಟ ಮಾಡುತ್ತಿಲ್ಲ. ಪಕ್ಷದ ಜಾತ್ಯತೀತ ನಿಲುವು ಶಿಥಿಲವಾಗುತ್ತಿದೆ. ಪಕ್ಷದ ಸಿದ್ಧಾಂತ ಯಾವ ಕಾರಣಕ್ಕೂ ಬದಲಾಗಬಾರದು. ಎರಡೂ ರಾಷ್ಟ್ರೀಯ ಪಕ್ಷಗಳನ್ನು ಸಮಾನ ದೂರದಲ್ಲೇ ಇಡಬೇಕು. ಈ ಮೂಲಕ ಜಾತ್ಯತೀತ ನಿಲುವಿಗೆ ಬದ್ಧವಾಗಿರಬೇಕು. ಬಿಜೆಪಿ ವಿರುದ್ಧ ಜೆಡಿಎಸ್ ಸ್ಪಷ್ಟವಾಗಿ ಹೋರಾಟ ಮಾಡುತ್ತಿಲ್ಲ. ಇದನ್ನು ನಾನು ಪಕ್ಷದ ವೇದಿಕೆಯಲ್ಲಿಯೂ ಚರ್ಚಿಸಿದ್ದೇನೆ. ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸ್ಪಷ್ಟ ನಿಲುವು ಇರಬೇಕು ಎಂದು ಹೇಳಿದರು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿಯನ್ನು ಜೆಡಿಎಸ್ ಸ್ಪಷ್ಟವಾಗಿ ವಿರೋಧಿಸುತ್ತಿಲ್ಲ ಎನ್ನುವ ಅಭಿಪ್ರಾಯ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಲ್ಲಿ ಇದೆ ಎಂದು ಹೇಳಿದ್ದರು. ಪಕ್ಷದ ನಿಲುವು ಒಂದೇ ರೀತಿಯಲ್ಲಿರಬೇಕು. ಅದು ಪದೇಪದೆ ಬದಲಾಗಬಾರದು. ಪಕ್ಷದ ನಿಲುವುಗಳಲ್ಲಿ ನಿರಂತರತೆ ಇರಬೇಕು. ನಮ್ಮ ನಿಲುವು ಸದಾ ಸಾಮಾಜಿಕ ನ್ಯಾಯದ ಪರವಾಗಿಯೇ ಇರಬೇಕು. ಹೀಗೆ ಇರುತ್ತದೆ ಎನ್ನುವ ಕಾರಣಕ್ಕೆ ನಾನು ಜೆಡಿಎಸ್​ನಲ್ಲಿ ಇಷ್ಟು ದೀರ್ಘ ಕಾಲ ಇದ್ದೇನೆ. ಆದರೆ ಇತ್ತೀಚೆಗೆ ಈ ನಿಲುವಿನಲ್ಲಿ ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂಬ ಮನೋಭಾವ ಮತದಾರರಲ್ಲಿ ಮೂಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ವಿಚಾರ ಇಂದಿಗೂ ಸ್ಪಷ್ಟವಾಗಿಯೇ ಇದೆ. ಅವರ ನಿಲುವುಗಳ ಬಗ್ಗೆ ಯಾವುದೇ ಅನುಮಾನವಿಲ್ಲ. ಅವರು ಜಾತ್ಯತೀತರಾಗಿಯೇ ಎಲ್ಲ ಕಾಲದಲ್ಲಿಯೂ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ ಎಂದರು. ಎಚ್.ಡಿ.ಕುಮಾರಸ್ವಾಮಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ 20 ವರ್ಷವಿದ್ದಾಗ ದೇವೇಗೌಡರ ಅನುಯಾಯಿಯಾದೆ. ಈಗ ನನಗೆ 69 ವರ್ಷ ವಯಸ್ಸು. ಇಂದಿಗೂ ನಾನು ದೇವೇಗೌಡರ ಜೊತೆಗೆ ಹೆಚ್ಚು ಸಂಪರ್ಕದಲ್ಲಿದ್ದೇನೆ. ಅವರು ಏನು ಎಂಬುದು ನನಗೆ ಗೊತ್ತು ಎಂದಿದ್ದರು.

ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ