Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ: ಅರ್ಹ ನಿರುದ್ಯೋಗಿ ಡಿಪ್ಲೋಮಾ, ಪದವೀಧರರ ಖಾತೆಗೆ ಬೀಳಲಿದೆ 1500, 3000 ರೂಪಾಯಿ

Yuva Nidhi Scheme: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಗೆ ನಾಳೆ ಶಿವಮೊಗ್ಗ ನಗರದಲ್ಲಿ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ವೇದಿಕೆ ಸಜ್ಜಾಗಿದ್ದು, 85 ಸಾವಿರಕ್ಕೂ ಅಧಿಕ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ನಾಳೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ: ಅರ್ಹ ನಿರುದ್ಯೋಗಿ ಡಿಪ್ಲೋಮಾ, ಪದವೀಧರರ ಖಾತೆಗೆ ಬೀಳಲಿದೆ 1500, 3000 ರೂಪಾಯಿ
ನಾಳೆ ಶಿವಮೊಗ್ಗದಲ್ಲಿ ಯುವನಿಧಿಗೆ ಚಾಲನೆ: ಅರ್ಹ ನಿರುದ್ಯೋಗಿಗಳ ಖಾತೆಗೆ ಬೀಳಲಿದೆ ಹಣ
Follow us
TV9 Web
| Updated By: Rakesh Nayak Manchi

Updated on: Jan 11, 2024 | 3:05 PM

ಬೆಂಗಳೂರು, ಜ.11: ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜನವರಿ 12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ಷಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ (Yuva Nidhi Scheme) ಚಾಲನೆ ನೀಡಲಾಗುತ್ತಿದೆ. ಶಿವಮೊಗ್ಗ (Shivamogga) ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗ ಫ್ರೀಡಂ ಪಾರ್ಕ್​ನ (ಹಳೆ ಜೈಲ್‌ ಆವರಣ) ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ಸಜ್ಜಾಗಿದ್ದು, 85 ಸಾವಿರಕ್ಕೂ ಹೆಚ್ಚು ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಹಾಗೂ ಕಾರ್ಯಕ್ರಮದ ರೂವಾರಿ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು, ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳಿನ್ನು ಮಾಡಿಸುತ್ತಿದ್ದಾರೆ.

ಇದನ್ನೂ ಓದಿ: ಯುವನಿಧಿಗೆ ಈವರಗೆ 32 ಸಾವಿರ ಅರ್ಜಿ ಸಲ್ಲಿಕೆ: ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೆಚ್ಚು

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್​ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್​​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.

ಏನಿದು ಯುವನಿಧಿ ಯೋಜನೆ?

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ.

ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಈ ಉದ್ಯೋಗಭತ್ಯೆಯನ್ನು ಎರಡು ವರ್ಷಗಳ ವರೆಗೆ ಮಾತ್ರ ನೀಡಲಾಗುತ್ತದೆ. 2 ವರ್ಷಕ್ಕೂ ಮುನ್ನ ಫಲಾನುಭವಿಗೆ ಉದ್ಯೋಗ ಸಿಕ್ಕಲ್ಲಿ ಯೋಜನೆಯಡಿ ಬರುವ ಹಣ ನಿಲ್ಲಿಸಲಾಗುತ್ತದೆ.

ನೋಂದಣಿ ಮಾಡುವುದು ಹೇಗೆ?

ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್​ನಲ್ಲಿ ಸಲ್ಲಿಸಬಹುದಾಗಿದೆ.

ಈ ಯೋಜನೆಗೆ ಇವರು ಅರ್ಹರಲ್ಲ

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಅನ್ವಯ ಆಗುವುದಿಲ್ಲ.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ವಿಧಾನಸಭಾ ಚುನಾವಣೆಗೂ ಮುನ್ನಾ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ದೇಶದ ಜನತೆ ಕರ್ನಾಟಕ ಮಾದರಿಯ ಆಡಳಿತವನ್ನು ಎದುರು ನೋಡುತ್ತಿದ್ದಾರೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!