ಐಷಾರಾಮಿ ವಿಮಾನದಲ್ಲಿ ಸಿದ್ದರಾಮಯ್ಯ ಜತೆ ಜಮೀರ್ ಅಹ್ಮದ್ ಪ್ರಯಾಣ ವಿಡಿಯೋ ವೈರಲ್: ಬಿಜೆಪಿ ಕಿಡಿ
ಜಮೀರ್ ಅಹ್ಮದ್ ಅವರು ಐಷಾರಾಮಿ ಚಾರ್ಟರ್ಡ್ ಫ್ಲೈಟ್‌ನಲ್ಲಿ ಉದ್ದನೆಯ ಸೋಫಾದಲ್ಲಿ ಕ್ಯಾಮೆರಾಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಕೂಡ ಇರುವುದು 32 ಸೆಕೆಂಡುಗಳ ವೀಡಿಯೊದಲ್ಲಿದೆ.
ಬೆಂಗಳೂರು, ಡಿಸೆಂಬರ್ 22: ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜತೆ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಅವರ ಮೇಲೆ ಮುಗಿಬಿದ್ದಿದೆ. ರಾಜ್ಯದಲ್ಲಿ ಬರ ಬಂದು ಜನತೆ ಸಂಕಷ್ಟದಲ್ಲಿದ್ದರೆ ಮಜಾವಾದಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಅಹ್ಮದ್ ಖಾನ್ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ಜಮೀರ್ ಅಹ್ಮದ್ ಖಾನ್ ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿಮಾನ ಪ್ರಯಾಣದ ವಿಡಿಯೋವನ್ನು ಪೋಸ್ಟ್ ಮಾಡಿದ್ದರು.
ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ @siddaramaiah ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು.@CMofKarnataka @Iam_KGovindaraj pic.twitter.com/2rcbIy9QgE
— B Z Zameer Ahmed Khan (@BZZameerAhmedK) December 21, 2023
ಜಮೀರ್ ಅಹ್ಮದ್ ಅವರು ಐಷಾರಾಮಿ ಚಾರ್ಟರ್ಡ್ ಫ್ಲೈಟ್‌ನಲ್ಲಿ ಉದ್ದನೆಯ ಸೋಫಾದಲ್ಲಿ ಕ್ಯಾಮೆರಾಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಕೂಡ ಇರುವುದು 32 ಸೆಕೆಂಡುಗಳ ವೀಡಿಯೊದಲ್ಲಿದೆ.
ಇದನ್ನೂ ಓದಿ: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿದ ಇಬ್ರಾಹಿಂ
ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ.@INCKarnataka ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ.
ಆದರೆ, ಮಜವಾದಿ @siddaramaiah ಮತ್ತು ಅವರ ಅತ್ಯಾಪ್ತ @BZZameerAhmedK ಅವರ ಆಡಂಬರಕ್ಕೇನು ಕಡಿಮೆ ಇಲ್ಲ.
ಜನರ ತೆರಿಗೆ… https://t.co/1vb2xSIv6W
— BJP Karnataka (@BJP4Karnataka) December 21, 2023
ಇದಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕಿಡಿಕಾರಿರುವ ಬಿಜೆಪಿ, ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ ಸಿದ್ದರಾಮಯ್ಯ ಮತ್ತು ಅವರ ಅತ್ಯಾಪ್ತ ಜಮೀರ್ ಅಹ್ಮದ್ ಖಾನ್ ಅವರ ಆಡಂಬರಕ್ಕೇನು ಕಡಿಮೆ ಇಲ್ಲ. ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:37 am, Fri, 22 December 23