ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿ ಆತ್ಮಹತ್ಯೆ

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಕೃಷ್ಣ ಬೆಟ್ಟುನಲ್ಲಿ ನಡೆದಿದೆ. 45 ವರ್ಷದ ಹೋಟೆಲ್​ ಉದ್ಯಮಿ ಸುನಿಲ್ ಶೆಟ್ಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೂನಾದಲ್ಲಿ ಹೋಟೆಲ್​ ನಡೆಸುತ್ತಿದ್ದ ಸುನಿಲ್ ಶೆಟ್ಟಿ ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದನು ಎಂದು ತಿಳಿದುಬಂದಿದೆ. ಹೀಗಾಗಿ, ಆರ್ಥಿಕ ಮುಗ್ಗಟ್ಟಿನಿಂದ ಸುನಿಲ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಸಾವನ್ನಪ್ಪಿದ್ದಾನೆ. ಕಾರ್ಕಳ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Tags:

Related Posts :

Category:

error: Content is protected !!