ವಿಶಾಲ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಸುವರ್ಣ ಕ್ಷಣ ಇಲ್ಲಿದೆ ನೋಡಿ

  • TV9 Web Team
  • Published On - 15:35 PM, 1 Nov 2020

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ಏಕೀಕರಣವಾದುದ್ದರಿಂದ ಇದರ ಸಂಕೇತವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತೆ.

ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಲಾಯಿತು. ಹೀಗಾಗಿ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973 ರಂದು ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಸುವರ್ಣ ಕ್ಷಣದ ಛಾಯಾಚಿತ್ರ ಇಲ್ಲಿದೆ.