ರೋಗಿಯನ್ನ ಹೊತ್ತೊಯ್ದ ಸಂಬಂಧಿ: ಜಿಮ್ಸ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

ಗದಗ: ವಯೋವೃದ್ಧೆ ರೋಗಿಯನ್ನು ಸಂಬಂಧಿಕರೇ ಹೊತ್ತೊಕೊಂಡು ಹೋಗಿರುವ ಅಮಾನವೀಯ ಘಟನೆ ನಗರದ ಹೊರವಲಯದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯಕೀಯ ಆಸ್ಪತ್ರೆಯಲ್ಲಿ ಸ್ಟ್ರೆಚರ್, ವ್ಹೀಲ್ ಚೇರ್ ಸಿಗದ ಕಾರಣ ಅಜ್ಜಿಯನ್ನು ಸಂಬಂಧಿಯೇ ಎತ್ತಿಕೊಂಡು ಹೋಗಿದ್ದಾನೆ.

ಆಸ್ಪತ್ರೆಯಲ್ಲಿ ರೋಗಿಯನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಅಲ್ಲಿದ್ದ ಸಾರ್ವಜನಿಕರೇ ವಿಡಿಯೋ ಮಾಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲಿಗೆಳೆದಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related Posts :

Category:

error: Content is protected !!