ಕಮತಗಿ ಕ್ರಾಸ್ ಬಳಿ ಸರಣಿ ಅಪಘಾತ: ಐದು ವಾಹನಗಳು ಜಖಂ

ಬಾಗಲಕೋಟೆ: ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಐದು ವಾಹನಗಳಿಗೆ ಜಖಂ ಆಗಿರುವ ಘಟನೆ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ನಡೆದಿದೆ. 3 ಲಾರಿ ಮತ್ತು 2 ಕ್ಯಾಂಟರ್ ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.

ಕಮತಗಿ ಕ್ರಾಸ್ ಬಳಿ ರಸ್ತೆ ಪಕ್ಕ ನಿಂತ ಒಂದು ಲಾರಿಗೆ ಮೊದಲು ಒಂದು ಲಾರಿ ಡಿಕ್ಕಿ ಹೊಡೆದಿದೆ. ನಂತರ‌ ಹಿಂದಿನಿಂದ ಬಂದ ಲಾರಿ ಕ್ಯಾಂಟರ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಓರ್ವ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Tags:

Related Posts :

Category: