AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore airport IPO; ಮುಂದಿನ ವರ್ಷ ಬೆಂಗಳೂರು ವಿಮಾನ ನಿಲ್ದಾಣ ಐಪಿಒ; 30,000 ಕೋಟಿ ರೂ. ಷೇರು ಮಾರಾಟ ನಿರೀಕ್ಷೆ

Bangalore airport IPO; ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಐಪಿಒ ಮಾತುಕತೆ ಪ್ರಗತಿಯಲ್ಲಿದೆ. ಲಿಸ್ಟಿಂಗ್​ಗೆ ಸಂಬಂಧಿಸಿದ ವಿವರಗಳು ಬದಲಾಗಬಹುದು ಎಂದು ಮೂಲಗಳು ಹೇಳಿವೆ.

Bangalore airport IPO; ಮುಂದಿನ ವರ್ಷ ಬೆಂಗಳೂರು ವಿಮಾನ ನಿಲ್ದಾಣ ಐಪಿಒ; 30,000 ಕೋಟಿ ರೂ. ಷೇರು ಮಾರಾಟ ನಿರೀಕ್ಷೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು
TV9 Web
| Edited By: |

Updated on: Nov 17, 2022 | 3:18 PM

Share

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BIAL) ಐಪಿಒ (Initial Public Offering) ಅಥವಾ ಆರಂಭಿಕ ಸಾರ್ವಜನಿಕ ಕೊಡುಗೆಗೆ ಫೇರ್​ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಲಿಮಿಟೆಡ್ (Fairfax India Holdings Ltd.) ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಐಪಿಒದಲ್ಲಿ ಸುಮಾರು 30,000 ಕೋಟಿ ರೂ. ಮೊತ್ತದ ಷೇರು ಮಾರಾಟ ಮಾಡುವ ಸಾಧ್ಯತೆ ಇದೆ. ಮುಂದಿನ ವರ್ಷ ಐಪಿಒ ನಡೆಯಬಹುದು ಎಂದು ವರದಿ ಅಂದಾಜಿಸಿದೆ.

ಮುಂದಿನ ವರ್ಷ ಐಪಿಒ ನಡೆಸುವ ಸಾಧ್ಯತೆಗಳ ಬಗ್ಗೆ ಕೆನಡಾ ಮೂಲದ ಹೂಡಿಕೆ ಸಂಸ್ಥೆಯ ಭಾರತದ ಅಂಗಸಂಸ್ಥೆ ಫೇರ್​ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಲಿಮಿಟೆಡ್ ಸಲಹೆಗಾರರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಬ್ಲೂಮ್​ಬರ್ಗ್’ ವರದಿ ಮಾಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಇದರ ಬಹುಪಾಲು ಬಂಡವಾಳವನ್ನು ಫೇರ್​ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಹೊಂದಿದೆ.

ಇದನ್ನೂ ಓದಿ: Bengaluru airport ಕಣ್ಮನ ಸೆಳೆಯುವ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2; ಹೇಗಿದೆ ವಿನ್ಯಾಸ?

ಮುಂಬೈ ಮಾರುಕಟ್ಟೆಯಲ್ಲಿ ಆಫರಿಂಗ್ 3,000 ದಿಂದ 4,000 ಕೋಟಿ ರೂ.ಗೆ ಹೆಚ್ಚಳವಾಗಬಹುದು ಎಂದು ಮೂಲಗಳು ಅಂದಾಜಿಸಿವೆ. ಪ್ರಾಥಮಿಕ ಷೇರುಗಳು ಮತ್ತು ಉಳಿದ ಷೇರುಗಳ ಶೇಕಡಾ 7ರಷ್ಟು ಐಪಿಒ ವ್ಯಾಕ್ತಿಗೆ ಬರಲದೆ ಎಂದೂ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಐಪಿಒ ಮಾತುಕತೆ ಪ್ರಗತಿಯಲ್ಲಿ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಐಪಿಒ ಮಾತುಕತೆ ಪ್ರಗತಿಯಲ್ಲಿದೆ. ಲಿಸ್ಟಿಂಗ್​ಗೆ ಸಂಬಂಧಿಸಿದ ವಿವರಗಳು ಬದಲಾಗಬಹುದು. ಸಮಾಲೋಚನೆಯ ಬಳಿಕ ಫೇರ್​ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ವಿಮಾನ ನಿಲ್ದಾಣದ ಷೇರು ಮಾರಾಟಕ್ಕೆ ಮನ ಮಾಡದೆಯೂ ಇರಬಹುದು ಎಂದು ಮೂಲಗಳು ಹೇಳಿವೆ. ಈ ವಿಚಾರವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

2017ರಲ್ಲಿ ಬಂಡವಾಳ ಖರೀದಿಸಿದ್ದ ಫೇರ್​ಫ್ಯಾಕ್ಸ್ ಇಂಡಿಯಾ

ಫೇರ್​ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ 2017ರಲ್ಲಿ ಮೊದಲಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಂಡವಾಳ ಖರೀದಿಸಿತ್ತು. ನಂತರದಲ್ಲಿ ಶೇಕಡಾ 54ಕ್ಕೆ ವಿಸ್ತರಿಸಿಕೊಂಡಿದೆ. 2008ರಲ್ಲಿ ಕಾರ್ಯಾಚರಣೆ ಆರಂಭಿಸಿದ್ದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳೆದ ಜೂನ್ ವರೆಗೆ 25 ಕೋಟಿಗೂ ಹೆಚ್ಚು ಮಂದಿ ಪ್ರಯಾಣಿಸಿದ್ದಾರೆ. ದೇಶದ 61 ಪ್ರದೇಶಗಳಿಗೆ ಮತ್ತು ವಿದೇಶಗಳ 14 ಸ್ಥಳಗಳಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳು ಹಾರಾಟ ನಡೆಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್