Sign In

By signing in or creating an account, you agree with Associated Broadcasting Company's Terms & Conditions and Privacy Policy.

Share Market Highlights: ಅಲ್ಪ ಗಳಿಕೆಯೊಂದಿಗೆ ವಾರದ ವಹಿವಾಟು ಮುಗಿಸಿದ ಷೇರುಪೇಟೆ

ಸತತ ಆರನೇ ದಿನವೂ ಅಲ್ಪ ಗಳಿಕೆ ದಾಖಲಿಸುವ ಮೂಲಕ ಮುಂಬೈ ಷೇರುಪೇಟೆ ಸೂಚ್ಯಂಕ ಬಿಎಸ್​ಇ ಮತ್ತು ಎನ್​ಎಸ್​ಇ ನಿಫ್ಟಿ ವಾರದ ವಹಿವಾಟು ಮುಕ್ತಾಯಗೊಳಿಸಿವೆ.

Share Market Highlights: ಅಲ್ಪ ಗಳಿಕೆಯೊಂದಿಗೆ ವಾರದ ವಹಿವಾಟು ಮುಗಿಸಿದ ಷೇರುಪೇಟೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Oct 21, 2022 | 5:03 PM

ಮುಂಬೈ: ಸತತ ಆರನೇ ದಿನವೂ ಅಲ್ಪ ಗಳಿಕೆ ದಾಖಲಿಸುವ ಮೂಲಕ ಮುಂಬೈ ಷೇರುಪೇಟೆ ಸೂಚ್ಯಂಕ ಬಿಎಸ್​ಇ (BSE) ಮತ್ತು ಎನ್​ಎಸ್​ಇ ನಿಫ್ಟಿ (NSE nifty) ವಾರದ ವಹಿವಾಟು ಮುಕ್ತಾಯಗೊಳಿಸಿವೆ. ಆ್ಯಕ್ಸಿಸ್ ಬ್ಯಾಂಕ್ (Axis Bank) ಹಾಗೂ ಐಸಿಐಸಿಐ ಬ್ಯಾಂಕ್ (ICICI Bank) ಷೇರು ಮೌಲ್ಯಗಳು ಉತ್ತಮ ಗಳಿಕೆ ದಾಖಲಿಸಿವೆ. ಹಲವು ದಿನಗಳ ನಂತರ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FIIs) ಹೆಚ್ಚು ಖರೀದಿ ಮಾಡಿದರು. ಇವರು 1,864.79 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿರು.

ಬಿಎಸ್​ಇ ಸೆನ್ಸೆಕ್ಸ್ ಶೇಕಡಾ 0.18ರಷ್ಟು ಅಥವಾ 104.25 ಅಂಕ ಏರಿಕೆ ಕಂಡು 59,307.15ರಲ್ಲಿ ವಹಿವಾಟು ಕೊನೆಗೊಳಿಸಿದೆ. ಇದರೊಂದಿಗೆ ಸತತ ಆರನೇ ದಿನವೂ ಗಳಿಕೆ ದಾಖಲಿಸಿದಂತಾಗಿದೆ. ಒಂದು ಹಂತದ ವಹಿವಾಟಿನಲ್ಲಿ ಬಿಎಸ್​ಇ ಸೆನ್ಸೆಕ್ಸ್ 59,590.93ರ ವರೆಗೂ ಏರಿಕೆ ಕಂಡು ಗಮನ ಸೆಳೆದಿತ್ತು.

ಇದನ್ನೂ ಓದಿ: Share Market Highlights: ಅಲ್ಪ ಗಳಿಕೆಯೊಂದಿಗೆ ವಹಿವಾಟು ಮುಗಿಸಿದ ಷೇರುಪೇಟೆ

ಇದನ್ನೂ ಓದಿ
Image
Petrol Price Today: ಇಳಿಕೆಯಾಯಿತಾ ಪೆಟ್ರೋಲ್ ಬೆಲೆ?; ನಿಮ್ಮ ನಗರಗಳಲ್ಲಿ ಇಂದಿನ ಡೀಸೆಲ್ ದರ ಹೀಗಿದೆ
Image
Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ
Image
Health Insurance: ಆರೋಗ್ಯ ವಿಮೆ ಮಾಡಿಸುತ್ತಿದ್ದೀರಾ? ಅಸ್ತಿತ್ವದಲ್ಲಿರುವ ಕಾಯಿಲೆಗಳ ವಿವರ ನೀಡಲು ಮರೆಯಬೇಡಿ
Image
Amazon Great Indian Festival: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್​, ಕೋಟ್ಯಧಿಪತಿಗಳಾದ 650 ಮಾರಾಟಗಾರರು

ಎನ್​ಎಸ್​ಇ ನಿಫ್ಟಿ ಶೇಕಡಾ 0.07ರಷ್ಟು ಅಥವಾ 12.35 ಅಂಶ ಚೇತರಿಕೆ ಕಂಡು 17,576.30ರಲ್ಲಿ ವಹಿವಾಟು ಮುಕ್ತಾಯಗೊಳಿಸಿತು.

ಶೇಕಡಾ 8.96 ಗಳಿಕೆ ಕಂಡ ಆ್ಯಕ್ಸಿಸ್ ಬ್ಯಾಂಕ್:

ಸೆನ್ಸೆಕ್ಸ್​ನಲ್ಲಿ ಆ್ಯಕ್ಸಿಸ್ ಬ್ಯಾಂಕ್ ಶೇಕಡಾ 8.96 ಗಳಿಕೆ ದಾಖಲಿಸಿದೆ. ಗುರುವಾರದ ವಹಿವಾಟಿನಲ್ಲಿ ಕಂಪನಿಯು ಶೇಕಡಾ 66.29ರ ಏರಿಕೆ ಕಂಡಿತ್ತು. ಸೆಪ್ಟೆಂಬರ್​ಗೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕ್​ನ ನಿವ್ವಳ ಲಾಭ 5,625.25 ಕೋಟಿ ಆಗಿದ್ದು, ಕಂಪನಿಯ ಷೇರು ವಹಿವಾಟಿನಲ್ಲಿ ಚೇತರಿಕೆಗೆ ನೆರವು ನೀಡಿದೆ.

ಐಸಿಐಸಿಐ ಬ್ಯಾಂಕ್, ಹಿಂದೂಸ್ತಾನ್ ಯುನಿಲೀವರ್, ಕೋಟಕ್​ ಮಹೀಂದ್ರಾ ಬ್ಯಾಂಕ್, ನೆಸ್ಲೆ, ಟೈಟಾನ್ ಆ್ಯಂಡ್ ಅಲ್ಟ್ರಾಟೆಕ್ ಸಿಮೆಂಟ್ ಈ ವಾರದ ಪ್ರಮುಖ ಗಳಿಕೆದಾರ ಕಂಪನಿಗಳಾಗಿವೆ.

ಮತ್ತೊಂದೆಡೆ ಬಜಾಜ್ ಫೈನಾನ್ಸ್, ಬಜಾಜ್ ಫಿನ್​ಸರ್ವ್, ಇಂಡಸ್​ಇಂಡ್ ಬ್ಯಾಂಕ್ ಹಾಗೂ ಲ್ಯಾರ್ಸನ್ & ಟರ್ಬೊ ನಷ್ಟ ಅನುಭವಿಸಿದವು.

ಮುಹೂರ್ತ ವಹಿವಾಟು (Diwali Muhurat Trading):

ದೀಪಾವಳಿ ಪ್ರಯುಕ್ತ ಸೋಮವಾರ ಸಂಜೆ 6.15 ರಿಂದ 7.15 ರವರೆಗೆ ಷೇರುಪೇಟೆಯಲ್ಲಿ ಮುಹೂರ್ತ ವಹಿವಾಟು ನಡೆಯಲಿದೆ. ಈ ವಹಿವಾಟಿನಲ್ಲಿ ಭಾಗಿಯಾಗಲು ವಹಿವಾಟುದಾರರು ಕಾತರದಿಂದ ಕಾಯುತ್ತಿದ್ದಾರೆ. ಮುಹೂರ್ತ ವಹಿವಾಟಿನಲ್ಲಿ ಭಾಗಿಯಾಗುವುದರಿಂದ ಹಾಗೂ ಖರೀದಿ ಮಾಡುವುದರಿಂದ ವರ್ಷವಿಡೀ ಮಾರುಕಟ್ಟೆಯಲ್ಲಿ ಉತ್ತಮ ಗಳಿಕೆಯಾಗಲಿದೆ ಎಂಬ ನಂಬಿಕೆ ಹೂಡಿಕೆದಾರರಲ್ಲಿದೆ. ಪ್ರತಿ ವರ್ಷ ದೀಪಾವಳಿಯಂದು ಒಂದು ಗಂಟೆ ಅವಧಿಗೆ ಮುಹೂರ್ತ ವಹಿವಾಟು ನಡೆಸಲಾಗುತ್ತದೆ.

ಕಚ್ಚಾ ತೈಲ ಬೆಲೆ ಇಳಿಕೆ:

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇಕಡಾ 0.37ರಷ್ಟು ಇಳಿಕೆಯಾಗಿ ಬ್ಯಾರೆಲ್​ಗೆ 92.02 ಡಾಲರ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Fri, 21 October 22

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ