AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Update: ಷೇರುಪೇಟೆಯಲ್ಲಿ ಭರ್ಜರಿ ವಹಿವಾಟು; ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ

ಸೆನ್ಸೆಕ್ಸ್​ನಲ್ಲಿ ಹಿಂದೂಸ್ತಾನ್ ಯುನಿಲೀವರ್, ಸನ್ ಫಾರ್ಮಾ, ನೆಸ್ಲೆ, ಡಾ. ರೆಡ್ಡೀಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಟೈಟಾನ್ ಹಾಗೂ ಎಚ್​ಸಿಎಲ್ ಟೆಕ್ನಾಲಜೀಸ್ ಗಳಿಕೆಯ ಓಟ ಮುಂದುವರಿಸಿವೆ. ಇಂಡಸ್​ಇಂಡ್ ಬ್ಯಾಂಕ್, ಬಜಾಜ್ ಫಿನ್​ಸರ್ವ್, ಮಾರುತಿ, ಪವರ್ ಗ್ರಿಡ್, ಎಲ್​ಆ್ಯಂಡ್​ಟಿ ಷೇರು ಮೌಲ್ಯದಲ್ಲಿ ಕುಸಿತವಾಗಿದೆ.

Stock Market Update: ಷೇರುಪೇಟೆಯಲ್ಲಿ ಭರ್ಜರಿ ವಹಿವಾಟು; ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ
ಬಿಎಸ್​ಇ (ಸಾಂದರ್ಭಿಕ ಚಿತ್ರ)
TV9 Web
| Updated By: Ganapathi Sharma|

Updated on: Nov 29, 2022 | 6:00 PM

Share

ಮುಂಬೈ: ದೇಶೀಯ ಷೇರುಪೇಟೆಗಳು (Stock Markets) ಸತತ ಆರನೇ ದಿನ ಗಳಿಕೆಯ ಓಟ ಮುಂದುವರಿಸಿವೆ. ಬಿಎಸ್​ಇ ಸೆನ್ಸೆಕ್ಸ್ (BSE Sensex) ಹಾಗೂ ಎನ್​ಎಸ್​ಇ ನಿಫ್ಟಿ (NSE Nifty) ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಮಂಗಳವಾರ ದಿನದ ವಹಿವಾಟು ಕೊನೆಗೊಳಿಸಿವೆ. ವಿದೇಶಿ ಹೂಡಿಕೆ ಒಳಹರಿವು, ಏಷ್ಯಾದ ಮಾರುಕಟ್ಟೆಗಳ ವಹಿವಾಟಿನ ಪರಿಣಾಮ ದೇಶೀಯ ಷೇರುಪೇಟೆಗಳ ಮೇಲೆ ಉಂಟಾಗಿದ್ದು, ಹೂಡಿಕೆದಾರರಲ್ಲಿ ಸಂತಸ ಮೂಡಿಸಿದೆ. ಬಿಎಸ್​ಇ ಸೆನ್ಸೆಕ್ಸ್ 177.04 ಅಂಶ ಚೇತರಿಸಿ 62,681.84ರಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಮುಗಿಸಿದೆ. ಒಂದು ಹಂತದಲ್ಲಿ ಸೆನ್ಸೆಕ್ಸ್ 62,887.40ರಲ್ಲಿ ವಹಿವಾಟು ನಡೆಸಿತ್ತು. ಎನ್​ಎಸ್​ಇ ನಿಫ್ಟಿ 55.30 ಅಂಶ ಚೇತರಿಸಿ 18,618.05ರಲ್ಲಿ, ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ಕೊನೆಗೊಳಿಸಿದೆ.

‘ಗಳಿಕೆಯ ಓಟ ಸತತ ಆರನೇ ದಿನವೂ ಮುಂದುವರಿದಿರುವುದರಿಂದ, ಮಾರುಕಟ್ಟೆಗಳು ಗರಿಷ್ಠ ಮಟ್ಟ ತಲುಪಿರುವ ಸಂದರ್ಭದಲ್ಲಿ ಹೂಡಿಕೆದಾರರು ಎಚ್ಚರಿಕೆಯ ನಡೆ ಅನುಸರಿಸಿದ್ದಾರೆ. ಸದ್ಯ ಮಾರುಕಟ್ಟೆ ಉತ್ತಮ ವಹಿವಾಟು ನಡೆಸುತ್ತಿದ್ದರೂ ಕಟ್ಟುನಿಟ್ಟಾದ ಲಾಕ್‌ಡೌನ್‌ ವಿರುದ್ಧ ಚೀನಾದಲ್ಲಿ ಹೆಚ್ಚುತ್ತಿರುವ ಪ್ರತಿಭಟನೆಗಳು ಹೂಡಿಕೆದಾರರಲ್ಲಿ ಸಣ್ಣ ಮಟ್ಟಿನ ಆತಂಕಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Stock Markets: ಸಾರ್ವಕಾಲಿಕ ಗರಿಷ್ಠ ಮಟ್ಟದತ್ತ ನಿಫ್ಟಿ ನಾಗಾಲೋಟ; ಮುಂದುವರಿದ ಸೆನ್ಸೆಕ್ಸ್ ಓಟ

‘ಪರಿಸ್ಥಿತಿ ಸುಧಾರಿಸದಿದ್ದರೆ, ಮಾರುಕಟ್ಟೆಯ ಮೇಲೆ ಪರಿಣಾಮ ಉಂಟಾಗಬಹುದು. ಆದರೆ ಇತರ ಪ್ರಮುಖ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತ ತುಸು ಉತ್ತಮ ಸ್ಥಿತಿಯಲ್ಲಿರುವುದರಿಂದ ಹೂಡಿಕೆದಾರರು ದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ಹೂಡಿಕೆಗೆ ಸಿದ್ಧರಾಗಿದ್ದಾರೆ’ ಎಂದು ಕೋಟಕ್ ಸೆಕ್ಯುರಿಟೀಸ್​​ನ ಈಕ್ವಿಟಿ ಸಂಶೋಧನಾ ಮುಖ್ಯಸ್ಥ ಶ್ರೀಕಾಂತ್ ಚೌಹಾಣ್ ತಿಳಿಸಿದ್ದಾರೆ.

ಇಲ್ಲಿದೆ ಲಾಭ, ನಷ್ಟದ ಲೆಕ್ಕಾಚಾರ

ಸೆನ್ಸೆಕ್ಸ್​ನಲ್ಲಿ ಹಿಂದೂಸ್ತಾನ್ ಯುನಿಲೀವರ್, ಸನ್ ಫಾರ್ಮಾ, ನೆಸ್ಲೆ, ಡಾ. ರೆಡ್ಡೀಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಟೈಟಾನ್ ಹಾಗೂ ಎಚ್​ಸಿಎಲ್ ಟೆಕ್ನಾಲಜೀಸ್ ಗಳಿಕೆಯ ಓಟ ಮುಂದುವರಿಸಿವೆ. ಇಂಡಸ್​ಇಂಡ್ ಬ್ಯಾಂಕ್, ಬಜಾಜ್ ಫಿನ್​ಸರ್ವ್, ಮಾರುತಿ, ಪವರ್ ಗ್ರಿಡ್, ಎಲ್​ಆ್ಯಂಡ್​ಟಿ ಷೇರು ಮೌಲ್ಯದಲ್ಲಿ ಕುಸಿತವಾಗಿದೆ.

ಬಿಎಸ್​ಇ ಮಿಡ್​ಕ್ಯಾಪ್ ಶೇಕಡಾ 0.39ರಷ್ಟು ಕುಸಿದಿದ್ದರೆ, ಸ್ಮಾಲ್​ಕ್ಯಾಪ್ ಇಂಡೆಕ್ಸ್ ಕೂಡ ಶೇಕಡಾ 0.29ರಷ್ಟು ಕುಸಿತ ದಾಖಲಿಸಿದೆ. ಗ್ರಾಹಕ ಸೇವೆ, ಇಂಧನ, ಕೈಗಾರಿಕೆ, ಟೆಲಿಕಮ್ಯುನಿಕೇಷನ್, ಆಟೊ ಹಾಗೂ ಸೇವಾ ಕ್ಷೇತ್ರದ ಕಂಪನಿಗಳ ಷೇರು ಮೌಲ್ಯದಲ್ಲಿ ಕುಸಿತ ಕಂಡುಬಂತು.

ಏಷ್ಯಾದಾದ್ಯಂತ ಷೇರು ಮಾರುಕಟ್ಟೆಗಳಲ್ಲಿ ಮಂಗಳವಾರ ಉತ್ತಮ ವಹಿವಾಟು ನಡೆದಿದೆ. ಸಿಯೋಲ್, ಶಾಂಘೈ, ಹಾಂಗ್​ಕಾಂಗ್ ಷೇರುಪೇಟೆಗಳು ಚೇತರಿಕೆಯೊಂದಿಗೆ ವಹಿವಾಟು ಮುಗಿಸಿವೆ. ಟೋಕಿಯೊದಲ್ಲಿ ಮಾತ್ರ ತುಸು ನಷ್ಟ ಕಂಡುಬಂದಿದೆ. ವಾಲ್​ಸ್ಟ್ರೀಟ್​ನಲ್ಲಿ ನಕಾರಾತ್ಮಕವಾಗಿ ಸೋಮವಾರದ ವಹಿವಾಟು ಅಂತ್ಯಗೊಂಡಿತ್ತು.

ಕಚ್ಚಾ ತೈಲ ಬೆಲೆ ಹೆಚ್ಚಳ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇಕಡಾ 2.45ರಷ್ಟು ಹೆಚ್ಚಾಗಿ ಪ್ರತಿ ಬ್ಯಾರೆಲ್​ಗೆ 85.23 ಡಾಲರ್​ಗೆ ಮಾರಾಟವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 3 ಪೈಸೆ ಕುಸಿದು 81.71ರಲ್ಲಿ ದಿನದ ವಹಿವಾಟು ಮುಗಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ