ಭಕ್ತನ ಮೇಲೆ ಹಲ್ಲೆ ಪ್ರಕರಣ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟ DC-SP

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಗ್ರಾಮದಲ್ಲಿರುವ ಸುಪ್ರಸಿದ್ಧ ಚೌಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ಭಕ್ತನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಇಬ್ಬರೂ ದೇವಸ್ಥಾನಕ್ಕೆ ಭೇಟಿ ಕೊಟ್ಟರು.
ನಿನ್ನೆ ಮಧ್ಯಾಹ್ನ ದೇಗುಲದ ಪ್ರಧಾನ ಅರ್ಚಕರಾದ ಶೇಷಗಿರಿ ಭಟ್​ ಸಹೋದರನಿಂದ ಭಕ್ತನೊಬ್ಬನ ಮೇಲೆ ಹಲ್ಲೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ KB ಶಿವಕುಮಾರ್ ಹಾಗೂ SP ಕೆ.ಎಂ. ಶಾಂತರಾಜು ಭೇಟಿಕೊಟ್ಟರು. ನಿನ್ನೆ ನಡೆದ ಘಟನೆ ಕುರಿತು ದೇವಸ್ಥಾನದ ಆಡಳಿತ ಮಂಡಳಿಯಿಂದ ಇಬ್ಬರೂ ಅಧಿಕಾರಿಗಳು ಮಾಹಿತಿ ಕಲೆಹಾಕಿದರು.

Related Tags:

Related Posts :

Category:

error: Content is protected !!