ಶಿವಮೊಗ್ಗ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಮಾಡಲು ಶೋಭಾ ಕರಂದ್ಲಾಜೆ ಕರೆ

ಶಿವಮೊಗ್ಗವನ್ನು ಕಾಂಗ್ರೆಸ್ ಮುಕ್ತವನ್ನಾಗಿ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

  • TV9 Web Team
  • Published On - 14:23 PM, 13 Jan 2021

ಶಿವಮೊಗ್ಗ: ಮುಖ್ಯ ಮಂತ್ರಿ ಬಿ.ಎಸ್​ ಯಡಿಯೂರಪ್ಪನ ತವರೂರಾಗಿರುವ ಶಿವಮೊಗ್ಗವನ್ನು ಕಾಂಗ್ರೆಸ್ ಮುಕ್ತವನ್ನಾಗಿ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕರೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ್ಯ ಹೆಚ್ಚಿಸಲು ಕಸರತ್ತು ನಡೆಸಿರುವ ಶೋಭಾ ಅವರು ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಅದೇ ರೀತಿ ಸ್ಥಳೀಯ ಆಡಳಿತ ಚುಕ್ಕಾಣಿ ಸಹ ಬಿಜೆಪಿ ಬೆಂಬಲಿತ ಸದಸ್ಯರಿಗೆ ಸಿಗಬೇಕು. ಯಾರು ಯಾವುದೇ ಆಮೀಷಕ್ಕೆ ಒಳಗಾಗದೇ ಬಿಜೆಪಿ ಜೊತೆ ಕೈ ಜೋಡಿಸ ಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಇದಕ್ಕಾಗಿ ಹೆಚ್ಚಿನ ಪರಿಶ್ರಮ ವಹಿಸಿ ಹೊಸ ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಶೋಭಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಎಲ್ರೂ ಡೋಂಗಿಗಳು.. BJP ಮೇಲಿನ ಸಿಟ್ಟಿಗೆ ರೈತ ಮಸೂದೆ ವಿರೋಧಿಸ್ತಿದಾರೆ -ಶೋಭಾ ಕರಂದ್ಲಾಜೆ