ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಆರೋಗ್ಯ ಚಿಂತಾಜನಕ: ತಾಜಾ Health Bulletin ಇಲ್ಲಿದೆ

ಚೆನ್ನೈ: ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್‌ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥತಿ ಬಿಗಡಾಯಿಸಿದೆ. ಹೀಗಾಗಿ ವೈದ್ಯರು ಅವರನ್ನು ತೀವ್ರ ನಿಗಾ ಘಟಕಕ್ಕೆ ಅಂದ್ರೆ ಐಸಿಯುಗೆ ಸ್ಥಳಾಂತರಿಸಿದ್ದಾರೆ.

ಈ ಸಂಬಂಧ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ಚೆನ್ನೈನ ಎಂಜಿಎಂ ಆಸ್ಪತ್ರೆ, ಖ್ಯಾತ ಗಾಯಕ ಎಸ್‌ಪಿಬಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನೋಡಿಕೊಳ್ಳುತ್ತಿರುವ ತಜ್ಞ ವೈದ್ಯರ ಸಲಹೆ ಮೇರೆಗೆ ಅವರನ್ನು ತೀವ್ರ ನಿಗಾ ಘಟಕಕ್ಕೆ ಶಿಫ್ಟ್‌ ಮಾಡಲಾಗಿದೆ.

ಸಧ್ಯ ಎಸ್‌ಪಿಬಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಲೈಫ್‌ ಸಪೋರ್ಟ್‌ ಸಾಧನಗಳನ್ನು ಅಳವಡಿಸಿಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಸತತವಾಗಿ ಅವರ ಸ್ಥಿತಿಯನ್ನು ಗಮನಿಸುತ್ತಿದೆ. ಮುಂದಿನ ಕೆಲ ಗಂಟೆಗಳು ತೀರಾ ಕ್ರಿಟಿಕಲ್‌ ಆಗಿದ್ದು, ವೈದ್ಯರು ಎಲ್ಲ ರೀತಿಯ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ ಎಂದು ತಿಳಿಸಿದೆ.

Related Tags:

Related Posts :

Category: