AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯತ್ಯಾಸ ನೋಡಿ!; ED ನೋಟಿಸ್​ಗೆ ಹೋರಾಟಕ್ಕೆ ಕರೆ ಕೊಟ್ಟ ರಾಹುಲ್ ಗಾಂಧಿ: 2010ರಲ್ಲಿ SIT ತನಿಖೆಗೆ ಸಹಕರಿಸಿದ್ದ ಮೋದಿ

ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಬಂದಾಗ 12 ವರ್ಷಗಳ ಹಿಂದೆ ನರೇಂದ್ರ ಮೋದಿ ಯಾವ ರೀತಿ ವರ್ತಿಸಿದ್ದರು, ಇದೀಗ ಇಡಿ ನೋಟಿಸ್​ ಬಗ್ಗೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಯಾವ ರೀತಿ ವರ್ತಿಸುತ್ತಿದ್ದಾರೆ ಎಂಬ ಹೋಲಿಕೆಗಳು, ಚರ್ಚೆಗಳು ಶುರುವಾಗಿವೆ.

ವ್ಯತ್ಯಾಸ ನೋಡಿ!; ED ನೋಟಿಸ್​ಗೆ ಹೋರಾಟಕ್ಕೆ ಕರೆ ಕೊಟ್ಟ ರಾಹುಲ್ ಗಾಂಧಿ: 2010ರಲ್ಲಿ SIT ತನಿಖೆಗೆ ಸಹಕರಿಸಿದ್ದ ಮೋದಿ
ರಾಹುಲ್ ಗಾಂಧಿ- ನರೇಂದ್ರ ಮೋದಿImage Credit source: google
TV9 Web
| Updated By: ಸುಷ್ಮಾ ಚಕ್ರೆ|

Updated on:Jun 09, 2022 | 12:20 PM

Share

ನವದೆಹಲಿ: ಅಕ್ರಮ ಹಣ ವರ್ಗಾವಣೆಯ (Money Laundering Case) ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿ ಮಾಡಿದೆ. ಜೂನ್ 13ರಂದು ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದು, ಬಿಜೆಪಿ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿ ಈ ವೇಳೆ ಕಾಂಗ್ರೆಸ್ (Congress) ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಇಡಿ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಸುದ್ದಿಗೋಷ್ಠಿಗಳು, ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ನಡುವೆ 2010ರಲ್ಲಿ ನರೇಂದ್ರ ಮೋದಿ (Narendra Modi) ಅವರು ಗುಜರಾತ್​ ಮುಖ್ಯಮಂತ್ರಿಯಾಗಿದ್ದಾಗ ಅವರು ಗುಜರಾತ್ ಧಂಗೆ (Gujarat Riots) ಪ್ರಕರಣದಲ್ಲಿ ಎಸ್​ಐಟಿ ವಿಚಾರಣೆಗೆ ಹಾಜರಾದ ಸಂದರ್ಭದ ವಿಡಿಯೋ ಬಹಳ ವೈರಲ್ ಆಗಿದೆ. ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಬಂದಾಗ 12 ವರ್ಷಗಳ ಹಿಂದೆ ನರೇಂದ್ರ ಮೋದಿ ಯಾವ ರೀತಿ ವರ್ತಿಸಿದ್ದರು, ಇದೀಗ ಇಡಿ ನೋಟಿಸ್​ ಬಗ್ಗೆ ರಾಹುಲ್ ಗಾಂಧಿ ಯಾವ ರೀತಿ ವರ್ತಿಸುತ್ತಿದ್ದಾರೆ ಎಂಬ ಹೋಲಿಕೆಗಳು, ಚರ್ಚೆಗಳು ಶುರುವಾಗಿವೆ.

ಇಡಿಯಿಂದ ರಾಹುಲ್ ಗಾಂಧಿಗೆ ಸಮನ್ಸ್ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದೆ. ಗಾಂಧಿ ಕುಟುಂಬವನ್ನು ವಿನಾಕಾರಣ ಎಳೆದು ತರಲಾಗುತ್ತಿದೆ ಎಂಬ ಆಕ್ರೋಶವನ್ನೂ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ್ದಾರೆ. ಆದರೆ, ಸಿಎಂ ಆಗಿದ್ದ ನರೇಂದ್ರ ಮೋದಿ ಅವರನ್ನು ಎಸ್‌ಐಟಿ ತನಿಖೆಗೆ ಕರೆಸಿಕೊಂಡ ಸಮಯದಲ್ಲಿ ಅವರು ನೀಡಿದ್ದ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಎಸ್​ಐಟಿ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ‘ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ. ನಾನು ಎಸ್‌ಐಟಿಯ ವಿಚಾರಣೆಗೆ ಹಾಜರಾಗುತ್ತೇನೆ. ಕಾನೂನು ಮತ್ತು ಸಂವಿಧಾನ ಸರ್ವಶ್ರೇಷ್ಠವಾದುದು. ಈ ಭಾರತದ ಪ್ರಜೆಯಾಗಿ ನಾನು ಅದಕ್ಕೆ ಬದ್ಧನಾಗಿದ್ದೇನೆ’ ಎಂದು ಹೇಳಿದ್ದರು.

ರಾಹುಲ್ ಗಾಂಧಿಗೆ ಇಡಿ ನೋಟಿಸ್: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜೂನ್ 13ರಂದು ವಿಚಾರಣೆಗೆ ಹಾಜರಾಗಲಿದ್ದು, ಅದೇ ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಪಕ್ಷದ ಸಂಸದರು ಮತ್ತು ಹಿರಿಯ ನಾಯಕರನ್ನು ಸೋಮವಾರ ಬೆಳಗ್ಗೆ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತಲುಪುವಂತೆ ತಿಳಿಸಲಾಗಿದೆ.

ಇದನ್ನೂ ಓದಿ
Image
Biotech Startup Expo 2022: ಬಯೋಟೆಕ್ ಸ್ಟಾರ್ಟ್​ಅಪ್ ಎಕ್ಸ್​ಪೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ
Image
ಜೂನ್ 13 ರಂದು ಇ.ಡಿ ಎದುರು ವಿಚಾರಣೆಗೆ ಹಾಜರಾಗಲಿರುವ ರಾಹುಲ್ ಗಾಂಧಿ
Image
Rahul Gandhi Video: ನೇಪಾಳದ ಪಬ್​ನಲ್ಲಿ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್

ಇದನ್ನೂ ಓದಿ: ಮೋದಿ ಒಬ್ಬೊಬ್ಬರ ತಲೆ ಮೇಲೆ 1.75 ಲಕ್ಷ ಸಾಲ ಇಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರಾಹುಲ್ ಗಾಂಧಿ ಇಡಿ ಕಚೇರಿಗೆ ಹಾಜರಾದಾಗ ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿಗೆ ಮೆರವಣಿಗೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ನ್ಯಾಷನಲ್ ಹೆರಾಲ್ಡ್-ಎಜೆಎಲ್ ಡೀಲ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್‌ನ ವಿರುದ್ಧ ಪ್ರತಿಭಟಿಸಲು ರಾಜ್ಯ ಘಟಕಗಳು ವಿವಿಧ ಅಭಿಯಾನಗಳನ್ನು ನಡೆಸಬೇಕು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ. ಈ ಹಿಂದೆ ಜೂನ್ 2ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಆ ಸಮಯದಲ್ಲಿ ಅವರು ವಿದೇಶದಲ್ಲಿದ್ದ ಕಾರಣ ಅವರು ಹೊಸ ದಿನಾಂಕವನ್ನು ನಿಗದಿಪಡಿಸಲು ಕೋರಿದ್ದರು. ಅದರಂತೆ ಜೂನ್ 13ಕ್ಕೆ ವಿಚಾರಣೆಗೆ ಹಾಜರಾಗಲು ಸಮನ್ಸ್​ ಜಾರಿ ಮಾಡಲಾಗಿದೆ.

ಮುಖ್ಯಮಂತ್ರಿಯಾಗಿದ್ದಾಗ ಎಸ್​ಐಟಿ ವಿಚಾರಣೆಗೆ ಹಾಜರಾಗಿದ್ದರು ನರೇಂದ್ರ ಮೋದಿ: 1,000ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ 2002ರ ಗುಜರಾತ್ ಕೋಮು ಗಲಭೆಗಳನ್ನು ತಡೆಯಲು ಸೂಕ್ತ ಪ್ರಯತ್ನಗಳನ್ನು ಮಾಡದ ಆರೋಪದ ಮೇಲೆ ವಿಚಾರಣೆಗೆ ಹಾಜರಾಗಲು ಆಗ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರಿಗೆ 2010ರಲ್ಲಿ ಎಸ್​ಐಟಿ ಸಮನ್ಸ್​ ಜಾರಿ ಮಾಡಿತ್ತು. ಆ ವೇಳೆ ಯಾವುದೇ ತಗಾದೆ ತೆಗೆಯದೆ, ತಮ್ಮ ಕಾರ್ಯಕರ್ತರಿಗೆ ಶಾಂತರೀತಿಯಿಂದ ವರ್ತಿಸುವಂತೆ ಸೂಚನೆ ನೀಡಿದ್ದ ನರೇಂದ್ರ ಮೋದಿ ಖುದ್ದಾಗಿ ಎಸ್​ಐಟಿ ಕಚೇರಿಗೆ ಹಾಜರಾಗಿದ್ದರು. ನಿರಂತರವಾಗಿ 9 ಗಂಟೆಗಳ ಕಾಲ ಆಗ ನರೇಂದ್ರ ಮೋದಿ ಅವರನ್ನು ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಎಸ್​ಐಟಿ ಸಮನ್ಸ್​ ಜಾರಿ ಮಾಡಿದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ನರೇಂದ್ರ ಮೋದಿ “ಭಾರತೀಯ ಕಾನೂನು ಮತ್ತು ಸಂವಿಧಾನವು ಸರ್ವೋಚ್ಚವಾಗಿದೆ. ಒಬ್ಬ ನಾಗರಿಕನಾಗಿ ಮತ್ತು ಮುಖ್ಯಮಂತ್ರಿಯಾಗಿ ನಾನು ಸಂವಿಧಾನ ಮತ್ತು ಕಾನೂನಿಗೆ ಬದ್ಧನಾಗಿದ್ದೇನೆ. ಯಾರೂ ಕಾನೂನಿಗಿಂತ ಮೇಲಲ್ಲ. ನಾನು ಎಸ್​ಐಟಿ ವಿಚಾರಣೆಗೆ ಸಹಕರಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: National Herald Case: ನ್ಯಾಷನಲ್ ಹೆರಾಲ್ಡ್​ ಪ್ರಕರಣ; ಜೂ. 13ಕ್ಕೆ ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿಗೆ ಸಮನ್ಸ್​ ಜಾರಿ

ಬಳಿಕ 2012ರ ಫೆಬ್ರವರಿ ತಿಂಗಳಲ್ಲಿ ಗುಜರಾತ್​ ಗಲಭೆ ಪ್ರಕರಣದಲ್ಲಿ SIT ಮುಚ್ಚಿದ ವರದಿಯನ್ನು ಸಲ್ಲಿಸಿತ್ತು. ಅಲ್ಲದೆ, ನರೇಂದ್ರ ಮೋದಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ 63 ಇತರರಿಗೆ ಕ್ಲೀನ್ ಚಿಟ್ ನೀಡಿತ್ತು. ಅವರ ವಿರುದ್ಧ “ಯಾವುದೇ ಪ್ರಾಸಿಕ್ಯೂಟಬಲ್ ಸಾಕ್ಷ್ಯಗಳಿಲ್ಲ” ಎಂದು ವರದಿಯಲ್ಲಿ ಹೇಳಲಾಗಿತ್ತು.

2002ರಲ್ಲಿ ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿ 59 ಜನರನ್ನು ಬಲಿತೆಗೆದುಕೊಂಡ ನಂತರ ಗುಜರಾತ್‌ನಲ್ಲಿ ಸಂಭವಿಸಿದ 2002ರ ವ್ಯಾಪಕ ಹಿಂಸಾಚಾರದಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಭಾಗಿಯಾಗಿದ್ದರು ಎಂದು ಗಲಭೆಯಲ್ಲಿ ಕೊಲ್ಲಲ್ಪಟ್ಟ ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಹೆಂಡತಿ ಝಕಿಯಾ ಜಾಫ್ರಿ ಅವರ ದೂರಿನ ಮೇರೆಗೆ ನರೇಂದ್ರ ಮೋದಿಯನ್ನು ತನಿಖೆ ನಡೆಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Thu, 9 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ